ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ

ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ

ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ

ಬೆಂಗಳೂರು ಅ 31: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.
ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಜವರಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಇಡಿ ವಿತರಕ ಸಮುದಾಯವನ್ನು, ಈ ಸಮುದಾಯದ ಕಾರ್ಯಕ್ಷಮತೆ ಮತ್ತು ಶ್ರಮವನ್ನು ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ ಗುರುತಿಸಿದೆ, ಗೌರವಿಸಿದೆ.
ತುಮಕೂರಿನಲ್ಲಿ ಇತ್ತೀಚಿಗೆ ಜರುಗಿದ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ್ದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು, “ರಾಜ್ಯ ಸರ್ಕಾರದ ಪ್ರಶಸ್ತಿಗಳಲ್ಲಿ ಪತ್ರಿಕಾ ವಿತರಕರನ್ನೂ ಪರಿಗಣಿಸಲಾಗುವುದು” ಎನ್ನುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

2023 ರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

2023 ರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಬೆಂಗಳೂರು, ರಾಜ್ಯೋತ್ಸವ ಪ್ರಶಸ್ತಿ 2023ರ ಕುರಿತು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು…
2023ನೇ ಸಾಲಿನಲ್ಲಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ…
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಪ್ರತಿನಿತ್ಯ ನೀಡಲಾಗಿದೆ…
ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ…
ಇಸ್ರೋ ಮುಖ್ಯಕ್ತ ಸೋಮನಾಥ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ…
100 ವರ್ಷ ದಾಟಿದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ. ಒಬ್ಬರು ದಾವಣಗೆರೆ ಹಾಗೂ ಒಬ್ಬರು ಉತ್ತರ ಕನ್ನಡ ಜಿಲ್ಲೆಯವರು
13 ಮಹಿಳೆಯರು ಮತ್ತು 54 ಪುರುಷರು ಹಾಗೂ ಮತ್ತು ಒಬ್ಬರು ಮಂಗಳ ಮುಖಿ ಗೆ ರಾಜ್ಯೋತ್ಸವ ಪ್ರಶಸ್ತಿ…
ಪ್ರಶಸ್ತಿ ಪಡೆದವರಿಗೆ ರೂ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕ.
ಪ್ರಥಮ ಬಾರಿಗೆ ಹಿರಿಯ ಪತ್ರಿಕಾ ವಿತರಕರಿಗೂ ಪ್ರಶಸ್ತಿ ನೀಡಿರುವುದು.

ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಸಿದ್ದರಾಮಯ್ಯ

ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಸಿದ್ದರಾಮಯ್ಯ

ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಸಿದ್ದರಾಮಯ್ಯ
ಬೆಂಗಳೂರು , ಅಕ್ಟೋಬರ್ 21: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಮೈಸೂರು ರಸ್ತೆಯ ಸಿಎಆರ್ ( ಕೇಂದ್ರ) ಆಯೋಜಿಸಿರುವ “ ಪೊಲೀಸ್ ಹುತಾತ್ಮರ ದಿನಾಚರಣೆ”ಯಲ್ಲಿ ಭಾಗವಹಿಸಿದ್ದ ಕ್ಷಣಗಳು.
ಬೆಂಗಳೂರು ಅ 21: ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು.
ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ.
ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು.
ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ನೀಡಿದರು.

ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ ಎಂದರು.
ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.
2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದರು.
ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.
ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.

ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.

ಸರ್ಕಾರಿ ಹೈಬ್ರೀಡ್ ಕಾರು ಬೇಡ ಎಂದ ಸಂತೋಷ ಲಾಡ್

ಸರ್ಕಾರಿ ಹೈಬ್ರೀಡ್ ಕಾರು ಬೇಡ ಎಂದ ಲಾಡ್
ವಿಭಿನ್ನ ನಡೆಯ ಮೂಲಕ ಮಾದರಿಯಾದ ಕಾರ್ಮಿಕ ಸಚಿವ ಸಂತೋಷ್ ಲಾಡ್
ಬೆಂಗಳೂರು: ರಾಜ್ಯ ಸರ್ಕಾರ ತನ್ನ ಸಚಿವರಿಗೆ ಹೊಚ್ಚ ಹೊಸ ಸರ್ಕಾರಿ ಕಾರುಗಳನ್ನು ವಿತರಿಸುತ್ತಿದೆ. ಬಹುತೇಕ ಎಲ್ಲ ಸಚಿವರುಗಳು ತಮಗೆ ಇಂಥದ್ದೇ ಕಾರು ಬೇಕು, ಅದಕ್ಕೆ ಇಂಥದ್ದೇ ನಂಬರ್ ಇರಬೇಕು ಎಂದೆಲ್ಲ ಬೇಡಿಕೆ ಸಲ್ಲಿಸುತ್ತಿದ್ದಾರೆ.
ಈ ನಡುವೆ ರಾಜ್ಯದ ಸಚಿವರೊಬ್ಬರು ತಮಗೆ ಸದ್ಯ ಯಾವುದೇ ಹೊಸ ಕಾರಿನ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ, ಮಾದರಿಯಾಗಿದ್ದಾರೆ. ಅವರೇ ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್. ಸಿದ್ದರಾಮಯ್ಯ ಸರ್ಕಾರದ ಅತ್ಯಂತ ಶಿಸ್ತಿನ ಹಾಗೂ ಪ್ರಾಮಾಣಿಕ ಸಚಿವರಲ್ಲೊಬ್ಬರಾಗಿರುವ ಸಂತೋಷ್ ಲಾಡ್ ತಮ್ಮ ಜನಪರ ನಿಲುವುಗಳಿಂದಲೇ ಹೆಚ್ಚು ಜನಪ್ರಿಯರಾದವರು.
ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿದೆ; ಮಳೆ-ಬೆಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಜನರ ತೆರಿಗೆ ಹಣವನ್ನು ವಿನಾಕಾರಣ ಪೋಲು ಮಾಡಬಾರದು ಎನ್ನುವ ನಿಲುವಿಗೆ ಸಚಿವ ಸಂತೋಷ್ ಲಾಡ್ ಬಂದಿದ್ದಾರೆ.
ಇನ್ನು ಸಂತೋಷ್ ಲಾಡ್ ಅವರ ಈ ನಡೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಶಂಸೆಗೆ ಪಾತ್ರವಾಗಿದ್ದು, ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ.

ನಮ್ಮ ಮೆಟ್ರೋ ಮಾರ್ಗ  ಉದ್ಘಾಟಿಸಿದ ಪ್ರಧಾನಿ

ನಮ್ಮ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ

ನಮ್ಮ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ
ಬೆಂಗಳೂರಿನ ನಮ್ಮ ಮೆಟ್ರೋದ ನೇರಳೆ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಬೈಯಪ್ಪನಹಳ್ಳಿ-ಕೆ.ಆರ್.ಪುರಂ, ಕೇಂಗೇರಿ – ಚಲ್ಲಘಟ್ಟ ವಿಸ್ತರಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು, ಉತ್ತರ ಪ್ರದೇಶದ ರಾಜ್ಯಪಾಲರು, ಮುಖ್ಯಮಂತ್ರಿಗಳು ಭಾಗವಹಿಸಿದ್ದರು.