ತಲಕಾಡು ಶ್ರೀಮಠದಿಂದ ಕೆ ವಿ ಪ್ರಭಾಕರ್ ಗೆ ಸನ್ಮಾನ
ಬೆಂಗಳೂರು, ತಲಕಾಡು ಹಸ್ತಿಕೇರಿ ಮಠದ
ಡಾ. ಸಿದ್ದ ಮಲ್ಲಿಕಾರ್ಜುನ ಸ್ವಾಮಿಗಳು ಗುರುವಾರ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ
ಕೆ. ವಿ. ಪ್ರಭಾಕರ್ ಅವರನ್ನು ಭೇಟಿ ಮಾಡಿ ಶ್ರೀ ಮಠದ ಗೌರವ ಸಲ್ಲಿಸಿದರು.
ಬೆಂಗಳೂರು, ತಲಕಾಡು ಹಸ್ತಿಕೇರಿ ಮಠದ
ಡಾ. ಸಿದ್ದ ಮಲ್ಲಿಕಾರ್ಜುನ ಸ್ವಾಮಿಗಳು ಗುರುವಾರ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ
ಕೆ. ವಿ. ಪ್ರಭಾಕರ್ ಅವರನ್ನು ಭೇಟಿ ಮಾಡಿ ಶ್ರೀ ಮಠದ ಗೌರವ ಸಲ್ಲಿಸಿದರು.
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ:
ಸರ್ಕಾರದಿಂದ ವರ್ಷವಿಡೀ ಕರ್ನಾಟಕ ಸಂಭ್ರಮ
ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿತವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ 01 ನವೆಂಬರ್ 2023 ರಿಂದ 01 ನವೆಂಬರ್ 2024 ರವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಕರ್ನಾಟಕ ಎಂದು ನಾಮಕರಣ ಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಲು ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳುವುದು, ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿಸಬೇಕು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ದಾಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಸ್ಮಾರಕ ಅಭಿವೃದ್ಧಿ , ಜೀರ್ಣೋದ್ಧಾರ
ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಿನಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ, ಧಾರವಾಡದ ದಿ: ಅದರಗುಂಚಿ ಶಂಕರಗೌಡ , ಬಳ್ಳಾರಿಯ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ದಿ: ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಅಭಿವೃದ್ಧಿ , ಜೀರ್ಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಯಿತು.
ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ
ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ, ಲೇಸರ್ ಶೋ/ ಧ್ವನಿ, ಬೆಳಕು ಕಾರ್ಯಕ್ರಮ, ಕರ್ನಾಟಕಕ್ಕೆ ಕೊಡುಗೆ ನೀಡಿದ 50 ಮಹಿಳೆಯರಿಗೆ ಪ್ರಶಸ್ತಿ ನೀಡುವುದು ಹಾಗೂ ನವೆಂಬರ್ 2024 ಕ್ಕೆ ಸಮಾರೋಪ ಸಮಾರಂಭ ಕಾರ್ಯಕ್ರಮ ಆಯೋಜಿಸುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಲಾಂಛನ
ಕರ್ನಾಟಕ ಸಂಭ್ರಮ – 50 ಕಾರ್ಯಕ್ರಮದ ಲಾಂಛನವನ್ನು ಅಕ್ಟೋಬರ್ 17 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಯಿತು.
ಕಾಗಿನೆಲೆ ಶ್ರೀಕ್ಷೇತ್ರಕ್ಕೆ ಗುಜರಾತ್ ಸ್ವಾಮೀಜಿಗಳ ಭೇಟಿ
ಹಾವೇರಿ, ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗುಜರಾತಿನ ಸ್ವಾಮೀಜಿಯವರು ಇಂದು ಶ್ರೀ ಕನಕಗುರುಪೀಠ ಶ್ರೀಕ್ಷೇತ್ರ ಕಾಗಿನೆಲೆಗೆ ಭೇಟಿ ನೀಡಿ ಶ್ರೀ ಕನಕದಾಸರ ಅಧಿಷ್ಠಾನದ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಗಿನೆಲೆ ಶ್ರೀ ಕ್ಷೇತ್ರದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳು ಅವರಿಗೆ ಶ್ರೀಮಠದ ಗೌರವ ನೀಡಿ ಸತ್ಕರಿಸಿದರು.
ಸಾಗರದಾಚೆ ಕನ್ನಡ ಡಿಂಡಿಮ
ಬಹರೇನ್ ಕನ್ನಡ ಭವನದ ಮೊಗಸಾಲೆ ನಾಳೆ (ಅ.6) ಲೋಕಾರ್ಪಣೆ
ಮನಾಮ (ಬಹರೇನ್): ಬಹರೇನ್ ಕನ್ನಡ ಭವನದಲ್ಲಿ ಹೊಸದಾಗಿ ನಿರ್ಮಿಸಿರುವ ಮೊಗಸಾಲೆಯ (ಹಜಾರ) ಲೋಕಾರ್ಪಣೆ ಶುಕ್ರವಾರ (ನಾಳೆ) ನಡೆಯಲಿದೆ.
ಅಕ್ಟೋಬರ್ 6ರ ಬೆಳಿಗ್ಗೆ 10ಕ್ಕೆ ಇಲ್ಲಿನ “ಕನ್ನಡ ಭವನ”ದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ‘ರೊನಾಲ್ಡ್ ಕೊಲಾಸೊ ಮೊಗಸಾಲೆ’ಯ (ಲೌಂಜ್) ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಬಹರೇನ್ ಕನ್ನಡ ಸಂಘದ ಅಧ್ಯಕ್ಷ ಅಮರನಾಥ ರೈ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದೇ ದಿನ ಸಂಜೆ ಕನ್ನಡ ಸಂಘದ ಹೊಸ ಆಡಳಿತ ಮಂಡಳಿಯ ವಿದ್ಯುಕ್ತ ಪದಗ್ರಹಣ ಖಾಸಗಿ ಹೋಟೆಲ್ ನಲ್ಲಿ ನಡೆಯಲಿದ್ದು, ಇದರ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಬಹರೇನ್ ನಲ್ಲಿನ ಭಾರತೀಯ ರಾಯಭಾರಿ ವಿನೋದ್ ಕೆ. ಜೇಕಬ್ ಮತ್ತು ಜಿ.ಪರಮೇಶ್ವರ ಈ ಕಾರ್ಯಕ್ರಮದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಶಾಸಕರಾದ ರವಿಕುಮಾರ್ ಗೌಡ, ಎಐಸಿಸಿ ಕಾರ್ಯದರ್ಶಿ ಡಾ.ಆರತಿ ಕೃಷ್ಣ, ಉದ್ಯಮಿ ಹಾಗೂ ಸಮಾಜ ಸೇವಕ ಡಾ. ರೊನಾಲ್ಡ್ ಕೊಲಾಸೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬಹರೇನ್ ಕನ್ನಡ ಭವನ ನಿರ್ಮಾಣಕ್ಕೆ ಡಾ. ರೊನಾಲ್ಡ್ ಕೊಲಾಸೊ ಅವರು ದೊಡ್ಡ ಮೊತ್ತದ ಕೊಡುಗೆ ನೀಡಿರುವುದನ್ನು ಗೌರವಿಸಿ ಇಲ್ಲಿನ ಮೊಗಸಾಲೆಗೆ ಅವರ ಹೆಸರನ್ನು ಇರಿಸಲಾಗಿದೆ.