ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್
ದಾವಣಗೆರೆ ಆ: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ 38 ನೇ ಪತ್ರಕರ್ತರ ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯನ್ನು ಉದ್ಘಾಟಿಸಿ, ಸಮ್ಮೇಳನದ ವೆಬ್ ಸೈಟ್ ಆರಂಭಿಸಿ ಮಾತನಾಡಿದರು.
ಮೊದಲೆಲ್ಲಾ ಪತ್ರಕರ್ತರ ಸಮ್ಮೇಳನಗಳು ನಡೆಯುವಾಗ ಸರ್ಕಾರದ ನೆರವು ಸೂಕ್ತವಾಗಿ ದೊರೆಯುತ್ತಿರಲಿಲ್ಲ. 2013 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿ ದೊಡ್ಡ ಮಟ್ಟದಲ್ಲಿ ಸ್ಪಂದಿಸಿ 15 ಲಕ್ಷ ರೂ ನೆರವು ನೀಡಿದ್ದರು. 2023 ರ ಈ ಸಮ್ಮೇಳನದಲ್ಲೂ ಅಷ್ಟೆ ದೊಡ್ಡ ಮಟ್ಟದ ನೆರವು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಪತ್ರಿಕೋದ್ಯಮದ ಸಾಧ್ಯತೆಗಳನ್ನು ವಿಸ್ತರಿಸುತ್ತಿರುವ ರೀತಿಯಲ್ಲೇ ಹಲವು ಸವಾಲುಗಳನ್ನು ಸೃಷ್ಟಿಸುತ್ತಿದೆ. ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಬೇಕಾದ ಸಿದ್ದತೆ ಮತ್ತು ತರಬೇತಿ ಪತ್ರಕರ್ತ ಸಮೂಹಕ್ಕೆ ದೊರಕಬೇಕಿದೆ. ಈ ಎಲ್ಲಾ ಸಂಗತಿಗಳು ಸಮ್ಮೇಳನದಲ್ಲಿ ಚರ್ಚೆ ಆಗಲಿ ಎಂದು ಆಶಿಸಿದರು.
ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಎಂ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ರುದ್ದೀನ್, ವಾರ್ತಾಧಿಕಾರಿ ಧನಂಜಯಪ್ಪ ಉಪಸ್ಥಿತರಿದ್ದರು.
ಬ್ಯುಸಿ ಕೆಲಸಗಳ ನಡುವೆ ಕ್ರಿಕೆಟ್ ಆಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್
ಧಾರವಾಡ: ಬೆಳ್ಳಂಬೆಳಿಗ್ಗೆ ಧಾರವಾಡದ ಕೆಸಿಡಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸ್ಥಳೀಯ ಆಟಗಾರರೊಂದಿಗೆ ಕ್ರಿಕೆಟ್ ಅಡಿ ಖುಷಿಪಟ್ಟರು.
ಕಾರ್ಮಿಕ ಸಚಿವರಾಗಿ ಸರ್ಕಾರದ ಹಲವಾರು ಜವಾಬ್ದಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಯುವ ಪ್ರತಿಭೆಗಳ ಜೊತೆ ಕ್ರಿಕೆಟ್ ಆಡಿದ್ದು ಬಹಳ ಖುಷಿ ನೀಡಿತು ಹಾಗೂ ಈ ಎಲ್ಲ ಮಕ್ಕಳ ಕ್ರೀಡಾ ಭವಿಷ್ಯಕ್ಕೆ ಸಚಿವ ಲಾಡ್ ಅವರು ಶುಭ ಹಾರೈಸಿದರು.
ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು – ಬಸವರಾಜ್ ಬೊಮ್ಮಾಯಿ
ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು – ಬಸವರಾಜ್ ಬೊಮ್ಮಾಯಿ
ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ.
ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ.
ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲ ಲಕ್ಷಣ ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರೆಂಟಿ ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ.
ಒಂದು ಕಡೆ ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸಾರಿಗೆ ಸಿಬ್ಬಂದಿಗೆ ಸಮರ್ಪಕವಾದ ಸಂಬಳ ನೀಡಿಲ್ಲ. 10 ಕೆಜಿ ಅಕ್ಕಿ ಗ್ಯಾರೆಂಟಿಯನ್ನು ಈಡೇರಿಸಲಾಗಿಲ್ಲ. ಕೇಂದ್ರದ ಐದು ಕೆಜಿ ಅಕ್ಕಿಯೇ ಜನರ ಸಹಾಯಕ್ಕೆ ಬಂದಿದೆ. ರಾಜ್ಯದಲ್ಲಿ ಗೃಹಲಕ್ಷ್ಮೀಯರ ಹುಡುಕಾಟ ಪೂರ್ಣಗೊಂಡಿಲ್ಲ.
ಈ ಮಧ್ಯ ಗ್ಯಾರೆಂಟಿಗಾಗಿ ಎಸ್ಸಿ ಎಸ್ಟಿ ಅಭಿವೃದ್ಧಿ ಹಣ 11 ಸಾವಿರ ಕೋಟಿ ರೂಪಾಯಿ ಬಳಕೆ ಮಾಡಿ ಎಸ್ಸಿ ಎಸ್ಟಿ ಮತ್ತು ಒಬಿಸಿ ಜನರಿಗೆ ಸರ್ಕಾರ ಮೋಸ ಮಾಡಿದೆ.
ಕಾವೇರಿ ಜಲಾನಯನ ಪ್ರದೇಶದ ರೈತರ ಮತ್ತು ಸಾರ್ವಜನಿಕರ ಹಿತ ಕಾಯಲು ವಿಫಲವಾಗಿದೆ. ನಮ್ಮ ಡ್ಯಾಮುಗಳ ಕೀಲಿಕೈಯನ್ನು ತಮಿಳುನಾಡಿಗೆ ಒಪ್ಪಿಸಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪೈಪೋಟಿ ಆಡಳಿತದ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಿದೆ. ಇದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ವಾಗಿ ಹದಗೆಟ್ಟಿದೆ ಕೊಲೆ ಸುಲಿಗೆ ಸಾಮಾನ್ಯವಾಗಿದೆ.
ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ. ಎಲ್ಲ ರಂಗದಲ್ಲಿ ವೈಫಲ್ಯವೇ ಇವರ ಸಾಧನೆ.
ಸರ್ಕಾರದ ವಿರುದ್ದ ಜನ ಸಾಮಾನ್ಯರು, ಮಾಧ್ಯಮದವರು, ಸಂಘ ಸಂಸ್ಥೆಗಳು ಧ್ವನಿ ಎತ್ರುವುದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕುವ ಪ್ರಯತ್ನ. ಇದು ಪ್ರಜಾಪ್ರಭುತ್ವ ವಿರೊಧಿ, ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಆಡಳಿತವೆಂದು ನೂರು ದಿನಗಳಲ್ಲಿ ತೋರಿಸಿಕೊಟ್ಟಿದೆ.