ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಸೆ 5 : ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ  ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ “ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ” ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾತ್ಮಗಾಂಧಿ ಅತ್ಯಂತ ಧರ್ಮನಿರಪೇಕ್ಷತೆಯಿಂದ ಬದುಕನ್ನು ಆಚರಿಸುತ್ತಿದ್ದರು. ಇದನ್ನು ಸಹಿಸಲಾಗದ ಮನಸ್ಥಿತಿ ಅವರನ್ನು ಕೊಂದು ಹಾಕಿದರು. ಗೌರಿ ಲಂಕೇಶ್ ಅವರು ಇಂದು ನಮ್ಮ ಜತೆಗಿಲ್ಲ ಆದರೆ ಅವರ ಅದಮ್ಯ ಚೇತನ ನಮ್ಮ ಜತೆಗಿದೆ ಎಂದರು.

ಮಹಾತ್ಮಗಾಂಧಿ, ಗೌರಿ ಲಂಕೇಶ್ ಮಾತ್ರವಲ್ಲ. ಯಾರ್ಯಾರು ಬಸವಾದಿ ಶರಣರು, ಅಂಬೇಡ್ಕರ್, ಬುದ್ಧರ ವಿಚಾರ ಧಾರೆಗಳನ್ನು ಆಚರಿಸುತ್ತಾ ಜಾತಿ ಅಸಮಾನತೆ, ಧರ್ಮ ಸಂಘರ್ಷವನ್ನು ವಿರೋಧಿಸುತ್ತಾರೋ ಅವರೆಲ್ಲರಿಗೂ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದಾರೆ.

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿರುವ ಕಿಡಿಗೇಡಿಗಳು ಎಷ್ಟೇ ಪ್ರಭಲರಾಗಿದ್ದರೂ, ಅವರ ಹಿಂದೆ ಎಷ್ಟೇ ದೊಡ್ಡ ರಾಜಕೀಯ ಒತ್ತಾಸೆ ಇದ್ದರೂ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಗೌರಿಯನ್ನು ಕೊಂದ ಆರೋಪಿಗಳಿಗೆ ಶಿಕ್ಷೆ ಆದಾಗ ಮಾತ್ರ ಗೌರಿ ಆತ್ಮಕ್ಕೆ ಶಾಂತಿ ಸಿಗುತ್ತದೆ. ಪೊಲೀಸ್ ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದೇನೆ. ಸಾವಿರಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿ, 500 ಕ್ಕೂ ಹೆಚ್ವು ಸಾಕ್ಷಿಗಳನ್ನು ಪಟ್ಟಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಕೂಡ ವೇಗವಾಗಿ ನಡೆಯುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ತನಿಖಾ ತಂಡದ ವೃತ್ತಿಪರತೆ ಮತ್ತು ಶ್ರಮ ವ್ಯರ್ಥ ಆಗುವುದಿಲ್ಲ. ಆರೋಪಿಗಳಿಗೆ ಖಂಡಿತಾ ಶಿಕ್ಷೆ ಆಗುತ್ತದೆ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.

ಅಖಿಲ ಭಾರತ ರೈತ ಆಂದೋಲನದ ನಾಯಕ ರೈತ ಮುಖಂಡ ರಾಕೇಶ್ ಟಿಕಾಯತ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆತಲ್ವಾದ್, ರಾಜಕೀಯ ಕಾರ್ಯಕರ್ತೆ ಏಂಜೆಲಾ ರಂಗದ್, ಬಹುಭಾಷಾ ನಟ ಪ್ರಕಾಶ್ ರೈ, ಕೇರಳ ರಾಜ್ಯದ ಮಾಜಿ ಸಚಿವೆ ಶಾಸಕಿ ಶೈಲಜ ಟೀಚರ್, ಖ್ಯಾತ ಪತ್ರಕರ್ತೆ ಸುಪ್ರಿಯಾ ಶ್ರೀನಾಟೆ, ಮುಸ್ಲಿಂ ಒಕ್ಕೂಟದ ಮುಖಂಡರಾದ ಯಾಸಿನ್ ಮಲ್ಪೆ, ಮಾಜಿ ಸಚಿವ ಆಂಜನೇಯ ಅವರು ತಮ್ಮ ವಿಚಾರ ಮಂಡಿಸಿದರು.

