by gadi@dmin | Sep 21, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ಕನ್ನಡ ನಾಡು ನುಡಿ
ನಾಡಿನ ವಿವಿಧ ಕಲಾವಿದರಿಗೆ ‘ಪಿಆರ್ಟಿ ಕಲಾ ಪ್ರಶಸ್ತಿ ಪುರಸ್ಕಾರ.
ಮೈಸೂರು,20 ಪಿ.ಆರ್. ತಿಪ್ಪೇಸ್ವಾಮಿ ಆಧ್ಯಯನ ಪೀಠ ಪುನಶ್ಚೇತನ ಸೇರಿದಂತೆ ಇನ್ನಿತರೆ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಆಯೋಜಿಸಿದ್ದ ಪಿ.ಆರ್.ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವದಲ್ಲಿ ಕಲಾವಿದರನ್ನು ಗೌರವಿಸಿದ ಬಳಿಕ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದಿಂದ ಸಲ್ಲಿಸಲಾದ ಮನವಿ ಸ್ವೀಕರಿಸಿದ ಅವರು ಭರವಸೆ ನೀಡಿದರು.
ಚಿತ್ರಕಲಾವಿದ, ಜಾನಪದ ಜಂಗಮ, ಲೇಖಕ ಪಿ.ಆರ್. ತಿಪ್ಪೇಸ್ವಾಮಿ ಅವರು ಈ ನಾಡು ಕಂಡ ಅಪರೂಪದ ವ್ಯಕ್ತಿ. ಹತ್ತು ಹಲವು ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರ. ಅವರ ಹೆಸರನ್ನು ಮುಂದಿನ ಪೀಳಿಗೆಗೆ ಉಳಿಸುವ ಸಲುವಾಗಿ, ತಾವು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ವಿಶ್ವವಿದ್ಯಾಲಯದಲ್ಲಿ ತಿಪ್ಪೇಸ್ವಾಮಿ ಅಧ್ಯಯನ ಪೀಠ ಅನುಷ್ಠಾನಗೊಳಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ. ದಯವಿಟ್ಟು ಅದನ್ನು ಪುನಶ್ಚತನಗೊಳಿಸಲು ಕುಲಪತಿಗೆ ಸೂಚಿಸಬೇಕೆಂದು ಮನವಿ ಮಾಡಲಾಯಿತು.
ಮೈಸೂರು ವಿಶ್ವವಿದ್ಯಾಲಯದ ಜಾನಪದ ವಸ್ತು ಸಂಗ್ರಹಾಲಯ ಪಿ.ಆರ್. ತಿಪ್ಪೇಸ್ವಾಮಿ ಅವರ ಶ್ರಮದ ಫಲ. ದಯವಿಟ್ಟು ವಸ್ತು ಸಂಗ್ರಹಾಲಯಕ್ಕೆ ತಿಪ್ಪೇಸ್ವಾಮಿ ಅವರ ಹೆಸರನ್ನು ನಾಮಕರಣ ಮಾಡಲು ಕ್ರಮ ಕೈಗೊಳ್ಳಬೇಕು, ಬೆಂಗಳೂರಿನ ಚಿತ್ರಕಲಾ ಪರಿಷತ್ ಸಮೀಪದ ರಸ್ತೆ ಅಥವಾ ವೃತ್ತಕ್ಕೆ ಪಿ.ಆರ್. ತಿಪ್ಪೇಸ್ವಾಮಿ ಅವರ ಹೆಸರಿಡಲು ಬಿಬಿಎಂಪಿಗೆ ಸೂಚಿಸಬೇಕೆಂದು ಕೋರುತ್ತೇವೆ.
ಪಿ.ಆರ್. ತಿಪ್ಪೇಸ್ವಾಮಿ ಅವರ ಕಲಾಕೃತಿಗಳನ್ನು ಡಿಜಿಟಲೀಕರಣ ಮಾಡಿಸಲು ಸರ್ಕಾರದಿಂದ ಹೆಚ್ಚಿನ ಧನ ಸಹಾಯ ನೀಡಬೇಕು, ಪ್ರತಿಷ್ಠಾನದ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ನಿವೇಶನವೊಂದನ್ನು ಮಂಜೂರು ಮಾಡಬೇಕು, ಕಲಾವಿದರ ಮಾಸಾಶನದ ಜೊತೆಗೆ ಆರೋಗ್ಯ ವಿಮೆ ಕೊಡಬೇಕೆಂದು ಮನವಿ ಸಲ್ಲಿಸಲಾಯಿತು.
