ರಾಷ್ಟ್ರೀಯ ಸಂವಹನ ಕಾಂಗ್ರೆಸ್ (ಎನ್.ಸಿ.ಸಿ.)ನ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿ.ಕೆ. ರವಿ ಆಯ್ಕೆ

ರಾಷ್ಟ್ರೀಯ ಸಂವಹನ ಕಾಂಗ್ರೆಸ್ (ಎನ್.ಸಿ.ಸಿ.)ನ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿ.ಕೆ. ರವಿ ಆಯ್ಕೆ

ರಾಷ್ಟ್ರೀಯ ಸಂವಹನ ಕಾಂಗ್ರೆಸ್ (ಎನ್.ಸಿ.ಸಿ.)ನ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿ.ಕೆ. ರವಿ ಆಯ್ಕೆ

ಕೊಪ್ಪಳ,  ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿಯವರು ರಾಷ್ಟ್ರೀಯ ಸಂವಹನ ಕಾಂಗ್ರೆಸ್ (National Communication Congress)ನ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.​

ದೇಶದ ಮಾಧ್ಯಮ ವಿದ್ವಾಂಸರು, ಸಂವಹನ ತಜ್ಞರು, ಮಾಧ್ಯಮ ಶಿಕ್ಷಕರು, ಸಂಶೋಧಕರು ಮತ್ತು ಭಾರತೀಯ ಮಾಧ್ಯಮದ ವೃತ್ತಿಪರರನ್ನು ಒಳಗೊಂಡಿರುವ ರಾಷ್ಟ್ರೀಯ ಸಂವಹನ ಕಾಂಗ್ರೆಸ್, ರಾಷ್ಟ್ರದಾದ್ಯಂತ ಮಾಧ್ಯಮಕ್ಕೆ ಸಂಬಂಧಿಸಿದ ವಿಚಾರ ಸಂಕಿರಣಗಳು, ಸಮ್ಮೇಳನಗಳು, ಪ್ರಕಟಣೆಗಳು, ತರಬೇತಿ ಹಾಗೂ ಸಂಶೋಧನೆಗಳನ್ನು ನಡೆಸಲಿದೆ. ​ಭಾರತೀಯ ಮಾಧ್ಯಮ ಶಿಕ್ಷಣ ಹಾಗೂ ಭಾರತೀಯ ಮಾಧ್ಯಮ ಉದ್ಯಮದ ನಡುವೆ ಸಂಪರ್ಕ ಸಾಧಿಸುವ ಸೇತುವೆಯಾಗಿ ಎನ್.ಸಿ.ಸಿ. ಕಾರ್ಯನಿರ್ವಹಿಸಲಿದೆ.​

ಕೊಲ್ಕತ್ತ, ಶಾಂತಿನಿಕೇತನದ ವಿಶ್ವಭಾರತಿ ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸ್ಥಾನ ಹೊಂದಿರುವ ಎನ್.ಸಿ.ಸಿ.ಯ ಅಧ್ಯಕ್ಷರಾಗಿ ವಿಶ್ವಭಾರತಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಬಿಪ್ ಲ್ಯಾಬ್ ಲೋಹಾ ಚೌಧುರಿ; ಉಪಾಧ್ಯಕ್ಷರಾಗಿ ಮಕನ್ ಲಾಲ್ ಚತುರ್ವೇದಿ ರಾಷ್ಟ್ರೀಯ ಪತ್ರಿಕೋದ್ಯಮ ಮತ್ತು ಸಂವಹನ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಜಿ. ಸುರೇಶ್ ಹಾಗೂ ಮಹಾಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ವರ ಉಕ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಉಪೇಂದ್ರ ಪಾಢಿ ಚುನಾಯಿತರಾಗಿದ್ದಾರೆ.

ಬ್ರ್ಯಾಂಡ್ ಬೆಂಗಳೂರ ತಜ್ಞರ ವಿಚಾರ ಸಂಕಿರಣ

ಬ್ರ್ಯಾಂಡ್ ಬೆಂಗಳೂರ ತಜ್ಞರ ವಿಚಾರ ಸಂಕಿರಣ

ಬೆಂಗಳೂರು – ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ನಿರ್ದೇಶನದಂತೆ
ಬ್ರ್ಯಾಂಡ್ ಬೆಂಗಳೂರಿನ 7 ವಿವಿಧ ವಿಷಯಗಳಲ್ಲಿ ಸಾರ್ವಜನಿಕರ ಸಲಹೆಗಳನ್ನು ಈಗಾಗಲೇ ವಿಂಗಡಿಸಿದ್ದು, ವೈಬ್ರೆಂಟ್ ಬೆಂಗಳೂರು ವಿಷಯದ ಬಗ್ಗೆ ಇಂದು ಯಲಹಂಕದಲ್ಲಿರುವ ಸೃಷ್ಟಿ ಮಣಿಪಾಲ್ ಇನ್ಸ್ಟಿಟ್ಯೂಟ್ ನಲ್ಲಿ ವಿಚಾರ ಸಂಕಿರಣ ನಡೆಸಲಾಯಿತು.

ವಿಶೇಷ ಆಯುಕ್ತರಾದ ಶ್ರೀ ಜಯರಾಮ ರಾಯಪುರ, ಸೃಷ್ಟಿ ಮಣಿಪಾಲ್ ಇನ್ಸ್ಟಿಟ್ಯೂಟ್ ನ ಅರಿಂದಮ್ ದಾಸ್ ಸೇರಿದಂತೆ ಹಲವು ವಿಷಯ ತಜ್ಞರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

ದಸರಾ ಜನರ ಉತ್ಸವವಾಗಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ

ದಸರಾ ಜನರ ಉತ್ಸವವಾಗಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ

ಅರ್ಥಪೂರ್ಣ ಹಾಗೂ ಅದ್ದೂರಿ ಆಚರಣೆಗೆ ತೀರ್ಮಾನ
ದಸರಾ ಜನರ ಉತ್ಸವವಾಗಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 31:
ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ದಸರಾ ಹಬ್ಬವನ್ನು ದಿನಾಂಕ 15.10.2023 ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.
ವಿಶಿಷ್ಟ ದೀಪಾಲಂಕಾರ
ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯ ವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ:

ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು.
ವಸ್ತು ಪ್ರದರ್ಶನ
ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು,
.ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.
ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ :
ಎಲ್ಲಾ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.
ಪ್ರವಾಸೋದ್ಯಮಕ್ಕೆ ಒತ್ತು:
ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು.

ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ.

ಏರ್ ಶೋ :
ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.
• ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು.
• ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.
• ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು
• ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್,ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ: ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

ಜನರ ಆರೋಗ್ಯ ರಕ್ಷಣೆಗಾಗಿ ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ -ಸಚಿವ ಕೆ.ಗೋಪಾಲಯ್ಯ

ಜನರ ಆರೋಗ್ಯ ರಕ್ಷಣೆಗಾಗಿ ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ -ಸಚಿವ ಕೆ.ಗೋಪಾಲಯ್ಯ

ಮಹಾಲಕ್ಶ್ಮೀಲೇಔಟ್ ವಿಧಾನಸಭಾ ಕ್ಷೇತ್ರ ,ಶಂಕರಮಠ ವಾರ್ಡ್ ನಲ್ಲಿ ಬಿ.ಬಿ.ಎಂ.ಪಿ.ವತಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆಯನ್ನು ಸ್ಥಳೀಯ ಶಾಸಕರು ,ಅಬಕಾರಿ ಸಚಿವರಾದ ಕೆ.ಗೋಪಾಲಯ್ಯರವರು ಉದ್ಘಾಟನೆ ನೇರವೆರಿಸಿದರು.

ಸ್ಥಳೀಯ ಬಿ.ಜೆ.ಪಿ.ಮುಖಂಡರಾದ ಜಯರಾಮಣ್ಣ ,ಶ್ರೀನಿವಾಸಗೌಡ ,ಜಯಸಿಂಹ ನಿಸರ್ಗ ಜಗದೀಶ್ ಮತ್ತು ಆರೋಗ್ಯಧಿಕಾರಿ ಮನೋರಂಜನ್ ಹೆಗಡೆ ,ನೋಡಲ್ ಅಧಿಕಾರಿ ಸುರೇಶ್ ಲಿಂಗಯ್ಯ ,ಸಹಾಯಕ ಕಾರ್ಯಪಾಲಕ ಅಭಿಯಂತರಾದ ಪುಟ್ಟಸ್ವಾಮಿ ಉಪಸ್ಥಿತರಿದ್ದರು.

ಸಚಿವ ಕೆ.ಗೋಪಾಲಯ್ಯರವರ ಮಾತನಾಡಿ ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಜನರು ಹೆಚ್ಚಿನ ಜನಸಂಖ್ಯೆಯಲ್ಲಿ ವಾಸವಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ ಅದ್ದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಉತ್ತಮ ಆರೋಗ್ಯ ಸೇವೆ ಲಭಿಸುವಂತೆ ಮಾಡಲು ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗುವುದು .
ಶಂಕರಮಠ ವಾರ್ಡ್ನನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕ್ಕರೆ ಖಾಯಿಲೆ ,ಬಿ.ಪಿ.ಮತ್ತು ಜನರಲ್ ಚಕ್ ಆಪ್ ಮಾಡಲಾಗುವುದು ವಿಶೇಷವಾಗಿ ಗರ್ಭಿಣಿ ಸ್ತೃೀಯರ ತಪಾಸಣೆ ,ಮಗುವಿನ ಬೆಳವಣಿಗೆ ತಪಾಸಣೆ ಮಾಡಲಾಗುತ್ತದೆ .
ಪ್ರತಿಯೊಬ್ಬ ನಾಗರಿಕರು ಪ್ರತಿ ಆರು ತಿಂಗಳಿಗೆ ಸಂಪೂರ್ಣ ದೇಹ ತಪಾಸಣೆ ಮಾಡಿಸಿಕೊಳ್ಳಿ ಏನಾದರು ಸಮಸ್ಯೆಗಳು ಇದ್ದರೆ ವೈದ್ಯರ ಸಲಹೆ ಪಡೆಯಿರಿ ಎಂದು ಹೇಳಿದರು.