ನೂರು ದಿನಗಳ ಸಂಭ್ರಮ: ನುಡಿದಂತೆ ನಡೆದ ಸರ್ಕಾರ

ನೂರು ದಿನಗಳ ಸಂಭ್ರಮ: ನುಡಿದಂತೆ ನಡೆದ ಸರ್ಕಾರ

ನೂರು ದಿನಗಳ ಸಂಭ್ರಮ: ನುಡಿದಂತೆ ನಡೆದ ಸರ್ಕಾರ

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ  ಚಾಲನೆ

ದೇಶದಲ್ಲಿಯೇ ಕರ್ನಾಟಕ ಮಾದರಿ

ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡುವುದು ರಾಜಧರ್ಮ :ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಆಗಸ್ಟ್ 30: ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ.  ನಮ್ಮ ಸರ್ಕಾರ ಮುಂದಿನ 5 ವರ್ಷಗಳಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ನೂರಕ್ಕೆ ನೂರು ಈಡೇರಿಸುವ ವಿಶ್ವಾಸ, ಭರವಸೆ ನಮಗಿದೆ. ಐದು ಗ್ಯಾರಂಟಿಗಳನ್ನು ನಾವು  ಜನರ ಮುಂದಿಟ್ಟಿದ್ದೆವು. ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ನಾಲ್ಕನೇ ಗ್ಯಾರಂಟಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಇಂದು ಜಾರಿಮಾಡಲಾಗಿದೆ ಎಂದರು.

ನೂರ ದಿನಗಳ ಸಾಧನೆ ಬಿಂಬಿಸುವ ಕಿರುಹೊತ್ತಿಗೆ

 ಈ ತಿಂಗಳ 27 ನೇ ತಾರೀಖೆಗೆ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಜನತೆಯ ಮುಂದೆ ಸರ್ಕಾರದ ಸಾಧನೆಗಳನ್ನು  ತಿಳಿಸಲು ಸಣ್ಣ ಕೈಪಿಡಿ ಹೊರತರಲಾಗಿದೆ. ಈ ಕಿರುಹೊತ್ತಿಗೆ  ಕಳೆದ ಮೂರು ತಿಂಗಳು, 10 ದಿನಗಳಲ್ಲಿ ಮಾಡಿರುವ ಸಾಧನೆಗಳನ್ನು ಒಳಗೊಂಡಿದೆ. ಈ ರಾಜ್ಯದ ಜನತೆಗೆ ನಮ್ಮ ಕರ್ತವ್ಯ ಜವಾಬ್ದಾರಿ ಹಾಗೂ ಸಾಧನೆಗಳನ್ನು ಮುಂದಿಡುವ ಪ್ರಯತ್ನ ಮಾಡಿದೆ ಎಂದರು.

