by gadi@dmin | Sep 6, 2023 | Top ಸುದ್ದಿಗಳು, ಕನ್ನಡ ನಾಡು ನುಡಿ, ರಾಜ್ಯ
ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಸೆ 5 : ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ “ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ” ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಾತ್ಮಗಾಂಧಿ ಅತ್ಯಂತ ಧರ್ಮನಿರಪೇಕ್ಷತೆಯಿಂದ ಬದುಕನ್ನು ಆಚರಿಸುತ್ತಿದ್ದರು. ಇದನ್ನು ಸಹಿಸಲಾಗದ ಮನಸ್ಥಿತಿ ಅವರನ್ನು ಕೊಂದು ಹಾಕಿದರು. ಗೌರಿ ಲಂಕೇಶ್ ಅವರು ಇಂದು ನಮ್ಮ ಜತೆಗಿಲ್ಲ ಆದರೆ ಅವರ ಅದಮ್ಯ ಚೇತನ ನಮ್ಮ ಜತೆಗಿದೆ ಎಂದರು.
ಮಹಾತ್ಮಗಾಂಧಿ, ಗೌರಿ ಲಂಕೇಶ್ ಮಾತ್ರವಲ್ಲ. ಯಾರ್ಯಾರು ಬಸವಾದಿ ಶರಣರು, ಅಂಬೇಡ್ಕರ್, ಬುದ್ಧರ ವಿಚಾರ ಧಾರೆಗಳನ್ನು ಆಚರಿಸುತ್ತಾ ಜಾತಿ ಅಸಮಾನತೆ, ಧರ್ಮ ಸಂಘರ್ಷವನ್ನು ವಿರೋಧಿಸುತ್ತಾರೋ ಅವರೆಲ್ಲರಿಗೂ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದಾರೆ.
ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿರುವ ಕಿಡಿಗೇಡಿಗಳು ಎಷ್ಟೇ ಪ್ರಭಲರಾಗಿದ್ದರೂ, ಅವರ ಹಿಂದೆ ಎಷ್ಟೇ ದೊಡ್ಡ ರಾಜಕೀಯ ಒತ್ತಾಸೆ ಇದ್ದರೂ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಗೌರಿಯನ್ನು ಕೊಂದ ಆರೋಪಿಗಳಿಗೆ ಶಿಕ್ಷೆ ಆದಾಗ ಮಾತ್ರ ಗೌರಿ ಆತ್ಮಕ್ಕೆ ಶಾಂತಿ ಸಿಗುತ್ತದೆ. ಪೊಲೀಸ್ ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದೇನೆ. ಸಾವಿರಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿ, 500 ಕ್ಕೂ ಹೆಚ್ವು ಸಾಕ್ಷಿಗಳನ್ನು ಪಟ್ಟಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಕೂಡ ವೇಗವಾಗಿ ನಡೆಯುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ತನಿಖಾ ತಂಡದ ವೃತ್ತಿಪರತೆ ಮತ್ತು ಶ್ರಮ ವ್ಯರ್ಥ ಆಗುವುದಿಲ್ಲ. ಆರೋಪಿಗಳಿಗೆ ಖಂಡಿತಾ ಶಿಕ್ಷೆ ಆಗುತ್ತದೆ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.
ಅಖಿಲ ಭಾರತ ರೈತ ಆಂದೋಲನದ ನಾಯಕ ರೈತ ಮುಖಂಡ ರಾಕೇಶ್ ಟಿಕಾಯತ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆತಲ್ವಾದ್, ರಾಜಕೀಯ ಕಾರ್ಯಕರ್ತೆ ಏಂಜೆಲಾ ರಂಗದ್, ಬಹುಭಾಷಾ ನಟ ಪ್ರಕಾಶ್ ರೈ, ಕೇರಳ ರಾಜ್ಯದ ಮಾಜಿ ಸಚಿವೆ ಶಾಸಕಿ ಶೈಲಜ ಟೀಚರ್, ಖ್ಯಾತ ಪತ್ರಕರ್ತೆ ಸುಪ್ರಿಯಾ ಶ್ರೀನಾಟೆ, ಮುಸ್ಲಿಂ ಒಕ್ಕೂಟದ ಮುಖಂಡರಾದ ಯಾಸಿನ್ ಮಲ್ಪೆ, ಮಾಜಿ ಸಚಿವ ಆಂಜನೇಯ ಅವರು ತಮ್ಮ ವಿಚಾರ ಮಂಡಿಸಿದರು.
by gadi@dmin | Aug 29, 2023 | Top ಸುದ್ದಿಗಳು, ಕನ್ನಡ ನಾಡು ನುಡಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಅಗಸ್ಟ್ ೩೧ ಗುರುವಾರ ಸಂಜೆ ೫.೦೦ ಗಂಟೆಗೆ ವಿವಿಧ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದೆ.