ಕಲಾವಿದ ಪಿ.ಆರ್.ತಿಪ್ಪೇಸ್ವಾಮಿ ಜನ್ಮ ಶತಮಾನೋತ್ಸವದ ಅಂಗವಾಗಿ ನಾಡಿನ ವಿವಿಧ ಕಲಾವಿದರಿಗೆ ‘ಪಿಆರ್ಟಿ ಕಲಾ ಪ್ರಶಸ್ತಿ’ ನೀಡಿ ಪುರಸ್ಕರಿಸಲಾಯಿತು.
ವಿಜಯನಗರ ಎರಡನೇ ಹಂತದಲ್ಲಿರುವ ಶ್ರೀಕಲಾನಿಕೇತನ ಸ್ಕೂಲ್ ಆಫ್ ಆರ್ಟ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿರಿಯ, ಕಿರಿಯ ಕಲಾವಿದರು ಹಾಗೂ ಕಲಾಪೋಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿದರು.
ಕಲಾವಿದರಾದ ಬೆಂಗಳೂರಿನ ಕೆ.ವಿ.ಸುಬ್ರಮಹ್ಮಣ್ಯಂ, ಎ.ಜೆ.ಕಮಲಾಕ್ಷಿ, ಮೈಸೂರಿನ ಆರ್.ಜೆ.ಸಿಂಗ್, ರಾಘವೇಂದ್ರಮೂರ್ತಿ, ಕಲಬುರ್ಗಿಯ ಡಾ.ಜಿ.ಎಸ್.ಖಂಡೇರಾವ್, ದಿಲೀಪ್ ಕುಮಾರ್ ಕಾಳೆ, ಡಾ.ಪಿ.ಪರಶುರಾಮ್, ಧಾರವಾಡದ ಎಂ.ಆರ್.ಬಾಳಿಕಾಯಿ, ಸಂಡೂರಿನ ಡಾ.ವಿ.ಟಿ.ಕಾಳೆ, ಗದಗದ ಡಾ.ಡಿ.ಎ.ಉಪಾಧ್ಯ, ಮೂಡಿಗೆರೆಯ ಅಶೋಕ್, ಚಿಕ್ಕಮಗಳೂರಿನ ಮಧು ಶಿಲ್ಪ ಅಚಾರ್ಯ, ಸಿ.ಕಣ್ಮೇಶ್, ಎಂ.ಎಸ್.ಲಿಂಗರಾಜು, ಮಂಗಳೂರಿನ ಸೈಯದ್ ಆಸಿಪ್ ಅಲಿ, ತುಮಕೂರಿನ ಎಸ್.ಎಚ್.ನಾಗರಾಜು, ಹಂಪಿಯ ಡಾ. ಮೋಹನ್ ಪಾಂಚಾಳ್, ಹಿರಿಯೂರಿನ ಜೆ.ನರಸಿಂಹರಾಜು ಅವರನ್ನು ಗೌರವಿಸಲಾಯಿತು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರು, ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ.ರಮೇಶ್, ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ, ಸಂಚಾಲಕ ರುದ್ರಣ್ಣ ಹರ್ತಿಕೋಟೆ, ಕಾರ್ಯದರ್ಶಿ ಕೆ.ಸಿ.ಮಹದೇವಶೆಟ್ಟಿ ಇತರರು ಉಪಸ್ಥಿತರಿದ್ದರು.