ಬೃಹತ್ ಪ್ರಮಾಣದಲ್ಲಿ ಬಡವರಿಗೆ ಹಣ ವರ್ಗಾವಣೆ

ಕರ್ನಾಟಕದಲ್ಲಿ 1.26 ಕೋಟಿ ಕುಟುಂಬಗಳಿವೆ. ಆ ಕುಟುಂಬಗಳ  ಯಜಮಾನಿಯಾರಿಗೆ  2000 ರೂ.ಗಳನ್ನು ಅವರ ಖಾತೆಗೆ ಇಂದು ಜಮಾ ಮಾಡಲಾಗಿದೆ. ಈ ಯೋಜನೆಗೆ  1.10 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. ಇಡೀ ಭಾರತದಲ್ಲಿ ಯಾವ ರಾಜ್ಯವೂ ತೊಂದರೆಯಲ್ಲಿರುವ ಜನರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಂದರೆ ವರ್ಷಕ್ಕೆ 24 ಸಾವಿರ ಹಣವನ್ನು ಬಡವರಿಗೆ ವರ್ಗಾಯಿಸಿಲ್ಲ ಎನ್ನುವುದು ಕಟುಸತ್ಯ. ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು,  48,500 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜುಲೈ 10 ರಂದು ಜಾರಿಗೆ ತಂದೆವು. ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡದೇ ಹೋದರೂ ನಾವು 170 ರೂ.ಗಳನ್ನು ಅಕ್ಕಿ ಸಿಗುವವರೆಗೂ ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡುದಾರರ  ಖಾತೆಗೆ ಜಮಾ ಮಾಡಿದ್ದೇವೆ ಎಂದರು.

ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ

ಜುಲೈ ತಿಂಗಳಿಂದ ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್‍ವರೆಗೆ ವಿದ್ಯುತ್ ಬಳಸುವವರಿಗೆಲ್ಲಾ ಉಚಿತ ವಿದ್ಯುತ್ ಒದಗಿಸಿ  ಶೂನ್ಯ ಬಿಲ್ ನೀಡುತ್ತಿದ್ದೇವೆ.  ಈ ಯೋಜನೆಗೆ 1.56 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ.  ಪ್ರಧಾನಿಗಳೇ ಈ 5 ಗ್ಯಾರಂಟಿಗಳನ್ನು ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ  ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ. ಯುವನಿಧಿಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಪ್ರಾರಂಭವಾಗಲಿದೆ. ಎಲ್ಲಾ ಅಭಿವೃದ್ದಿ ಕಾರ್ಯಕ್ರಮಗಳನ್ನು ಜಾರಿ ಮಾಡಿ, ನೀರಾವರಿ, ಲೋಕೋಪಯೋಗಿ, ವಸತಿ, ಗ್ರಾಮಿಣಾಭಿವೃದ್ಧಿಗೆ ಅನುದಾನವಿಟ್ಟು 5 ಗ್ಯಾರಂಟಿಗಳನ್ನು ಜಾರಿ ಮಾಡಿದೆ. 56 ಸಾವಿರ ಕೋಟಿ ರೂ.ಗಳು ಒಂದು ವರ್ಷಕ್ಕೆ ತಗಲುತ್ತದೆ. ನಮ್ಮದು ಬಡವರ , ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ರೈತರ, ಕಾರ್ಮಿಕರ, ಯುವಕರ ಪರವಾದ ಸರ್ಕಾರ ಎಂದು ಸಾಬೀತು ಮಾಡಲಾಗಿದೆ. ಯಾರು ಏನೇ ಹೇಳಿದರೂ ನಾನು ನುಡಿದಂತೆ ನಡೆದಿದ್ದೇವೆ. ವಿರೋಧ ಪಕ್ಷದವರು ಹೇಳಿರುವುದು ಸುಳ್ಳು ಎಂದರು. ರಾಜ್ಯದಲ್ಲಿ ಐತಿಹಾಸಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ  ಸಂವಿಧಾನದ ಪೀಠಿಕೆಯನ್ನು ಓದಲಾಯಿತು.

 ನೂರು ದಿನಗಳಲ್ಲಿ ಸರ್ಕಾರದ ಸಾಧನೆಯನ್ನು ಬಿಂಬಿಸುವ ಕರ್ನಾಟಕ ಮಾದರಿ ಪುಸಕ್ತವನ್ನು ಬಿಡುಗಡೆ ಮಾಡಲಾಯಿತು.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್,  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವ ಡಾ: ಕೆ.ಹೆಚ್.ಮುನಿಯಪ್ಪ, ಸಚಿವರಾದ ಕೃಷ್ಣಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಕೆ.ಹೆಚ್.ಮುನಿಸ್ವಾಮಿ, ಡಾ:ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಪಿ.ನರೇಂದ್ರಸ್ವಾಮಿ, ಬೋಸರಾಜು , ಶಾಸಕರು ಉಪಸ್ಥಿತರಿದ್ದರು.

