ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ʻಕನ್ನಡದ ಧ್ರುವತಾರೆʼ :  ವಿನೂತನ, ವಿಶಿಷ್ಟ, ಮಾದರಿ ಕಾರ್ಯಕ್ರಮ –  ನಾಡೋಜ ಡಾ. ಮಹೇಶ ಜೋಶಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ʻಕನ್ನಡದ ಧ್ರುವತಾರೆʼ : ವಿನೂತನ, ವಿಶಿಷ್ಟ, ಮಾದರಿ ಕಾರ್ಯಕ್ರಮ – ನಾಡೋಜ ಡಾ. ಮಹೇಶ ಜೋಶಿ

ಬೆಂಗಳೂರು: ʻಕನ್ನಡದ ಧ್ರುವತಾರೆʼ ಸಾಧಕರೊಂದಿಗೆ ಮಾತು-ಕತೆ ಎನ್ನುವ ವಿನೂತನ ಹಾಗೂ ವಿಶಿಷ್ಟ ಮಾದರಿ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ರೂಪಿಸಿದೆ. ಈ ಮೂಲಕ ಕನ್ನಡ ನಾಡಿನ ವಿವಿಧ ಕ್ಷೇತ್ರದಲ್ಲಿ ಅಜ್ಞಾತವಾಗಿ ಅಗಣಿತ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಲಿದೆ. ಅವರೊಂದಿಗೆ ಪರಿಷತ್ತು ಹಾಗೂ ಸಾರ್ವಜನಿಕರು ಸಂವಾದ ನಡೆಸುವ ಮೂಲಕ ಸಾಧಕರ ಅನುಭವಗಳನ್ನು ನಾಡಿನ ಜನರಿಗೆ ತಿಳಿಸುವ ಕೆಲಸಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ, ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ-ಕನ್ನಡಿಗ-ಕರ್ನಾಟಕದ ಅಭ್ಯುದಯವನ್ನು ತನ್ನ ಧ್ಯೇಯವಾಗಿ ಹೊಂದಿರುವ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತು ʻಕನ್ನಡದ ಧ್ರುವತಾರೆʼ ಎನ್ನುವ ಹೆಸರಿನಲ್ಲಿ ನಡೆಸುವ ಕಾರ್ಯಕ್ರಮ ಪರಿಷತ್ತಿನ ಮಾದರಿ ಕಾರ್ಯಕ್ರಮವಾಗಲಿದೆ. ಕನ್ನಡಿಗರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಬೆರಗು ಹುಟ್ಟಿಸುವಂತಹ ಸಾಧನೆಯನ್ನು ಮಾಡಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರ ಕುರಿತು ಮಾಹಿತಿ ಲಭ್ಯವಿರುತ್ತದೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿನ ಸಾಧಕರು ‘ಎಲೆ ಮರೆಯ ಮರ’ಗಳಂತೆ ಅಪಾರ ಸಾಧನೆಯನ್ನು ಮಾಡಿದ್ದಾರೆ. ಮಾಹಿತಿ ಇದ್ದರೂ ಸಾಧಕರನ್ನು ನೇರವಾಗಿ ನೋಡುವ ಅವರ ಜೊತೆ ಸಂವಾದ ಮಾಡುವ ಅವಕಾಶ ಸಾರ್ವಜನಿಕರಿಗೆ ಸಿಕ್ಕಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ‘ಕನ್ನಡದ ಧ್ರುವತಾರೆ’ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ರೂಪಿಸಿದೆ.