ಕನ್ನಡ ಚಳವಳಿ ವೀರಸೇನಾನಿ ಮ.ರಾಂಮೂರ್ತಿ ಪ್ರಶಸ್ತಿ, ಕನ್ನಡ ಕಾಯಕ ದತ್ತಿ ಪ್ರಶಸ್ತಿ, ಪದ್ಮಭೂಷಣ ಡಾ. ಬಿ. ಸರೋಜಾದೇವಿ ಸಾಹಿತ್ಯ ಪ್ರಶಸ್ತಿ ಹಾಗೂ ಮನೋಹರಿ ಪಾರ್ಥಸಾರಥಿ ʻಮನುಶ್ರೀʼ ದತ್ತಿ ಪ್ರಶಸ್ತಿ ಪದಾನ ಸಮಾರಭವನ್ನು ಹಮ್ಮಿಕೊಳ್ಳಲಾಗಿದೆ. ಬೇಲಿಮಠ ಮಹಾಸಂಶ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯಸಾನ್ನಿಧ್ಯವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ವಿಮರ್ಶಕರು, ಬಿ.ಎಂ.ಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಡಾ. ಪಿ.ಬಿ. ನಾರಾಯಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ಲೇಖಕಿ, ಅನುವಾದಕರಾದ ಡಾ. ವನಮಾಲಾ ವಿಶ್ವನಾಥ ಹಾಗೂ ದತ್ತಿ ದಾನಿಗಳಾದ ಪದ್ಮಭೂಷಣ ಡಾ. ಬಿ. ಸರೋಜಾದೇವಿ, ಶ್ರೀ ವ.ಚ.ಚನ್ನೇಗೌಡ, ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
೨೦೨೩ನೆಯ ಸಾಲಿನ ʻಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ಪ್ರಶಸ್ತಿʼಯನ್ನು ಕನ್ನಡ ಹೋರಾಟಗಾರರು ಹಾಗೂ ಕಲಾವಿದರೂ ಆಗಿರುವ ಬೆಂಗಳೂರಿನ ಶ್ರೀ ಜಿ. ಕೆ. ಸತ್ಯ ಅವರಿಗೆ, ೨೦೨೩ನೆಯ ಸಾಲಿನ ಕನ್ನಡ ಕಾಯಕ ಪ್ರಶಸ್ತಿಯನ್ನು ಕನ್ನಡ ಪರ ಹೋರಾಟಗಾರ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ, ಪರಿಸರ ಹೋರಾಟಗಾರ, ಕೃಷಿ ಬರಹಗಾರ ಉತ್ತರ ಕನ್ನಡ ಜಿಲ್ಲೆಯ ಶ್ರೀ ಶಿವಾನಂದ ಕಳವೆ ಮತ್ತು ರಂಗಭೂಮಿ ಕಲಾವಿದೆ ಹೆಲನ್ ಮೈಸೂರು ಅವರಿಗೆ, ೨೦೨೨ ಹಾಗೂ ೨೦೨೩ನೆಯ ಸಾಲಿನ ಪದ್ಮಭೂಷಣ ಡಾ. ಬಿ. ಸರೋಜಾದೇವಿ ಸಾಹಿತ್ಯ ಪ್ರಶಸ್ತಿಯನ್ನು ಲೇಖಕಿಯರಾದ ಮೈಸೂರಿನ ಡಾ. ಎ. ಪುಷ್ಪ ಅಯ್ಯಂಗಾರ್ ಮತ್ತು ವಿಜಯಪುರದ ಶ್ರೀಮತಿ ಜಯಲಕ್ಷ್ಮಿ ಪಾಟೀಲ್ ಅವರಿಗೆ, ೨೦೨೨ ಹಾಗೂ ೨೦೨೩ನೆಯ ಸಾಲಿನ ʻಮನೋಹರಿ ಪಾರ್ಥಸಾರಥಿ ʻಮನುಶ್ರೀʼ ಪ್ರಶಸ್ತಿʼಯನ್ನು ಲೇಖಕಿಯರಾದ ಮಂಡ್ಯದ ಶ್ರೀಮತಿ ಗುಣಸಾಗರಿ ನಾಗರಾಜ ಮತ್ತು ಚಿಕ್ಕಮಗಳೂರಿನ ಶ್ರೀಮತಿ ಡಿ. ಎನ್. ಗೀತಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.