ನೂರು ದಿನದಲ್ಲಿ ದಿಕ್ಕುತಪ್ಪಿದ ಸರ್ಕಾರ : ಬಸವರಾಜ ಬೊಮ್ಮಾಯಿ

ನೂರು ದಿನದಲ್ಲಿ ದಿಕ್ಕುತಪ್ಪಿದ ಸರ್ಕಾರ : ಬಸವರಾಜ ಬೊಮ್ಮಾಯಿ

ನೂರು ದಿನದಲ್ಲಿ ದಿಕ್ಕುತಪ್ಪಿದ ಸರ್ಕಾರ : ಬಸವರಾಜ ಬೊಮ್ಮಾಯಿ

ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ ಕೈಕೊಟ್ಟ ಯೋಜನೆಗಳು ಹಳಿ ತಪ್ಪಿದ ಆಡಳಿತ ಪುಸ್ತಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಅವರೊಂದಿಗೆ ಬಿಡುಗಡೆ ಮಾಡಿ ಮಾತನಾಡಿದರು.

ಸಂಪೂರ್ಣ ಬಹುಮತ ಪಡೆದ ಸರ್ಕಾರ ಯಾವ ರೀತಿ ಆಡಳಿತ ಆರಂಭ ಮಾಡಿ ಯಾವ ರೀತಿ ದಿಕ್ಸೂಚಿ ನೀಡಬೆಕಾಗಿತ್ತು ಅದರ ಬದಲು ದಿಕ್ಕು ತಪ್ಪಿದ ಸರ್ಕಾರ ಇದಾಗಿದೆ. ಸರ್ಕಾರ ಗೊಂದಲದಲ್ಲಿ ಸಿಲುಕಿ ಮಾತಿಗೆ ತಪ್ಪಿದ ಸರ್ಕಾರ ಇದಾಗಿದೆ. ಹಣಕಾಸಿನ ವ್ಯವಸ್ಥೆಯನ್ನು ಹಳಿ ತಪ್ಪಿಸಿದೆ. ನಾವು ಸರಪ್ಲಸ್ ಬಜೆಟ್ ಮಂಡನೆ ಮಾಡಿದ್ದೇವು‌ ಇವರು ಬಂದ ಮೇಲೆ 8 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಸುಮಾರು 35 ಸಾವಿರ ಕೋಟಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ಒಟ್ಟು 45 ಸಾವಿರ ಕೋಟಿ ರೂ.  ತೆರಿಗೆ ಮೂಲಕ ಸಂಗ್ರಹಿಸುವ ಅವಕಾಶ ಮಾಡಿಕೊಂಡು 12 ಸಾವಿರ ಕೋಟಿ ಡೆಫಿಸಿಟ್ ಹೆಚ್ಚಳ ಮಾಡಿಕೊಂಡಿದ್ದಾರೆ ನಾವು ಕೊವಿಡ್ ನಂತರ ಸರ್ ಪ್ಲಸ್ ಬಜೆಟ್ ಮಾಡಿದ್ದೇವು. ಇವರು ಕೊವಿಡ್ ಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಾರಿಗೆ ನೌಕರರ ಸಂಬಳ ವಿಳಂಬವಾಗುತ್ತಿದೆ. ಇವರು ಬಂದ ಮೇಲೆ ಒಂದು ಕಿಮಿ ರಸ್ತೆಯನ್ನೂ ಮಾಡಿಲ್ಲ ಎಂದು ಹೇಳಿದರು.

