ವಲಸೆ ಕಾರ್ಮಿಕರ ವಸತಿ ಕಟ್ಟಡ  ಕಾಮಗಾರಿ ಪರಿಶೀಲಿಸಿದ ಸಚಿವ  ಲಾಡ್‌

ವಲಸೆ ಕಾರ್ಮಿಕರ ವಸತಿ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಚಿವ ಲಾಡ್

ಬೆಳಗಾವಿ, : ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌  ಅವರು, ಬೆಳಗಾವಿ ನಗರ ಸಮೀಪದ ಬಿ.ಕೆ.ಕಂಗ್ರಾಳಿ ಗ್ರಾಮದಲ್ಲಿ ವಲಸೆ ಕಾರ್ಮಿಕರಿಗಾಗಿ ನಿರ್ಮಿಸಲಾಗುತ್ತಿರುವ ವಸತಿ ಕಟ್ಟಡ (ಟ್ರಾನ್ಸಿಟ್‌ ಅಕಾಮಡೇಷನ್‌) ಕಾಮಗಾರಿಯನ್ನು ಪರಿಶೀಲಿಸಿದರು.

ಸಚಿವರೊಂದಿಗೆ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಮೊಹಮ್ಮದ್ ಮೊಹಿಸೀನ್, ಕಾರ್ಮಿಕ ಆಯುಕ್ತರಾದ ಗೋಪಾಲಕೃಷ್ಣ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಸಿಇಒ ಮತ್ತು ಕಾರ್ಯದರ್ಶಿ ಭಾರತಿ, ಜಂಟಿ ಕಾರ್ಮಿಕ ಆಯುಕ್ತರಾದ ಡಾ ಮಂಜುನಾಥ್,  ಶ್ರೀನಿವಾಸ್, ಕಾರಾವಿ ನಿರ್ದೇಶಕ ವರದರಾಜು ಮತ್ತಿತರರು ಹಾಜರಿದ್ದರು.

ಇಎಸ್‌ ಐ ಆಸ್ಪತ್ರೆಗೆ ಭೇಟಿ

ಬಳಿಕ ಸಚಿವ ಸಂತೋಷ್‌ ಲಾಡ್‌, ಬೆಳಗಾವಿಯ ಅಶೋಕ ನಗರದಲ್ಲಿರುವ ಕಾರ್ಮಿಕರ ರಾಜ್ಯ ವಿಮಾ  ಆಸ್ಪತ್ರೆಗೆ (ಇಎಸ್‌ಐ) ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ  ವೈದ್ಯರು, ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿದರು.

ರೋಗಿಗಳ ಕುಂದು- ಕೊರತೆಗಳನ್ನೂ ವಿಚಾರಿಸಿದರು. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಲು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಕಾರ್ಮಿಕ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share this :