by gadi@dmin | Sep 27, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು
ಸಿಎಂ ಸಿದ್ದರಾಮಯ್ಯರಿಗೆ ಕೆಯುಡಬ್ಲೂಜೆ ಅಭಿನಂದನೆ
ಬೆಂಗಳೂರು: 27 ದಶಕಗಳ ಕನಸಾಗಿದ್ದ ಗ್ರಾಮೀಣ ಬಸ್ ಪಾಸ್ ಸೌಲಭ್ಯವನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು
ಗೃಹ ಕಚೇರಿ ಕಾವೇರಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ
ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಅಭಿನಂದನೆ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸ್ ಪಾಸ್ ಬಗ್ಗೆ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮಾತು ಕೊಟ್ಟಿದ್ದೆ.
ಆ ಬೇಡಿಕೆ ಈಡೇರಿಸಿ ಜಾರಿಗೆ ನೀಡಿದ್ದೇನೆ. ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.
ನುಡಿದಂತೆ ನಡೆದು ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಘಟಕದ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್,
ಟಿವಿ9 ರಾಜಕೀಯ ವಿಭಾಗ ಮುಖ್ಯಸ್ಥ ಪ್ರಮೋದ್ ಶಾಸ್ತ್ರಿ, ನ್ಯೂಸ್18 ರಾಜಕೀಯ ಬ್ಯೂರೋ ಮುಖ್ಯಸ್ಥ ಚಿದಾನಂದ ಪಟೇಲಯ
ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೆ.ವಿ.ಪ್ರಭಾಕರ್ ಗೆ ಸನ್ಮಾನ:
ಬಸ್ ಪಾಸ್ ಸೌಲಭ್ಯವನ್ನು ದೊರಕಿಸಿ ಕೊಡಲು ಸಹಕರಿಸಿದ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ
ಕೆ.ವಿ. ಪ್ರಭಾಕರ್ ಅವರನ್ನೂ ಕೆಯುಡಬ್ಲೂಜೆ ಸನ್ಮಾನಿಸಿತು.
by gadi@dmin | Sep 26, 2024 | Scrolling News ( Right to Left ), Top ಸುದ್ದಿಗಳು, ರಾಜ್ಯ
ಉಚಿತ ಗ್ರಾಮೀಣ ಬಸ್ ಪಾಸ್ ಜಾರಿ, ನನಸಾದ ಕನಸು
ಸಿಎಂ ಸಿದ್ದರಾಮಯ್ಯ, ಪ್ರಭಾಕರ್ ಅವರಿಗೆ ಕೆಯುಡಬ್ಲೂಜೆ ಅಭಿನಂದನೆ
ಬೆಂಗಳೂರು:26- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡಬೇಕು ಎನ್ನುವುದು ಮೂರು ದಶಕಗಳ ಹೋರಾಟ. ಈ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಆದೇಶವನ್ನು ಹೊರಡಿಸಿದ್ದು, ಅದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಅಭಿನಂದಿಸುತ್ತದೆ.
ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ಹಕ್ಕೋತ್ತಾಯ ಪರಿಗಣಿಸಿ, ಬಜೆಟ್‌ನಲ್ಲಿಯೇ ಉಚಿತ ಬಸ್ ಪಾಸ್ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಬಜೆಟ್‌ನಲ್ಲಿಯೂ ಘೋಷಣೆ ಮಾಡಿದ್ದರು. ಈಗ ಉಚಿತ ಬಸ್ ಪಾಸ್ ಸೌಲಭ್ಯ ನನಸಾಗುವಂತೆ ಮಾಡಿರುವುದು ಶ್ಲಾಘನೀಯ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ.
ಉಚಿತ ಬಸ್ ಪಾಸ್‌ಗೆ 15.66 ಕೋಟಿ ರೂ ಹಣವನ್ನು ಮೀಸಲಿರಿಸಿ ಯೋಜನೆಗೆ ಅನುಮತಿ ಪಡೆಯಲು ವಾರ್ತಾ ಇಲಾಖೆ ಮತ್ತು ಹಣಕಾಸು ಇಲಾಖೆಯಲ್ಲಿ ನಿರಂತರವಾಗಿ ಕೆಯುಡಬ್ಲೂಜೆ ಮಾಡಿದ ಹೋರಾಟದ ಫಲವಾಗಿ ಯೋಜನೆ ಸಾಕಾರಗೊಳ್ಳಲು ಸಾಧ್ಯವಾಗಿದೆ. ಇದಕ್ಕೆ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಪ್ರಯತ್ನವೂ ಮಹತ್ವದ್ದು ಎಂದು ತಗಡೂರು ತಿಳಿಸಿದ್ದಾರೆ.
ನುಡಿದಂತೆ ನಡೆದು, ಉಚಿತ ಬಸ್ ಪಾಸ್ ಜಾರಿಗೆ ಬರಲು ಕಾರಣರಾದ ಸಿಎಂ ಸಿದ್ದರಾಮಯ್ಯ, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಸೇರಿದಂತೆ ಸಹಕಾರ ಕೊಟ್ಟ ಎಲ್ಲರಿಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೃತಜ್ಞತೆಗಳು ಸಲ್ಲುತ್ತವೆ ಎಂದು ಅವರು ತಿಳಿಸಿದ್ದಾರೆ.