ದಮನಕಾರಿ ನೀತಿ ಅನುಕರಣೆ

ಯಾರಾದರೂ ದೂರು ಕೊಟ್ಟರೆ ಅವರ ವಿರುದ್ದ ಕ್ರಮ ಕಾಂಟ್ರಾಕ್ಟರ್ ಗಳು ರಾಜ್ಯಪಾಲರಿಗೆ ದೂರು ನೀಡಿದರೆ ಅವರಿಗೆ ನೊಟೀಸ್ ನೀಡುತ್ತಿದ್ದಾರೆ. ಶಾಸಕ ಬಿ.ಆರ್ ಪಾಟಿಲ್ ಅವರು ಫೇಕ್ ಲೆಟರ್ ಅಂತ ಹೇಳಿದರು. ಅದು ಫೆಕ್ ಹೌದೊ ಅಲ್ಲವೊ ಅನ್ನುವುದು ತನಿಖೆಯಾಗಬೇಕು. ಅದನ್ನು ಬಿಟ್ಟು ಸುದ್ದಿ ಮಾಡಿದ ಪತ್ರಕರ್ತರಿಗೆ ನೊಟೀಸ್ ನೀಡುತ್ತಿದ್ದಾರೆ. ಯಾರೇ ಏನೇ ಪೋಸ್ಟ್ ಮಾಡಿದರೆ ಅವರನ್ನು ಜೈಲಿಗೆ ಹಾಕುವ ದಮನಕಾರಿ ಧೋರಣೆ ಅನುಸರಿಸಲಾಗುತ್ತಿದೆ.

ಕ್ರೈಮ ಗಳು ರಾಜಾರೋಷವಾಗಿ ನಡೆಯುತ್ತಿದೆ. ಅಕ್ರಮ ಬಾರ್ ಗಳು ತಲೆ ಎತ್ತುತ್ತಿವೆ. ಮಂತ್ರಿಗಳಿಗೆ ಕಮಿಷನ್ ನೀಡಲು ಪೈಪೋಟಿ ನಡೆಯುತ್ತಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಪೂರ್ಣ ಸ್ಥಗಿತ ಆಗಿದೆ ಎಂದು ಹೇಳಿದರು.

ಕಾವೇರಿ ರಾಜ್ಯದ ಹಿತ ಕಾಯುವಲ್ಲಿ ವಿಫಲ

ಕಾವೇರಿ ವಿಷಯದಲ್ಲಿ ರೈತರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣ ವಿಫಲ ಆಗಿದೆ. ರಾಜ್ಯದ ಹಿತ ಕಾಯುವಲ್ಲಿ ಸರ್ಕಾರ ವಿಫಲ ಆಗಿದೆ ಅಂತ ಸರ್ವಪಕ್ಷದ ಸಭೆಯಲ್ಲಿ ಹೇಳಿದ್ದೇನೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸೂಚನೆ ನೀಡಿರುವದನ್ನು ಪ್ರಶ್ನಿಸಲು ಇನ್ನೂ ಸುಪ್ರೀಂ ಕೋರ್ಟ್ ಗೆ ಯಾಕೆ ಹೋಗಿಲ್ಲ. ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ಎರಡು ಬಾರಿ ವಿಚಾರಣೆ ನಡೆಯಿತು. ಈಗ ಸುಪ್ರೀಂ ಕೋರ್ಟ್ ಆದೇಶ ಮಾಡಿದರೆ ನಮ್ಮ ರೈತರ ಪರಿಸ್ಥಿತಿ ಏನಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ವಿದ್ಯುತ್ ಅಭಾವ ಹೆಚ್ಚಾಗುತ್ತಿದೆ. ಜಲ ವಿದ್ಯುತ್ ಸ್ಥಗಿತ ಆಗುತ್ತಿದೆ. ಕಲ್ಲಿದ್ದಲು ಖರಿದಿಗೆ ಹಣ ಇಲ್ಲ. ಜಿರೋ ಬಿಲ್ ಬದಲು ಜಿರೊ ವಿದ್ಯುತ್ ಸ್ಥಿತಿ ಬಂದಿದೆ. ಗ್ಯಾರೆಂಟಿ ಯೋಜನೆಗಳಿಗೆ  ಎಸ್ಸಿ ಎಸ್ಟಿ ಹಣ ಬಳಕೆ ಮಾಡಿದ್ದಾರೆ. ಎಸ್ಸಿಪಿ ಟಿಎಸ್ಪಿ ಕಾಯ್ದೆಯ 7ಡಿ ಯನ್ನು ತೆಗೆದು ಹಾಕುವುದಾಗಿ ಹೇಳಿದ್ದರು. ಅಧಿವೇಶನದಲ್ಲಿ ಅದನ್ನು ಯಾಕೆ ಮಂಡನೆ ಮಾಡಲಿಲ್ಲ. ಅವರಿಗೆ ಹಣ ದುರ್ಬಳಕೆ ಮಾಡಿಕೊಳ್ಳಬೆಕಿದೆ ಹೀಗಾಗಿ ಅದನ್ನು ತೆಗೆದು ಹಾಕುತ್ತಿಲ್ಲ ಎಂದರು.