ಈ ಕಾರ್ಯಕ್ರಮವನ್ನು ಪ್ರತಿ ತಿಂಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಸಲು ತೀರ್ಮಾನಿಸಿದ್ದು, ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರೇ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾಡಿನ ಕನ್ನಡ ಮೂಲದ ಸಾಧಕರು ಪರಿಷತ್ತು ಆಯೋಜಿಸುವ ʻಕನ್ನಡದ ಧ್ರುವತಾರೆʼ ವಿಶಿಷ್ಠ ಮಾದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾರೆ. ಸಾಧಕರೊಂದಿಗೆ ಸಾರ್ವಜನಿಕರು ಸಹ ಪ್ರಶ್ನೆಗಳನ್ನು ಕೇಳುವ ಮೂಲಕ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ʻಕನ್ನಡದ ಧ್ರುವತಾರೆʼ ಕಾರ್ಯಕ್ರಮವು ಸಾಧಕರ ಮತ್ತು ಸಾರ್ವಜನಿಕರ ನಡುವೆ ಸುವರ್ಣ ಸೇತುವೆಯಾಗುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಪರಿಷತ್ತಿನ ʻಕನ್ನಡದ ಧ್ರುವತಾರೆʼ ಕಾರ್ಯಕ್ರಮಕ್ಕೆ ಮೊದಲ ಅತಿಥಿಯಾಗಿ ಖ್ಯಾತ ಕಲಾವಿದ ಶ್ರೀ ರಮೇಶ್ ಅರವಿಂದ್ ಭಾಗವಹಿಸಲಿದ್ದಾರೆ.
ಏನಾದರೂ ಹೊಸತು ಸಾಧಿಸಬೇಕೆಂಬ ಮನೋಭಾವದ ಶ್ರೀ ರಮೇಶ್ ಅರವಿಂದ ಅವರು ನಟನೆ, ನಿರೂಪಣೆ, ನಿರ್ದೇಶನ, ಸಾಹಿತ್ಯದ ಜೊತೆಗೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲೂ ಅವರು ತಮ್ಮ ಪ್ರತಿಭೆಯನ್ನು ಮೆರೆದವರು.೧೪೦ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ರಮೇಶ್ ಅರವಿಂದ್ ನಾಲ್ಕು ದಶಕಗಳಿಂದಲೂ ಕನ್ನಡದ ಪ್ರಮುಖ ನಟರಾಗಿದ್ದಾರೆ. ವಿವಿಧ ರಂಗದ ಅತಿರಥ ಮಹಾರಥರನ್ನು ಆತ್ಮೀಯವಾಗಿ ಸಂದರ್ಶಿಸಿ ಪರಿಚಯ ಮಾಡಿಕೊಡುತ್ತಿರುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮ ಮನನೀಯವಾದದ್ದು. ರಮೇಶ್ ಅರವಿಂದ್ ಉತ್ತಮ ಬರಹಗಾರರೂ ಹೌದು ಅವರು ರಚಿಸಿದ ಕೃತಿಗಳು ಅಪಾರ ಜನಪ್ರಿಯತೆಯನ್ನು ಪಡೆದಿವೆ. ಉತ್ತಮ ಭಾಷಣಕಾರರೂ ಆಗಿರುವ ರಮೇಶ್ ದೇಶ-ವಿದೇಶಗಳಲ್ಲಿ ತಮ್ಮ ಸ್ಪೂರ್ತಿಧಾಯಕ ಮಾತುಗಳಿಂದಲೂ ಕೂಡ ಪ್ರಸಿದ್ಧರು. ಇಂಥಹ ಮಹಾನ್ ಸಾಧಕರು ಕನ್ನಡ ಸಾಹಿತ್ಯ ಪರಿಷತ್ತಿನ ʻಕನ್ನಡ ಧ್ರುವತಾರೆ’ ಕಾರ್ಯಕ್ರಮದ ಮೂಲಕ ಕನ್ನಡಿಗರ ಮುಂದೆ ಬರಲಿದ್ದಾರೆ. ಈ ಸಂವಾದದಲ್ಲಿ ಎಲ್ಲ ಕನ್ನಡಿಗರು ಭಾಗವಹಿಸ ಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.x`

ರೈತರ‌ ಅನುಕೂಲಕ್ಕಾಗಿ ಏಕೀಕೃತ ಕರೆ ಕೇಂದ್ರಕ್ಕೆ ಚಾಲನೆ . ಸಚಿವ ಚಲುವರಾಯಸ್ವಾಮಿ

ರೈತರ‌ ಅನುಕೂಲಕ್ಕಾಗಿ ಏಕೀಕೃತ ಕರೆ ಕೇಂದ್ರಕ್ಕೆ ಚಾಲನೆ . ಸಚಿವ ಚಲುವರಾಯಸ್ವಾಮಿ

ಕೃಷಿಗೆ ಸಂಬಂಧಿತ ಮಾಹಿತಿ,ಸಲಹೆ ಮಾರ್ಗದರ್ಶನ‌ ಪಡೆಯಲು ಏಕೀಕೃತ ರೈತ ಕರೆ ಕೇಂದ್ರ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕೃಷಿ ಇಲಾಖೆಯ ಕೃಷಿ ಆಯುಕ್ತಾಲಯದಲ್ಲಿ ರೈತ ಕರೆ ಕೇಂದ್ರ ಉದ್ಘಾಟಿಸಿ,ನಂತರ ಸಂಗಮ ಸಭಾಂಗಣದಲ್ಲಿ 2023-24 ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಾಸ್ಟರ್ ತರಬೇತುದಾರರಿಗೆ ಏರ್ಪಡಿಸಿದ್ದ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ, ಭೀಮಾ ಪಲ್ಸ್ ತೊಗರಿ ಬೇಳೆ
ಬ್ರಾಂಡ್ ಬಿಡುಗಡೆ ಮಾಡಿ ಸಚಿವರು ಮಾತನಾಡಿದರು.