by gadi@dmin | Aug 29, 2023 | Home Page - Highlights ( Red Background ), Scrolling News ( Right to Left ), ಕನ್ನಡ ನಾಡು ನುಡಿ
ದಸರಾ ಮಹೋತ್ಸವದ ಉದ್ಘಾಟಕರಾಗಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಆಯ್ಕೆ.ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ.ಖ್ಯಾತ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖರಿಂದ ಈ ಬಾರಿಯ ದಸರಾ ಉದ್ಘಾಟನೆ.ಚಾಮುಂಡಿ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಹೇಳಿಕೆ.
by gadi@dmin | Aug 24, 2023 | Home Page - Highlights ( Red Background ), ಕನ್ನಡ ನಾಡು ನುಡಿ, ರಾಜ್ಯ
ತಮ್ಮನ್ನು ಭೇಟಿ ಮಾಡಿದ ಸಾಹಿತಿಗಳ ನಿಯೋಗಕ್ಕೆ ಭರವಸೆ
ಬೆಂಗಳೂರು, ಆಗಸ್ಟ್ 23: ನಾಡಿನ ಅರಿವನ್ನು ವಿಸ್ತರಿಸುತ್ತಿರುವ ಹಲವಾರು ಲೇಖಕರು ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ನೀಡಿದರು.ಹಿರಿಯ ಸಾಹಿತಿ ಡಾ.ಕೆ ಮರುಳಸಿದ್ದಪ್ಪ ಅವರು ಮಾತನಾಡಿ ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು . ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ ಎಂದು ಹಲವು ಪ್ರಕರಣಗಳನ್ನು ಉದಾಹರಿಸಿದರು.
ಕುಂ.ವೀರಭದ್ರಪ್ಪ, ಡಾ:ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಅವರುಗಳಿಗೆ ಅತಿ ಹೆಚ್ಚು ಬೆದರಿಕೆಗಳು ಬಂದಿವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ, ವಾತಾವರಣ ಸೃಷ್ಟಿಯಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರಿಗೆ ಒದಗಿದ ಗತಿ ಒದಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಬೆದರಿಕೆ ಪತ್ರಗಳ ಬಗ್ಗೆ ಒಂದು ತಂಡ ರಚಿಸಿದ್ದು, ಇನ್ನಷ್ಟು ಪರಿಣಾಮಕಾರಿ ಯಾಗಿರುವ, ವೃತ್ತಿಪರವಾಗಿರುವ ಖಡಕ್ ಅಧಿಕಾರಿಗಳ ಪೊಲೀಸ್ ತಂಡವನ್ನು ರಚಿಸಬೇಕು ಎಂದರು.
ಸಾರ್ವಜನಿಕ ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಮಾತ್ರ ಸೀಮಿತಗೊಳಿಸಿದ್ದು, ಇತರೆಡೆ ಪ್ರತಿಭಟನೆ ಮಾಡಲು ಇರುವ ನಿಷೇಧವನ್ನು ತೆಗೆಯಬೇಕೆಂದು ಮನವಿ ಮಾಡಿದರು.
ಈವರೆಗೆ ಸುಮಾರು 15 ಪತ್ರಗಳು ಬಂದಿವೆ. ಈ ಸರ್ಕಾರ ಬಂದ ನಂತರ ಮೂರು ಪತ್ರಗಳು ಬಂದಿವೆ. ಒಂದೇ ರೀತಿಯ ಒಕ್ಕಣೆ ಇರುವ ಪತ್ರಗಳು ಬಂದಿವೆ ಎಂದು ಸಾಹಿತಿ ಡಾ: ವಸುಂಧರಾ ಭೂಪತಿ ತಿಳಿಸಿದರು.