ಪೊಲಿಸ್ ಸ್ಟೇಶನ್ ಗಳಲ್ಲಿ ವಸೂಲಿ ದಂಧೆ ಮುಕ್ತವಾಗಿ ನಡೆಯುತ್ತಿದೆ. ಏಜೆಂಟರನ್ನು ಇಟ್ಟುಕೊಂಡು ವಸೂಲಿ  ನಡೆಸುತ್ತಿದ್ದಾರೆ. ಜಿಲ್ಲೆಗಳಲ್ಲಿ ಕಾನ್ಬಸ್ಟೇಬಲ್ ಕಿರುಕುಳತಾಳದೇ ಮೇಲಾಧಿಕಾರಿಗಳ ವಿರುದ್ಧ ನೇರವಾಗಿಯೇ ಆರೋಪ ಮಾಡಿದ್ದಾರೆ. ಇವರು ನೂರು ದಿನದಲ್ಲಿ ರಾಜ್ಯವನ್ನು ಅಧೊಗತಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಬಿಜೆಪಿ ಈ ಸರ್ಕಾರದ ವಿರುದ್ದ ಹೋರಾಟ ಆರಂಭಿಸಿದೆ. ಇವರು ಇದೇ ರೀತಿ ಮುಂದುವರೆದರೆ ರಾಜ್ಯದ ಜನರೇ ಹೋರಾಟ ಮಾಡುವ ಸಮಯ ಬರುತ್ತದೆ ಎಂದರು.

ರಾಜ್ಯ ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ಮನವಿ ಮಾಡಿಕೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗೃಹ ಲಕ್ದ್ಮೀ ಯೋಜನೆಗೆ 1 ಕೋಟಿಗೂ ಹೆಚ್ಚು ಅರ್ಜಿ ಬಂದಿವೆ ಅಂತ ಹೇಳಿದ್ದಾರೆ. ಆದರೆ, ಎಷ್ಟು ಜನರನ್ನು ಆಯ್ಕೆ ಮಾಡಿದ್ದಾರೆ ಎಂದು ಬಹಿರಂಗಪಡಿಸಿಲ್ಲ‌. ಫಲಾನುಭವಿಗಳನ್ನು ಹೊರಗಿಡುವ ಪ್ರಯತ್ನ ಮಾಡಲಾಗುತ್ತಿದೆ.  ಅರೆ ಬೆಂದ ಯೋಜನೆಗಳಿಗೆ ನಮ್ಮ ಬೆಂಬಲ ಇಲ್ಲ ಎಂದರು.