ಪಿ.ಆರ್.ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವ ಅಂಗವಾಗಿ ಶತಮಾನೋತ್ಸವದ ಅಂಗವಾಗಿಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಲಲಿತಕಲಾ, ಶಿಲ್ಪಕಲಾ, ಜನಾಪದ ಅಕಾಡಮಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಶ್ರೀಕಲಾನಿಕೇತನ ಸ್ಕೂಲ್ ಆಫ್ ಆರ್ಟ್, ಕದಂಬ ರಂಗ ವೇದಿಕೆ, ಚಿತ್ರವನ ರೆಸಾರ್ಟ್, ರಾಮ್ಸನ್ಸ್ ಕಲಾ ಪ್ರತಿಷ್ಠಾನದಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿತ್ರಕಲಾ ಪ್ರದರ್ಶನ ಸ್ಪರ್ಧೆ, ಪ್ರಾತ್ಯಕ್ಷಿಕೆಯೂ ಆಯೋಜಿಸಲಾಗಿತ್ತು.
by gadi@dmin | Sep 20, 2024 | Home Page - Highlights ( Red Background ), Scrolling News ( Right to Left ), ಕನ್ನಡ ನಾಡು ನುಡಿ
ಹಿರಿಯ ಸಾಹಿತಿ ಹಂ.ಪಾ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಸಪ್ಟೆಂಬರ್ 20: ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.
by gadi@dmin | Sep 20, 2024 | Home Page - Highlights ( Red Background ), ಕನ್ನಡ ನಾಡು ನುಡಿ, ನಮ್ಮ ಬೆಂಗಳೂರು
ಕನ್ನಡ ಕೈ ದೀವಿಗೆ ಪುಸ್ತಕ ಲೋಕಾರ್ಪಣೆ
ಬೆಂಗಳೂರು, 19- ಹೆಚ್‍ಎಎಲ್ ನ ಕೇಂದ್ರ ಸಂಘದಿಂದ ನಗರದಲ್ಲಿ ಗುರುವಾರದಂದು ಕನ್ನಡ ಕಾರ್ಯಕರ್ತರ ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ನಂತರ ಮತ್ತು ‘ಕನ್ನಡ ಕೈ ದೀವಿಗೆ ‘ಪುಸ್ತಕವನ್ನು ಲೋಕಾರ್ಪಣೆ ಗೊಳಿಸಿದ ಮಾನ್ಯ ಡಾ. ವೂಡೇ ಕೃಷ್ಣ, ಕನ್ನಡ ಚಿಂತಕ ರಾ. ನಂ.ಚಂದ್ರಶೇಖರ ಸಂಘದ ಅಧ್ಯಕ್ಷ ಡಿ. ರಾಜೇಶ್, ಪ್ರಧಾನ ಕಾರ್ಯದರ್ಶಿ ಕೆ.ಡಿ ದೇವರಾಜ್ ಉಪಸ್ಥಿತರಿದ್ದರು.
by Gadi Nudi | Sep 20, 2024 | ಕನ್ನಡ ನಾಡು ನುಡಿ, ಪೋಟೊ ಸುದ್ದಿ
ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿದ ಸಂತಸದ ಸಮಯ
by Gadi Nudi | Sep 20, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ಕನ್ನಡ ನಾಡು ನುಡಿ
ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
2022 ರಿಂದ 2024 ರ ವರೆಗಿನ ವಾರ್ಷಿಕ ಪ್ರಶಸ್ತಿ ವಿತರಿಸಿದ ಸಿಎಂ
ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು: ಸಿಎಂ ಸೂಚನೆ
ಬೆಂಗಳೂರು ಸೆ 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.
ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತವನ್ನು ಹೆಚ್ಚಿಸುವ ಜೊತೆಗೆ ಕಲಾವಿದರ ಮಾಸಾಶನವನ್ನು 2500 ರೂಗಳಿಂದ 3000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.