ರಾಜ್ಯ ಶಿಕ್ಷಣ ನೀತಿ
ರಾಜ್ಯಕ್ಕೆ ಸೂಕ್ತವಾದ ಶಿಕ್ಷಣ ವ್ಯವಸ್ಥೆ ಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಖಾಸಗಿ ವಲಯದಲ್ಲಿ ಹೆಚ್ವಿನ ಉದ್ಯೋಗಾವಕಾಶ ಗಳಿರುವುದರಿಂದ ಹೆಚ್ಚಿನವರು ಆಂಗ್ಲ ಮಾಧ್ಯಮಕ್ಕೆ ಮೊರೆ ಹೋಗುತ್ತಾರೆ. ಇದಕ್ಕೆ ಒಂದು ಮಧ್ಯಮ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಮರುಳಸಿದ್ದಪ್ಪ ತಿಳಿಸಿದರು.
ಸೌಜನ್ಯ ಪ್ರಕರಣ
ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಸಾಹಿತಿಗಳು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ಮರುತನಿಖೆ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯಬಹುದು. ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತನಾಡಿದ್ದು, ಅವರ ಪೋಷಕರು ಮೇಲ್ಮನವಿ ಸಲ್ಲಿಸಬೇಕು ಎಂದು ವಿವರಿಸಿದರು.
ಹಿರಿಯ ಸಾಹಿತಿಗಳಾದ ಡಾ: ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ: ವಸುಂಧರಾ ಭೂಪತಿ, ಡಾ: ವಿಜಯಮ್ಮ, ದಿನೇಶ್ ಅಮೀನ್ ಮಟ್ಟು, ರುದ್ರಪ್ಪ ಹನಗವಾಡಿ, ಎಲ್.ಎನ್.ಮುಕುಂದರಾಜ್ ಸೇರಿ ಹಲವು ಲೇಖಕರು ಉಪಸ್ಥಿತರಿದ್ದರು.
by gadi@dmin | Aug 24, 2023 | Home Page - Highlights ( Red Background ), ಕನ್ನಡ ನಾಡು ನುಡಿ, ರಾಜ್ಯ
ಕಾವೇರಿ, ಮೇಕೆದಾಟು, ಮಹಾದಾಯಿ ಜಲ ವಿವಾದ: ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಮುಖಂಡರು.
ಬೆಂಗಳೂರು, ಆಗಸ್ಟ್ 23-
ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.
ಮೇಕೆದಾಟು ಯೋಜನೆ: ತಮಿಳುನಾಡಿಗೆ ಅನುಕೂಲ
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇ ಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಅಧಿಕಾರಿಗಳಿಂದ ಸಮರ್ಥ ವಾದ ಮಂಡನೆ
ಕಾವೇರಿ ವಿವಾದ ಹಳೆಯದು. ಸರ್ವೋಚ್ಛ ನ್ಯಾಯಾಲಯ ನಮಗೆ ತೀರ್ಪು ಕೊಟ್ಟ ನಂತರ 2018 ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಅನೇಕ ಸಭೆಗಳನ್ನು ಮಾಡಿದ್ದಾರೆ. ಕಾವೇರಿ ಪ್ರಾಧಿಕಾರ 22 ಸಭೆ ಹಾಗೂ ನಿಯಂತ್ರಣ ಸಮಿತಿ 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ.
ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್ ಹಾಗೂ ಆಗಸ್ಟ್ ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯ ವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20 ನೇ ತಾರೀಖಿನ ವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ; ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.
ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ; ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ.
ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ಸ್ ನೀರಿನಿಂದ 10,000 ಕ್ಯೂಸೆಕ್ಸ್ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದೆವು. 15,000 ಕ್ಯುಸೆಕ್ಸ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆ ಎಂದು ವಿಶ್ವಾಸದಿಂದ ನುಡಿದರು.
ರಾಜಕೀಯ ಇಲ್ಲ
ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ,ಮಾಡಲೂ ಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ ಏಳು ಕೋಟಿ ಜನರ ಹಿತ ಕಾಪಾಡಬೇಕಾಗಿದೆ. ನಾವು ಆಡಳಿತ ಪಪಕ್ಷದವರಾಗಲಿ, ರಾಜ್ಯದ ಹಿತ ಕಾಪಾಡುವುದು ಎಲ್ಲರ ಜವಾಬ್ದಾರಿ. ಹಾಗಾಗಿಯೇ ರಾಜಕೀಯ ಮಾಡಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀರಾವರಿ ವಿಷಯದಲ್ಲಿ ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿ, ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರ ಸಹಕಾರ ಕೋರಿದರು.
ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್ 10 ರಂದು 1,5000 ಕ್ಯೂಸೆಕ್ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಸಂಪೂರ್ಣ ಸಹಕಾರ: ಸರ್ವಪಕ್ಷಗಳ ಬೆಂಬಲ
ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವೀರಪ್ಪ ಮೊಯಿಲಿ, ಜಗದೀಶ ಶೆಟ್ಟರ, ಹೆಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸಂಸದರಾದ ಸುಮಲತಾ, ಜಗ್ಗೇಶ, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿ.ಎಂ. ಸಿದ್ದೇಶ್ವರ, ಜಿ.ಸಿ. ಚಂದ್ರಶೇಖರ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು. ರೈತರ ಹಿತ ರಕ್ಷಣೆಗೆ ಸರ್ಕಾರದೊಂದಿಗೆ ಇರುವುದಾಗಿ ಬೆಂಬಲ ವ್ಯಕ್ತಪಡಿಸಿದರು. ಹಾಗೂ ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಮಹಾದಾಯಿ ವಿವಾದ
ಮಹಾದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಳಸಾ ಮತ್ತು ಬಂಡೂರಾ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆಗಳ ತೀರುವಳಿ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ತೀರುವಳಿ ಪಡೆಯಲೂ ಸಹ ಅರ್ಜಿ ಸಲ್ಲಿಸಲಾಗಿದೆ. ಆದರೆ ಗೋವಾ ಸರ್ಕಾರ ಈ ಕುರಿತು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಈ ಕುರಿತು ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.
ವಕೀಲರ ತಂಡ ಹಿಂದಿನ ಅನುಭವಗಳನ್ನು ಬಳಸಿ ರಾಜ್ಯದ ಹಿತದೃಷ್ಟಿಯಿಂದ ಸಮರ್ಥವಾಗಿ ವಾದ ಮಂಡಿಸುವ ಕುರಿತು ಸಲಹೆ ನೀಡಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
by gadi@dmin | Aug 20, 2023 | Top ಸುದ್ದಿಗಳು, ಕನ್ನಡ ನಾಡು ನುಡಿ
ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಇಂದಿನ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ಸರಳತೆ ಹಾಗೂ ಮಕ್ಕಳ ಬಗೆಗಿನ ಅವರ ಅಕ್ಕರೆ, ಸಂಸ್ಕೃತಿಯ ಬಗೆಗಿನ ಅವರ ಪ್ರೀತಿಗೆ ಉದಾಹರಣೆಯಾಗುವಂತಹ ಸ್ವಾರಸ್ಯಕರ ಸಂಗತಿಯೊಂದು ನಡೆಯಿತು .
ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರಿಗೆ ಗೋಕಾಕದ ಒಬ್ಬ 15 ವರ್ಷದ ಒಂಬತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಕುಮಾರಿ ಪ್ರತೀಕ್ಷ ಮಲ್ಲಿಕಾರ್ಜುನ ಕೊಕ್ಕರಿ ಅವರು ಭೇಟಿ ಮಾಡಿ ತಾನು ಬರೆದ ‘ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ‘ಎಂಬ ಕಾದಂಬರಿಯನ್ನು ಕೊಟ್ಟು ಮುಖ್ಯಮಂತ್ರಿಗಳಿಗೆ ಕೊಡಲು ಮನವಿ ಮಾಡಿದರು.
ಆಪ್ತ ಕಾರ್ಯದರ್ಶಿಗಳು ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಕೂಡಲೇ ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸಮಾರಂಭ ನಡೆಯುತ್ತಿದ್ದ ವೇದಿಕೆಯಲ್ಲಿಯೇ ವಿದ್ಯಾರ್ಥಿನಿಯನ್ನು ಕರೆದು ,ಆಕೆ ಬರೆದ ಕೃತಿಯನ್ನು ಪಡೆದುಕೊಂಡು ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಇಷ್ಟು ಚಿಕ್ಕವಯಸ್ಸಿಗೆ ಕಾದಂಬರಿ ಬರೆದ ಆಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಒಂದು ಚಿತ್ರ ತೆಗೆಯುವಂತೆಯೂ ಸೂಚಿಸಿದರು.