ಸರಳೀಕರಣ ಅಗತ್ಯ:
ಯೋಜನೆ ಮೊದಲು ರೂಪುಗೊಂಡು ಜಾರಿಗೆ ಬರಲಿ ಎನ್ನುವುದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮೊದಲ ಆದ್ಯತೆ ಆಗಿತ್ತು. ನಿಯಮಾವಳಿಗಳಲ್ಲಿ ಒಂದಿಷ್ಟು ಕಠಿಣ ಷರತ್ತುಗಳಿರುವುದು ಗಮನಕ್ಕೆ ಬಂದಿದೆ. ಕಾರ್ಯ ನಿರತ ಪತ್ರಕರ್ತರಿಗೆ ಎಲ್ಲರಿಗೂ ಉಚಿತ ಬಸ್ ಪಾಸ್ ಸಿಗಬೇಕು ಎನ್ನುವ ನಿಟ್ಟಿನಲ್ಲಿ ನಿಯಮಾವಳಿ ಸರಳೀಕರಣಕ್ಕೆ ಸಂಘವು ಸರ್ಕಾರದ ಗಮನಕ್ಕೆ ತಂದು ಸರಿಪಡಿಸಲು ಕ್ರಮ ಕೈಗೊಳ್ಳಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
by gadi@dmin | Sep 26, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ತಂತ್ರಜ್ನಾನ
ವಿಜ್ಞಾನಿಗಳ ಸಾಧನೆ ಯುವ ಪೀಳಿಗೆಗೆ ಆದರ್ಶ: ಸಿಎಂ
ವಿಜ್ಞಾನ-ತಂತ್ರಜ್ಞಾನದಲ್ಲಿ ಯುವ ಪೀಳಿಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲು ಅನುಕೂಲ: ಸಾಧಕರಿಗೆ ಮೆಚ್ಚುಗೆ ಸೂಚಿಸಿದ ಸಿಎಂ
ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ: ಸಿ.ಎಂ
ಬೆಂಗಳೂರು ಸೆ 26: ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಭಾರತೀಯ ವಿಜ್ಞಾನ ಮಂದಿರ ಸಂಸ್ಥೆಯ (IISC) ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ 2022 ಮತ್ತು 2023 ನೇ ಸಾಲಿನ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.
ಪ್ರಶಸ್ತಿ ಪುರಸ್ಕೃತ ವಿಜ್ಞಾನಿಗಳ ಸಾಧನೆ ಯುವ ಪೀಳಿಗೆಗೆ ಆದರ್ಶ. ಇವರ ಸಾಧನೆ ವಿಜ್ಞಾನ-ತಂತ್ರಜ್ಞಾನದಲ್ಲಿ ಯುವ ಪೀಳಿಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲು ಅನುಕೂಲ ಆಗುತ್ತದೆ ಎಂದು ಶ್ಲಾಘಿಸಿದರು.
ಸಿ.ಎನ್.ರಾವ್ ಅವರ ಸಾಧನೆ ಇಡಿ ಮನುಷ್ಯ ಕುಲದ ಹೆಮ್ಮೆ. ವಿಜ್ಞಾನದ ಬೆಳವಣಿಗೆಗೆ ಇವರ ತುಡಿತ ಶ್ಲಾಘನೀಯ. ಕರ್ನಾಟಕ ರಾಜ್ಯ ವಿಜ್ಞಾನ-ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ನಂಬರ್ ಒನ್ ಇದ್ದೇವೆ. ಈ ವಿಜ್ಞಾನ ತಂತ್ರಜ್ಞಾನದ ಫಲ ಜನ ಸಾಮಾನ್ಯರಿಗೆ ತಲುಪಬೇಕು ಎಂದು ಆಶಿಸಿದರು.
ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಆಗಿದೆ ಎಂದರೆ ಇದರಲ್ಲಿ ಹಲವು ವಿಜ್ಞಾನಿಗಳ, ತಂತ್ರಜ್ಞರ ಕೊಡುಗೆ ಇದೆ ಎಂದರು.
ವಿಜ್ಞಾನದ ಆಸಕ್ತಿ ಹೆಚ್ಚಿ, ವಿಜ್ಞಾನಿಗಳ ಸಂಖ್ಯೆ ಹೆಚ್ಚಾದರೆ ದೇಶದ ಬೆಳವಣಿಗೆ ಸಾಧ್ಯ. ಸಮಾಜದ ತಾರತಮ್ಯ ಅಳಿಯಬೇಕಾದರೆ ಎಲ್ಲಾ ಜಾತಿ, ಧರ್ಮ, ವರ್ಗಗಳಿಗೆ ಸಮಾನ ಅವಕಾಶಗಳು ಸಿಗುವಂತಾಗಬೇಕು ಎಂದರು.
ಗ್ರಾಮೀಣ ಭಾಗದ ಹಲವರು ವಿಜ್ಞಾನಿಗಳಾಗಿ ಪ್ರಶಸ್ತಿ ಪುರಸ್ಕೃತರಾಗಿರುವುದು ಖುಷಿಯ ವಿಚಾರ.
ಪ್ರತಿಭೆ ಅನುವಂಶೀಯ ಅಲ್ಲ. ಅವಕಾಶ ಮತ್ತು ನಿರಂತರ ಶ್ರಮದಿಂದ ಪ್ರತಿಭೆ ವಿಸ್ತಾರಗೊಳ್ಳುತ್ತದೆ ಎಂದರು.
ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್ , ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್.ಎಸ್.ಬೋಸರಾಜು ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
by gadi@dmin | Sep 26, 2024 | Scrolling News ( Right to Left ), Top ಸುದ್ದಿಗಳು
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸರ್ಕಾರಿ ಆದೇಶ
ಬೆಂಗಳೂರು, 26-, ಕಳೆದ 2 ದಶಕಗಳ ಬೇಡಿಕೆಯಾಗಿದ್ದ ಗ್ರಾಮೀಣ ಭಾಗದಲ್ಲಿರುವ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ.
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ. ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.
by gadi@dmin | Sep 21, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು
ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿದ ಸಿದ್ದರಾಮಯ್ಯ
ಮೈಸೂರು, 21-ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.