ಬೆಳೆ ,ಹವಾಮಾನ , ವಿಮೆ ,ರೈತ ವಿದ್ಯಾನಿಧಿ,ಕೃಷಿ ಸಂಜೀವಿನಿ,ಪಿ.ಎಂ ಕಿಸಾನ್,ಕೆ‌.ಕಿಸಾನ್ ,
ಬೆಳೆ ಸಮೀಕ್ಷೆ ಮತ್ತಿತರ ವಿಷಯಗಳಲ್ಲಿ ಉಪಯುಕ್ತ ಮಾಹಿತಿ , ಸಲಹೆ ಹಾಗೂ ಮಾರ್ಗದರ್ಶನಗಳನ್ನು ಸುಲಭವಾಗಿ ಒದಗಿಸುವುದು ಏಕೀಕೃತ ರೈತ ಕರೆ ಕೇಂದ್ರದ ಉದ್ದೇಶ ಎಂದರು.
ಈ ಹಿಂದೆ ವಿವಿಧ ಯೋಜನೆಗಳಿಗೆ ಇದ್ದ 8 ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಏಕೀಕೃತ ಕರೆ ಕೇಂದ್ರ ಸ್ಥಾಪಿಸಲಾಗಿದೆ
1800-425-3553 ನೂತನ ಏಕೀಕೃತ ಸಹಾಯವಾಣಿ ಕರೆ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.
ಮಾಹಿತಿ ಹಾಗೂ ತಾಂತ್ರಿಕ ನೆರವಿನ ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೂ ಇಲಾಖೆ ಮುಂದಾಗಿದೆ ಇದರ ಅಂಗವಾಗಿ ಭೀಮಾ ಫಲ್ಸ್ ಎಂಬ ಬ್ರಾಡ್ ತೊಗರಿ ಬೇಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ರೈತರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಲು ಬೆಳೆ ಸಮೀಕ್ಷೆ ಕೂಡ ಪ್ರಮುಖ. ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆ ನಡೆಸುವವರಿಗೆ ತಾಂತ್ರಿಕ ಅರಿವು ಹಾಗೂ ಇತರ ಮಾಹಿತಿ ಅಗತ್ಯ . ಹೀಗಾಗಿ ರಾಜ್ಯ ಮಟ್ಟದಲ್ಲಿ ಬೆಳೆ ಸಮೀಕ್ಷೆ ಮಾಸ್ಟರ್ ತರಬೇತುದಾರರ ತರಬೇತಿ ಹಮ್ಮಿಕೊಳ್ಳಲಾಗಿದೆ.
ಎಲ್ಲಾ ಅಧಿಕಾರಿ ಸಿಬ್ಬಂದಿ ಜವಾಬ್ದಾರಿಯಿಂದ ರೈತರ ಹಿತ ಗಮ‌ದಲ್ಲಿಟ್ಟು ಸಮೀಕ್ಷೆ ನಡೆಸಬೇಕು ಎಂದು ಅವರು ಹೇಳಿದರು.