ಬಿಜೆಪಿ ಶಾಸಕ ಎಸ್ ಟಿ ಸೊಮಶೇಖರ್ ಗೃಹ ಲಕ್ಷ್ಮಿ ಯೋಜನೆಗೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರು ಯಾಕೆ ಬೆಂಬಲ ಕೊಡುತ್ತಿದ್ದಾರೆ ಅನ್ನುವುದನ್ನು ಕೇಳುತ್ತೇನೆ ಎಂದರು.

ಸರ್ಕಾರದಲ್ಲಿ ಅಸ್ಥಿರತೆ

ಕಾಂಗ್ರೆಸ್ ನಲ್ಲಿ 135 ಶಾಸಕರಿದ್ದರೂ ಅಲ್ಲಿ ಸ್ಥಿರತೆ  ಇಲ್ಲ. ಅದಕ್ಕಾಗಿ ಪ್ರತಿಪಕ್ಷದ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಅವರ ಪಕ್ಷದ ಶಾಸಕರೇ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.

ಯಶಸ್ವಿ ನಿರ್ವಹಣೆ

ನಾವು ಆರಂಭದಿಂದಲೂ ಎಲ್ಲರೂ ಪ್ರತಿಪಕ್ಷದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೆವೆ. 66 ಶಾಸಕರೂ ಸದನದ ಒಳಗೆ ಪ್ರತಿಪಕ್ಷದ ನಾಯಕನ ಸ್ಥಾನ ನಿಭಾಯಿಸಿದ್ದೇವೆ. ಒಂದು ಪಕ್ಷವಾಗಿ ಎಲ್ಲರೂ ಸೇರಿ ಸದನದ ಹೊರಗೆ ಹೋರಾಟ ನಡೆಸುತ್ತಿದ್ದೇವೆ. ಪ್ರತಿಪಕ್ಷದ ನಾಯಕನ ಆಯ್ಕೆ ವಿಚಾರ ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ ಹಾಜರಿದ್ದರು

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಹರಿಹರಕ್ಕೆ ಪ್ರಶಸ್ತಿ

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಹರಿಹರಕ್ಕೆ ಪ್ರಶಸ್ತಿ

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಹರಿಹರಕ್ಕೆ ಪ್ರಶಸ್ತಿ

ದಾವಣಗರೆ: ಛತ್ತಿಸ್‌ಘಡ ರಾಜ್ಯದ ಬಿಲಯ್ ನಗರದಲ್ಲಿ ಆಗಸ್ಟ್ 25ರಿಂದ 28ರವರೆಗೆ ನಡೆದ 29ನೇ ರಾಷ್ಟ್ರೀಯ ಬೆಂಚ್ ಪ್ರೆಸ್ ಹಾಗು ಡೆಡ್ ಲಿಫ್ಟಿಂಗ್ ಸ್ಪರ್ಧೆಗಳು ಪುರುಷರ, ಮಹಿಳೆಯರ ಹಾಗು ಮಾಸ್ಟರ್ಸ್ ವಿಭಾಗದಲ್ಲಿ ನಡೆದಿದ್ದವು.

ಈ ಸ್ಪರ್ದೆಗಳಲ್ಲಿ ಹರಿಹರ ಬ್ರದರ್ಸ್ ಜಿಮ್‌ನಿಂದ 4 ಜನ ಕ್ರೀಡಾಪಟುಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ, 59 ಕೆಜಿ ವಿಭಾಗದಲ್ಲಿ ಖಾಜ ಮೋಹಿನೋದ್ದಿನ್ ಅವರು ಭಾಗವಹಿಸಿ ಬೆಸ್ಟ್ ಬೆಂಚ್ ಪ್ರೆಸರ್ ಅಫ್ ಇಂಡಿಯಾ-2023ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮುಂದೆ ನಡೆಯಲಿರುವ ಅಂತರರಾಷ್ಟ್ರೀಯ  ಬೆಂಚ್ ಸ್ಪರ್ದೆಗಳಿಗೆ ಆಯ್ಕೆಯಾಗಿರುತ್ತಾರೆ. ಇದೇ ಸ್ಪರ್ಧೆಗಳಲ್ಲಿ 73 ಕೆಜಿ ತೂಕದ ವಿಭಾಗದಲ್ಲಿ ಶಹಾಬಾಜ್ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಬ್ರದರ್ಸ್ ಜಿಮ್ನಾ ಸಂಚಾಲಕ, ಅಂತರಾಷ್ಟ್ರೀಯ ದೇಹದಾರ್ಢ್ಯ ಪಟು ಅಕ್ರಂ ಬಾಷ, ತರಬೇತುದಾರ ಮಹಮ್ಮದ್ ರಫೀಕ್ ಸೇರಿದಂತೆ ಎಲ್ಲಾ ಕ್ರೀಡಾಪಟುಗಳು ಶುಭ ಹಾರೈಸಿದ್ದಾರೆ.

