ಉಚಿತ ಗ್ರಾಮೀಣ ಬಸ್ ಪಾಸ್ ಜಾರಿ, ನನಸಾದ ಕನಸು

ಉಚಿತ ಗ್ರಾಮೀಣ ಬಸ್ ಪಾಸ್ ಜಾರಿ, ನನಸಾದ ಕನಸು

ಉಚಿತ ಗ್ರಾಮೀಣ ಬಸ್ ಪಾಸ್ ಜಾರಿ, ನನಸಾದ ಕನಸು

ಸಿಎಂ ಸಿದ್ದರಾಮಯ್ಯ, ಪ್ರಭಾಕರ್ ಅವರಿಗೆ ಕೆಯುಡಬ್ಲೂಜೆ ಅಭಿನಂದನೆ

ಬೆಂಗಳೂರು:26- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡಬೇಕು ಎನ್ನುವುದು ಮೂರು ದಶಕಗಳ ಹೋರಾಟ. ಈ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಆದೇಶವನ್ನು ಹೊರಡಿಸಿದ್ದು, ಅದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಅಭಿನಂದಿಸುತ್ತದೆ.

ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ಹಕ್ಕೋತ್ತಾಯ ಪರಿಗಣಿಸಿ, ಬಜೆಟ್‌ನಲ್ಲಿಯೇ ಉಚಿತ ಬಸ್ ಪಾಸ್ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಬಜೆಟ್‌ನಲ್ಲಿಯೂ ಘೋಷಣೆ ಮಾಡಿದ್ದರು. ಈಗ ಉಚಿತ ಬಸ್ ಪಾಸ್ ಸೌಲಭ್ಯ ನನಸಾಗುವಂತೆ ಮಾಡಿರುವುದು ಶ್ಲಾಘನೀಯ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ.

ಉಚಿತ ಬಸ್ ಪಾಸ್‌ಗೆ 15.66 ಕೋಟಿ ರೂ ಹಣವನ್ನು ಮೀಸಲಿರಿಸಿ ಯೋಜನೆಗೆ ಅನುಮತಿ ಪಡೆಯಲು ವಾರ್ತಾ ಇಲಾಖೆ ಮತ್ತು ಹಣಕಾಸು ಇಲಾಖೆಯಲ್ಲಿ ನಿರಂತರವಾಗಿ ಕೆಯುಡಬ್ಲೂಜೆ ಮಾಡಿದ ಹೋರಾಟದ ಫಲವಾಗಿ ಯೋಜನೆ ಸಾಕಾರಗೊಳ್ಳಲು ಸಾಧ್ಯವಾಗಿದೆ. ಇದಕ್ಕೆ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಪ್ರಯತ್ನವೂ ಮಹತ್ವದ್ದು ಎಂದು ತಗಡೂರು ತಿಳಿಸಿದ್ದಾರೆ.

ನುಡಿದಂತೆ ನಡೆದು, ಉಚಿತ ಬಸ್ ಪಾಸ್ ಜಾರಿಗೆ ಬರಲು ಕಾರಣರಾದ ಸಿಎಂ ಸಿದ್ದರಾಮಯ್ಯ, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ  ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಸೇರಿದಂತೆ ಸಹಕಾರ ಕೊಟ್ಟ ಎಲ್ಲರಿಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೃತಜ್ಞತೆಗಳು ಸಲ್ಲುತ್ತವೆ ಎಂದು ಅವರು ತಿಳಿಸಿದ್ದಾರೆ.

ಸರಳೀಕರಣ ಅಗತ್ಯ:

ಯೋಜನೆ ಮೊದಲು ರೂಪುಗೊಂಡು ಜಾರಿಗೆ ಬರಲಿ ಎನ್ನುವುದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮೊದಲ ಆದ್ಯತೆ ಆಗಿತ್ತು. ನಿಯಮಾವಳಿಗಳಲ್ಲಿ ಒಂದಿಷ್ಟು ಕಠಿಣ ಷರತ್ತುಗಳಿರುವುದು ಗಮನಕ್ಕೆ ಬಂದಿದೆ. ಕಾರ್ಯ ನಿರತ ಪತ್ರಕರ್ತರಿಗೆ ಎಲ್ಲರಿಗೂ ಉಚಿತ ಬಸ್ ಪಾಸ್ ಸಿಗಬೇಕು ಎನ್ನುವ ನಿಟ್ಟಿನಲ್ಲಿ ನಿಯಮಾವಳಿ ಸರಳೀಕರಣಕ್ಕೆ ಸಂಘವು ಸರ್ಕಾರದ ಗಮನಕ್ಕೆ ತಂದು ಸರಿಪಡಿಸಲು ಕ್ರಮ ಕೈಗೊಳ್ಳಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ

ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ

ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ

ಬೆಂಗಳೂರು,- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.

ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು  ಆದೇಶ ಹೊರಡಿಸಿತು.

ಅದರಂತೆ 2001ರಿಂದ 2016ರ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ.

2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಈ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಸೇವಾ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು.

2017 ರಿಂದ 2023 ರ ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಈ ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.

ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ tsraward@gmail.com ಗೆ

ದಿನಾಂಕ:30-09-2024ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು.

ಶಕ್ತಿಸೌಧದಲ್ಲಿ ಸಿಎಂ- ರಾಜ್ಯ ರೈತರ ಭೇಟಿ ಚರ್ಚೆ

ಶಕ್ತಿಸೌಧದಲ್ಲಿ ಸಿಎಂ- ರಾಜ್ಯ ರೈತರ ಭೇಟಿ ಚರ್ಚೆ

ಶಕ್ತಿಸೌಧದಲ್ಲಿ ಸಿಎಂ- ರಾಜ್ಯ ರೈತರ ಭೇಟಿ ಚರ್ಚೆ

ಬೆಂಗಳೂರು, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ರೈತ ಸಮುದಾಯದ ಬಹು ಮುಖ್ಯವಾದ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಸರದಿಯಂತೆ ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳು ಅಧಿಕಾರಿಗಳು ಸೂಚಿಸಿದರು.

ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆಗಳನ್ನು ದತ್ತುಪಡೆದುಕೊಳ್ಳಲು ಮನವಿ : ಬಿಳಿಮಲೆ

ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆಗಳನ್ನು ದತ್ತುಪಡೆದುಕೊಳ್ಳಲು ಮನವಿ : ಬಿಳಿಮಲೆ

ಪ್ರತಿಯೊಬ್ಬ ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳನ್ನು ಸಬಲೀಕರಣಗೊಳಿಸಿ ಮಾದರಿ ಶಾಲೆಯನ್ನಾಗಿ ಮಾಡುವಂತೆ ರಾಜ್ಯದ 224 ಶಾಸಕರುಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ವಿಧಾನ ಸಭಾಧ್ಯಕ್ಷರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಹಾಗೂ ಎಲ್ಲ ಶಾಸಕರುಗಳಿಗೆ ತಾವು ಪ್ರತಿನಿಧಿಸುತ್ತಿರುವ ವಿಧಾನಸಭಾ ಕ್ಷೇತ್ರದಲ್ಲಿ ದುರಸ್ಥಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಸಬಲೀಕರಣಗೊಳಿಸಿ ಮಾದರಿ ಶಾಲೆಯನ್ನಾಗಿ ಮಾಡುವಂತೆ ಪ್ರಾಧಿಕಾರ ಎಲ್ಲರಿಗೂ ಪತ್ರ ಬರೆದಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯದಲ್ಲಿ ನಿರಂತರ ಚರ್ಚೆಯ ಮೂಲಕ ಸರ್ಕಾರಿ ಕನ್ನಡ ಶಾಲೆಗಳನ್ನು ಬಲಗೊಳಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ನೀತಿ ನಿರೂಪಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುತ್ತಾ ಬಂದಿದೆ. ಆದರೂ ಕಳೆದ ಒಂದೂವರೆ ದಶಕದಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದುರ್ಬಲಗೊಳ್ಳುತ್ತಿದ್ದು, ಶಿಕ್ಷಣದ ಖಾಸಗೀಕರಣ ಹಾಗೂ ವ್ಯಾಪಾರೀಕರಣ ನಾಗಲೋಟದಲ್ಲಿ ಸಾಗುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಿ, ಶಾಲೆಗಳಲ್ಲಿ ಕಲಿಕೆಯನ್ನು ಕೇಂದ್ರ ಬಿಂದುವನ್ನಾಗಿಸಲು ಸಾಧ್ಯವಾಗಬಹುದಾದ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಪುನರ್ ರಚಿಸುವುದು ಇಂದಿನ ತುರ್ತು ಅಗತ್ಯ. ದಿನದಿಂದ ದಿನಕ್ಕೆ ತೀರ ದುರ್ಬಲ ಸ್ಥಿತಿ ಮುಟ್ಟುತ್ತಿರುವ ಸರ್ಕಾರಿ ಶಾಲೆಗಳ ಸಬಲೀಕರಣವಾಗದ ಹೊರತು ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಉದ್ದೇಶ ಸಫಲವಾಗುವುದಿಲ್ಲ. ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಉಳಿಯಬಲ್ಲದು. ಈ ನಿಟ್ಟಿನಲ್ಲಿ ನಾವೆಲ್ಲರೂ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಯೋಚಿಸಿ ಕಾರ್ಯನ್ಮೋಖವಾಗಬೇಕಿದೆ. ಆದ್ದರಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶಯವಾದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ತಾವುಗಳು ಕೈ ಜೋಡಿಸುವಿರಿ ಎಂದು ನಂಬಿದ್ದೇವೆ.

