ಇಂದು ಬೆಳಿಗ್ಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ನಿಮಿತ್ತ ಮಾಧ್ಯಮ ಕಂಡರೆ ಯಾರಿಗೆ ಭಯವಿಲ್ಲ ಕುರಿತು ಕಾರ್ಯಕ್ರಮಕ್ಕೆ ಖ್ಯಾತ ನಟ ರಮೇಶ್ ಅರವಿಂದ್, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಶ್ರೀ ಜಗದೀಶ್ ರವರು ಹಾಗೂ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾಶಿವ ಶೆಣೈ, ಶಿವಾನಂದ ತಗಡೂರು, ಮತ್ತು ಅಕಾಡೆಮಿ ಕಾರ್ಯದರ್ಶಿಯಾದ ರೂಪ ರವರು ಹಲವಾರು ಹಿರಿಯ ಪತ್ರಕರ್ತರು, ಅಕಾಡೆಮಿಯ ಮಾಜಿ ಅಧ್ಯಕ್ಷರುಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.