ಬಹುಭಾಷಾ ಚಿತ್ರ ತಾರೆ ರಜನೀಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಡಿಪೋ 4 ರಲ್ಲಿ ಸಿಬ್ಬಂದಿಯವರೊಂದಿಗೆ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.

ಬಹುಭಾಷಾ ಚಿತ್ರ ತಾರೆ ರಜನೀಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಡಿಪೋ 4 ರಲ್ಲಿ ಸಿಬ್ಬಂದಿಯವರೊಂದಿಗೆ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.

ಬಹುಭಾಷಾ ಚಿತ್ರ ತಾರೆ ರಜನೀಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಡಿಪೋ 4 ರಲ್ಲಿ ಸಿಬ್ಬಂದಿಯವರೊಂದಿಗೆ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.

ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್

ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್

ದಾವಣಗೆರೆ ಆ: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ 38 ನೇ ಪತ್ರಕರ್ತರ ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯನ್ನು ಉದ್ಘಾಟಿಸಿ, ಸಮ್ಮೇಳನದ ವೆಬ್ ಸೈಟ್ ಆರಂಭಿಸಿ ಮಾತನಾಡಿದರು.
ಮೊದಲೆಲ್ಲಾ ಪತ್ರಕರ್ತರ ಸಮ್ಮೇಳನಗಳು ನಡೆಯುವಾಗ ಸರ್ಕಾರದ ನೆರವು ಸೂಕ್ತವಾಗಿ ದೊರೆಯುತ್ತಿರಲಿಲ್ಲ. 2013 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿ ದೊಡ್ಡ ಮಟ್ಟದಲ್ಲಿ ಸ್ಪಂದಿಸಿ 15 ಲಕ್ಷ ರೂ ನೆರವು ನೀಡಿದ್ದರು. 2023 ರ ಈ ಸಮ್ಮೇಳನದಲ್ಲೂ ಅಷ್ಟೆ ದೊಡ್ಡ ಮಟ್ಟದ ನೆರವು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಪತ್ರಿಕೋದ್ಯಮದ ಸಾಧ್ಯತೆಗಳನ್ನು ವಿಸ್ತರಿಸುತ್ತಿರುವ ರೀತಿಯಲ್ಲೇ ಹಲವು ಸವಾಲುಗಳನ್ನು ಸೃಷ್ಟಿಸುತ್ತಿದೆ. ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಬೇಕಾದ ಸಿದ್ದತೆ ಮತ್ತು ತರಬೇತಿ ಪತ್ರಕರ್ತ ಸಮೂಹಕ್ಕೆ ದೊರಕಬೇಕಿದೆ. ಈ ಎಲ್ಲಾ ಸಂಗತಿಗಳು ಸಮ್ಮೇಳನದಲ್ಲಿ ಚರ್ಚೆ ಆಗಲಿ ಎಂದು ಆಶಿಸಿದರು.
ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಎಂ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ರುದ್ದೀನ್, ವಾರ್ತಾಧಿಕಾರಿ ಧನಂಜಯಪ್ಪ ಉಪಸ್ಥಿತರಿದ್ದರು.