ಬಿಜೆಪಿ ಸರ್ಕಾರ ಕಲೆ ಸಂಸ್ಕೃತಿಗೆ ದ್ರೋಹ ಬಗೆದು ಪ್ರಶಸ್ತಿ ವಿತರಣೆ ನಿಲ್ಲಿಸಿತ್ತು. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ಜೀವಮಾನದ ಸಾಧನೆ ಪ್ರಶಸ್ತಿ ಪುರಸ್ಕೃತರಾದ ಡಾ.ಉಮಾಶ್ರೀ, ಪ್ರೊ.ಎಚ್.ಎಸ್.ಶಿವಪ್ರಕಾಶ್, ಕೋಟಿಗಾನಲ್ಲಿ ರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣೀದೇವಿ ಮಾಲಗತ್ತಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
by gadi@dmin | Sep 19, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ಕನ್ನಡ ನಾಡು ನುಡಿ
ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ
ಬೆಂಗಳೂರು,19
ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ
ಕನ್ನಡ ಭಾಷೆ-ಸಂಸ್ಕೃತಿ-ಸಂಗೀತ-ಸಾಹಿತ್ಯ-ಜನಪದ-ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ
ರಾಜ್ಯೋತ್ಸವ ಪ್ರಶಸ್ತಿ – 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯ ಇತರೆ ಮುಖ್ಯಾoಶಗಳು…
ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.
ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಸಾಗಿದ್ದು, ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ.
ಕರ್ನಾಟಕ ಸುವರ್ಣ ಸoಭ್ರಮ -50 ಸಮಾರೋಪ ಸಮಾರoಭ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಹ ಇದೇ ಸಂದರ್ಭದಲ್ಲಿ ಮಾಡಲಾಗುವುದು.
ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆಗೆ ಕಾಮಗಾರಿ ಪ್ರಗತಿಯಲ್ಲಿದೆ.
ಬಳ್ಳಾರಿಯಲ್ಲಿ ರಂಜಾನ್ ಸಾಬ್ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಿಸಲು ಅಂದಾಜು ವೆಚ್ಚ ಸಲ್ಲಿಸಲಾಗಿದೆ.
ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಿಸಲಾಗುತ್ತಿದೆ
50 ಸಾಧಕ ಮಹಿಳೆಯರ ಕುರಿತು 100 ಪುಟಗಳ 50ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮೂಲಕ ಮುದ್ರಿಸಲಾಗುವುದು.
ವಿಧಾನಸೌಧ ಆವರಣದಲ್ಲಿ 25ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ 1ರಂದು ಅನಾವರಣ ಮಾಡಬೇಕು.
ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿಗೆ ಗೋಕಾಕ್ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜನೆ.
ಕರ್ನಾಟಕ ಸುವರ್ಣ ಸಂಭ್ರಮ- 50ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.
ಮನೆ ಮನೆಯಲ್ಲಿ ಕನ್ನಡ ಬಾವುಟವನ್ನು ಹಾರಿಸಲು ಮನವಿ ಮಾಡಲಾಗುವುದು.
ಕರ್ನಾಟಕದ ಬಹು ಸಂಸ್ಕೃತಿ, ಸೌಹಾರ್ದ ಸಂಸ್ಕೃತಿ, ಬಹುತ್ವದ ಕುರಿತು 100 ಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡಲಾಗುವುದು.
ನಾಡಿನ ಕಲೆ, ಸಾಹಿತ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ ಕುರಿತಾದ 5 ಸಂಪುಟಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸ್ಮರಣ ಸಂಭ್ರಮ ಸಂಪುಟ ಹೊರತರಲಾಗುತ್ತಿದೆ.
ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲಾ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್‌ಆರ್‌ಟಿಸಿ ಬಸ್ ಮತ್ತಿತರ ಕಡೆಗಳಲ್ಲಿ ಪ್ರಚುರಪಡಿಸಬೇಕು.
ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಕ್ರಮಕೈಗೊಳ್ಳಬೇಕು.
ಕೊರಗ ಭಾಷೆಯಂತಹ ಸಣ್ಣ ಭಾಷೆಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳಲು ತಜ್ಞರ ಸಮಿತಿ ರಚಿಸುವಂತೆ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮನವಿ ಮಾಡಿದರು.
ಕನ್ನಡ ಮತ್ತು ಸoಸ್ಕೃತಿ ಇಲಾಖೆ ಸಚಿವ ಶಿವರಾಜ ತoಗಡಗಿ, ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಎಸ್.ಆರ್.ಉಮಾಶಂಕರ್, ಇಲಾಖಾ ಕಾರ್ಯದರ್ಶಿ ಅಜಯ ನಾಗಭೂಷಣ್, ವಿವಿಧ ಪ್ರಾಧಿಕಾರ ಹಾಗೂ ಅಕಾಡೆಮಿಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.