ಕಂದಾಯ ,ಕೃಷಿ ,
ತೋಟಗಾರಿಕೆ,ರೇಷ್ಮೆ ಇಲಾಖೆ ಜಂಟಿಯಾಗಿ ಬೆಳೆ ಸಮೀಕ್ಷೆ ಕಾರ್ಯದಲ್ಲಿ ತೊಡಗುತ್ತಿವೆ ಇದರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ತೊಡಗಿಸಿ ಕೊಂಡರೆ ಉತ್ತಮ ಎಂದು ಸಚಿವರು ಹೇಳಿದರು
ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಮಾತನಾಡಿ ಏಕೀಕೃತ ರೈತ ಕರೆ ಕೇಂದ್ರ ಪ್ರಾಂರಂಭ ಅತ್ಯಂತ ಮಹತ್ವದ್ದಾಗಿದೆ .
ಇದರಿಂದ ರೈತರಿಗೆ ಮಾಹಿತಿ ನೀಡುವ ಜೊತೆಗೆ ಸಮಸ್ಯೆಗಳನ್ನು ಅರಿಯಬಹುದಾಗಿದೆ
ಯಾವ ವಿಚಾರ ತಕ್ಷಣಕ್ಕೆ ಹೆಚ್ಚು ಪ್ರಮುಖ್ಯತೆ ನೀಡಬೇಕು , ಗಮನ ಹರಿಸಬೇಕು ಎಂದೂ ಅಂದಾಜಿಸಲು ಅನುಕೂಲವಾಗಲಿದೆ ಎಂದರು.
ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೃಷಿ ಅಭಿವೃದ್ಧಿ ಯೋಜನೆಗಳು ಹೆಚ್ಚು ಪ್ರಗತಿಪರವಾಗಿವೆ ಎಂದು ಅವರು ಅಭಿಪ್ರಾಯ ಪಟ್ಟರು .
ಬೆಳೆ ಸಮೀಕ್ಷೆ ತರಬೇತಿ ಕಾರ್ಯಾಗಾರವೂ ಸಹ ಅತ್ಯಂತ ಮಹತ್ವವಾದ್ದು ರೈತರ ಹಿತ ಸಂರಕ್ಷಣೆಗೆ ಅನುಕೂಲಕರ ಹಾಗೂ ಇಲಾಖೆಗಳ ನಡುವಿನ ಸಮಮ್ವಯತೆಗೂ ಸಹಕಾರಿ ಎಂದು ಪ್ರಧಾನ ಕಾರ್ಯದರ್ಶಿ ವಿ ಅನ್ಬು ಕುಮಾರ್ ಹೇಳಿದರು.
ರೈತರ ಉತ್ಪನ್ನ ಗಳ ಮೌಲ್ಯ ವರ್ಧನೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಸುಧಾರಣೆ ಮುಖ್ಯ ಆ ನಿಟ್ಟಿನಲ್ಲಿ ಈಗಾಗಗಲೇ ಇಲಾಖೆ ಕ್ರಮ ವಹಿಸುತ್ತಿರುವುದು ಅಭಿನಂದನಾರ್ಹ ಎಂದರು .
ಕೃಷಿ ಇಲಾಖೆ ಆಯುಕ್ತರಾದ ವೈ ಎಸ್ ಪಾಟೀಲ್ ಆಶಯ ನುಡಿಗಳನ್ನಾಡಿದರು. ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಿ.ಎಸ್. ರಮೇಶ್,ರೇಷ್ಮೆ ಅಭಿವೃದ್ಧಿ ಆಯುಕ್ತರಾದ ರಾಜೇಶ್ ಗೌಡ ಎಂ.ಬಿ , ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ನಿರ್ದೆಶಕರಾದ ಮಾಧುರಾಮ್ ಕೃಷಿ ಇಲಾಖೆ ನಿರ್ದೇಶಕರಾದ ಪುತ್ರ ,ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಮತ್ತಿತರರು ಹಾಜರಿದ್ದರು

ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ  “77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ”ವನ್ನು ನೆರವೇರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ  ಸಂದೇಶವನ್ನು ನೀಡಿದರು.

ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ “77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ”ವನ್ನು ನೆರವೇರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು.