ಕ್ರೀಡಾಪಟುಗಳು ಮತ್ತು ತರಬೇತುದಾರರಿಗೆ ನಗದು ಪುರಸ್ಕಾರ

ಬೆಂಗಳೂರು , ಅಕ್ಟೋಬರ್ 18 : ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಗೃಹ ಕಛೇರಿ ಕೃಷಾúದಲ್ಲಿ ಚೀನಾ ದೇಶದ ಹಾಂಗ್ಝೌನಲ್ಲಿ ನಡೆದ 19ನೇ ಏಷಿಯನ್ ಗೇಮ್ಸ್ನಲ್ಲಿ ಪದಕ ವಿಜೇತರಾದ ಕರ್ನಾಟಕದ ಕ್ರೀಡಾಪಟುಗಳು ಮತ್ತು ತರಬೇತುದಾರರಿಗೆ ನಗದು ಪುರಸ್ಕಾರ ನೀಡಿದ ಸಂದರ್ಭ.

ಎಚ್ ಡಿ ದೇವೆಗೌಡ, ಇಸ್ರೋದ ಸೋಮನಾತ್  ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ

ಎಚ್ ಡಿ ದೇವೆಗೌಡ, ಇಸ್ರೋದ ಸೋಮನಾತ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ

ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ, ಇಸ್ರೋದ ಸೋಮನಾತ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದ ರಾಜ್ಯಪಾಲರು
ಬೆಂಗಳೂರು 17.10.2023: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಬೆಂಗಳೂರು ವಿಶ್ವವಿದ್ಯಾಲಯ ಗೌರವಾನ್ವಿತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೌಗೂ ಹಾಗೂ ವಿಜ್ಞಾನಿ ಮತ್ತು ಇಸ್ರೋ ಅಧ್ಯಕ್ಷರಾದ ಶ್ರೀ ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಘಟಿಕೋತ್ಸವವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮವಾದ ಕೆಲಸಗಳನ್ನು ಮಾಡಿ ದೇಶದ ಪ್ರಗತಿಗೆ ಗಣನೀಯ ಕೊಡುಗೆ ನೀಡಿದ ಭಾರತದ ಮಾಜಿ ಪ್ರಧಾನಿ ಶ್ರೀ ದೇವೇಗೌಡರನ್ನು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪದವಿಯೊಂದಿಗೆ ಗೌರವಿಸಿರುವುದು ಸಂತೋಷದ ವಿಷಯ. ವಿಜ್ಞಾನಿ ಮತ್ತು ಇಸ್ರೋ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸೋಮನಾಥ್ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ಕಾರಣಾಂತರಗಳಿಂದ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ಸಮಾಜಕ್ಕಾಗಿ ಈ ಇಬ್ಬರು ಮಹನೀಯರ ಕೊಡುಗೆ ನಿರಂತರವಾಗಿರಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ಕ್ರೀಡಾಪಟುಗಳಿಗೆ  ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ ಭರವಸೆ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ ಭರವಸೆ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ ಭರವಸೆ
ಬೆಂಗಳೂರು, ಅಕ್ಟೋಬರ್ 18- ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.
ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ಅವರು ವಿವರಿಸಿದರು.
ಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ನೀವು ಅದ್ಭುತ ಸಾಧನೆ ಮಾಡಿದ್ದೀರಿ. ಓಲಿಂಪಿಕ್ಸ್ನಲ್ಲಿಯೂ ಪದಕ ಗೆಲ್ಲುವ ಪ್ರಯತ್ನ ಮಾಡಿ ಎಂದು ಶುಭ ಹಾರೈಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಪದಕ ವಿಜೇತರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಏಷ್ಯನ್ ಗೇಮ್ಸ್ನ ಪದಕ ವಿಜೇತ ರಾಜ್ಯದ ಕ್ರೀಡಾಪಟುಗಳಾದ ರಾಜೇಶ್ವರಿ ಗಾಯಕ್ವಾಡ್ (ಕ್ರಿಕೆಟ್- ಚಿನ್ನ), ರೋಹನ್ ಬೋಪಣ್ಣ (ಟೆನ್ನಿಸ್- ಮಿಕ್ಸ್ಡ್ ಡಬಲ್ಸ್- ಚಿನ್ನ), ಮಿಜೋ ಚಾಕೋ ಕುರಿಯನ್, ನಿಹಾಲ್ ಜೋಯಲ್ (ಅಥ್ಲೆಟಿಕ್ಸ್ ಪುರುಷರ 4*400 ಮೀ. ರಿಲೇ -ಕಾಯ್ಡಿರಿಸಿದ ಕ್ರೀಡಾಪಟು- ಚಿನ್ನ), ಮಿಥುನ್ ಮಂಜುನಾಥ್ (ಪುರುಷರ ಬ್ಯಾಡ್ಮಿಂಟನ್- ಬೆಳ್ಳಿ), ಸಾಯಿ ಪ್ರತೀಕ್ (ಪುರುಷರ ಬ್ಯಾಡ್ಮಿಂಟನ್ ಬೆಳ್ಳಿ), ದಿವ್ಯಾ (ಶೂಟಿಂಗ್- ಎರಡು ಬೆಳ್ಳಿ ಪದಕ), ಹಾಗೂ ತರಬೇತುದಾರರಾದ ವಿ.ತೇಜಸ್ವಿನಿ ಬಾಯಿ (ಕಬಡ್ಡಿ- ಚಿನ್ನ), ಅಂಕಿತ ಬಿ.ಎಸ್. (ಹಾಕಿ- ಕಂಚು), ಸಿ.ಎ.ಕುಟ್ಟಪ್ಪ (ಬಾಕ್ಸಿಂಗ್ ಮುಖ್ಯ ತರಬೇತುದಾರರು- 1 ಬೆಳ್ಳಿ ಮತ್ತು 4 ಕಂಚು) ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ಸನ್ಮಾನ ಮಾಡಿ, ನಗದು ಪುರಸ್ಕಾರ ಪ್ರದಾನ ಮಾಡಿದರು.