ತಾವು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳನ್ನು ಸಬಲೀಕರಣಗೊಳಿಸುವಂತೆ ಕೋರಿದೆ. ಈ ಕುರಿತು ತಮಗೆ ಹೆಚ್ಚಿನ ಮಾಹಿತಿಯ ಅಗತ್ಯವಿದ್ದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರ ಬರೆದಿರುವ ಪತ್ರದಲ್ಲಿ ತಿಳಿಸಿದೆ.

ಅಧ್ಯಕ್ಷರ ಕಾರ್ಯಾಲಯ,  ಕನ್ನಡ ಅಭಿವೃದ್ಧಿ ಪ್ರಾಧಿಕಾರ, ವಿಧಾನಸೌಧ, ಬೆಂಗಳೂರು.

ದೂ: 080-22256365,080-22033519

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ-ಸಿ ಎಂ

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ-ಸಿ ಎಂ

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ-ಸಿ ಎಂ

ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 29:

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ  ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು  ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು  ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ  ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು.  ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14 ನೇ ಹಣಕಾಸು ಆಯೋಗದಲ್ಲಿ  ರಾಜ್ಯಕ್ಕೆ 4.713  ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66 % ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದರು.

 

 

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿಯವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು.  ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ , ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸವಿದೆ ಎಂದರು

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ. ಎಲ್ಲಾ ಶೋಷಿತ ಜಾತಿ-ಸಮುದಾಯಗಳ ನೆಲೆ:  ಸಿದ್ದರಾಮಯ್ಯ

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ. ಎಲ್ಲಾ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ. ಎಲ್ಲಾ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿಎಂ ಸಿದ್ದರಾಮಯ್ಯ

ಕನಕದಾಸರು ಜಾತಿ‌ ಮತ್ತು ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು

ಯಾವ ಧರ್ಮವೂ ಜಾತಿ ಆಧಾರದಲ್ಲಿ ಮನುಷ್ಯನ ಶೋಷಣೆ ಮಾಡಿ ಎನ್ನುವುದಿಲ್ಲ

ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ ನ 29: ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಡ್ಯವನ್ನು ಸಾರಾಸಗಟಾಗಿ ತಿರಸ್ಕರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶ್ರೀ‌ಕಾಗಿನೆಲೆ ಮಹಾಸಂಸ್ಥಾನ ಕನಕ‌ಗುರುಪೀಠದಲ್ಲಿ ಆಯೋಜಿಸಿದ್ದ 536ನೇ ಶ್ರೀ ಕನಕ ಜಯಂತ್ಯೋತ್ಸವ ಮತ್ತು ಭಾವೈಕ್ಯ ಸಮ್ಮೇಳನವನ್ನು  ಉದ್ಘಾಟಿಸಿ ಮಾತನಾಡಿದರು.

ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಷ ಏರ್ಪಿಡಿಸಿರುವ ಶ್ರೀ ಮಠದ ಗುರುಗಳಿಗೆ ಹೃದಯಪೂರ್ವಕವಾಗಿ ವಂದಿಸುತ್ತೇನೆ. ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮ ಎಂದು ಅಪಾರವಾಗಿ ಮೆಚ್ಚಿಕೊಂಡರು.

ನಾವ್ಯಾರೂ ಅರ್ಜಿ ಹಾಕೊಂಡು ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ. ಮೊದಲು ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು ಎಂದು ವಿವರಿಸಿದರು.

ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಚಿಸಲೇ ಇಲ್ಲ. ಎಲ್ಲಾ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮಗಳ ಉದ್ದೇಶ ಆಗಿತ್ತು ಎಂದು ನೆನಪು ಮಾಡಿಕೊಂಡರು.

ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು. ಬಸವಣ್ಣನವರು, “ಇವ ನಮ್ಮವ ಇವ ನಮ್ಮವ” ಎಂದಿದ್ದು. ಕುವೆಂಪು ಅವರು, “ಹುಟ್ಟುವಾಗ ಎಲ್ಲರೂ ವಿಶ್ವ ಮಾನವರು” ಎಂದರು, ಅಂಬೇಡ್ಕರ್ ಅವರು ಸಮ ಸಮಾಜದ ಬಗ್ಗೆ ಹೇಳಿದರು. ಬಸವಾದಿ ಶರಣರು, ಕನಕದಾಸರು,  ಅಂಬೇಡ್ಕರ್, ಕುವೆಂಪು, ಸೂಫಿಗಳ  ಆಶಯಗಳೆಲ್ಲಾ ಒಂದೇ ಆಗಿತ್ತು. ಆದ್ದರಿಂದ ನಾವುಗಳು ಇವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಲ್ಲೇಶಪ್ಪ ಹೊರಪೇಟೆ ಅವರ ಕನಕನ ಹೆಜ್ಜೆ ಮಕ್ಕಳ ಕಾದಂಬರಿಯನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದರು.

ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರೇವಣಸಿದ್ದೇಶ್ವರ, ಶ್ರೀ ಬೀರಲಿಂಗೇಶ್ವರ, ಶ್ರೀ ಮೈಲಾರಲಿಂಗೇಶ್ವರ, ಶ್ರೀ ಮಹಾಸಿದ್ದೇಶ್ವರಿ ದೇವರುಗಳ ಕುಂಭಾಭಿಷೇಕ ನೆರವೇರಿಸಿದರು.

ಹುಬ್ಬಳ್ಳಿ, ಮೂರುಸಾವಿರ ಮಠದ ಶ್ರೀಮನ್ ಮಹಾರಾಜ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು, ಹಜರತ್ ಬೀಜಾಪುರದ ಹಾಶಿಮ್ ಪೀರ್ ದರ್ಗಾದ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ, ಕರ್ನಾಟಕ ಧರ್ಮಪ್ರಾಂತ್ಯದ ಧರ್ಮಗುರು ಡಾ.ಫಾ.ಅಲ್ಫೋನ್ಸ್ ಫರ್ನಾಂಡೀಸ್ ಯೇಸ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್, ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ,  ವಿಧಾನಸಭೆಯ ಉಪಸಭಾಪತಿಗಳಾದ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಹೊಸದುರ್ಗ ಶಾಸಕರಾದ ಬಿ.ಜಿ.ಗೋವಿಂದಪ್ಪ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ್, ರಾಣೆಬೆನ್ನೂರು ಶಾಸಕರಾದ ಪ್ರಕಾಶ್ ಕೋಳಿವಾಡ, ಹಾನಗಲ್ ಶಾಸಕರಾದ ಶ್ರೀನಿವಾಸ್ ಮಾನೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.