by gadi@dmin | Sep 29, 2023 | Top ಸುದ್ದಿಗಳು, ರಾಜ್ಯ
ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡಕ್ಕೆ ಅಭಿನಂದನೆ
ಬೆಂಗಳೂರು, ಸೆಪ್ಟೆಂಬರ್: ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ( ಕ್ರಿಕೆಟ್ ಫಾರ್ ಬ್ಲೈಂಡ್ ) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಿದರು.
ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ.ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.
ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.
ಕ್ರಿಕೆಟ್ ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.
ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್ , ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ ಸಮರ್ಥನಮ್ ಟ್ರಸ್ಟ್ ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
by gadi@dmin | Sep 29, 2023 | Top ಸುದ್ದಿಗಳು, ರಾಜ್ಯ, ಹೋರಾಟಗಾರರು
ಬಂದ್ ಗೆ ಬೆಂಬಲಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಪ್ರತಿಭಟನೆ
ಸರ್ಕಾರ ಕಾವೇರಿ ಹೋರಾಟವನ್ನು ಲಘುವಾಗಿ ಪರಿಗಣಿಸಬಾರದು: ಶಿವಕುಮಾರ್ ಮೇಟಿ
ಬೆಂಗಳೂರು: ಕಾವೇರಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯಿಂದ ಬೆಂಬಲಿಸಿ ಪ್ರತಿಭಟನೆ ನಡೆಸಲಾಯಿತು.
ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದಲ್ಲಿ ರಾಜಾಜಿನಗರದ ಭಾಷ್ಯಂ ಸರ್ಕಲ್‌ನಿಂದ ರಾಮಮಂದಿರವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್ ಮೇಟಿ, ಕಾವೇರಿ ನಮ್ಮ ನಾಡಿನ ಜೀವ ನದಿಯಾಗಿದ್ದು, ಈ ವರ್ಷ ಮಳೆಯ ಕೊರತೆಯಿಂದ ರಾಜ್ಯದಲ್ಲಿ ಮಳೆಯಾಗದೇ ಕಾವೇರಿ ಕಣಿವೆಯ ಡ್ಯಾಮ್ ಗಳು ಖಾಲಿಯಾಗಿವೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಲಿದೆ.
ರಾಜ್ಯ ಸರ್ಕಾರ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕಾನೂನಾತ್ಮಕ ಹೋರಾಟವನ್ನು ಪ್ರಬಲವಾಗಿ ನಡೆಸಬೇಕು. ಸಂಸದರೂ ಕೂಡ ರಾಜ್ಯದ ಪರವಾಗಿ ಕೇಂದ್ರದ ಮೇಲೆ ಒತ್ತಡ ಹೇರಿ ರಾಜ್ಯಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರಗಳು ಹೋರಾಟಗಾರರನ್ನು ಲಘುವಾಗಿ ತೆಗೆದುಕೊಳ್ಳಬಾರದು. ಕಾವೇರಿ ವಿಚಾರದಲ್ಲಿ ಇಡಿ ರಾಜ್ಯ ಒಂದಾಗಿ ಹೋರಾಟ ನಡೆಸಿದ್ದು, ತಕ್ಷಣ ಕಾನೂನು ಹೋರಾಟ ತೀವ್ರಗೊಳಿಸಿ ಕಾವೇರಿ ಉಳಿಸಬೇಕು ಎಂದು ಆಗ್ರಹಿಸಿದರು.
by gadi@dmin | Sep 29, 2023 | Top ಸುದ್ದಿಗಳು, ಕನ್ನಡ ನಾಡು ನುಡಿ, ರಾಜ್ಯ
ಹಂಪಿಗೆ ಮತ್ತೊಂದು ಪ್ರಶಸ್ತಿಯ ವಿಶೇಷ ಗರಿ
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ ನೀಡುವ “ಪ್ರವಾಸಿ ಗ್ರಾಮ ಪ್ರಶಸ್ತಿ” ಯು ನಮ್ಮ ಹಂಪಿ ಗ್ರಾಮಕ್ಕೆ ದೊರೆತದ್ದು ಅತ್ಯಂತ ಖುಷಿಯ ಸಂಗತಿ. ಕಳೆದ ವಾರವಷ್ಟೇ ಹೊಯ್ಸಳರ ಕಾಲದ ದೇವಾಲಯಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡಿದ್ದವು,
ಈಗ ಹಂಪಿ ಗ್ರಾಮವು ಉತ್ತಮ ಪ್ರವಾಸಿ ಗ್ರಾಮವಾಗಿ ಗುರುತಿಸಲ್ಪಟ್ಟಿರುವುದರಿಂದ ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಚೈತನ್ಯ ಮತ್ತು ಉತ್ತೇಜನ ನೀಡುತ್ತದೆ.
ಕರ್ನಾಟಕ ಎಂದರೆ ಐತಿಹಾಸಿಕ ಪ್ರವಾಸಿಗಳ ತಾಣ. ಈ ತಾಣಗಳು ಸೌಂದರ್ಯಕ್ಕೆ ಭೂಷಣ ಎಂದು ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜ್ ರವರು ಹರ್ಷ ವ್ಯಕ್ತ ಪಡಿಸಿದ್ದಾರೆ.
by gadi@dmin | Sep 11, 2023 | Top ಸುದ್ದಿಗಳು, ರಾಜ್ಯ
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಚುನಾವಣೆಯಲ್ಲಿ 8 ಜನ ಆಯ್ಕೆ
ಆನಂದ ಬೈದನಮನೆಗೆ 269 ಅತೀ ಹೆಚ್ಚು
ಬೆಂಗಳೂರು, ಪ್ರತಿಷ್ಠಿತ ಪತ್ರಕರ್ತರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅತ್ಯಂತ ಅಧಿಕ ಮತ ಪಡೆದು ಆನಂದ ಪಿ ಬೈದನಮನೆ ಆಯ್ಕೆಯಾದರೆ, ಕ್ರಮವಾಗಿ ರಮೇಶ ಪಾಳ್ಯ, ಧ್ಯಾನ ಪೂನಚ್ಚ, ಮೋಹನ್ ಕುಮಾರ್ ಬಿ ಎನ್, ಕೃಷ್ಣಕುಮಾರ್ ಪಿ ಎಸ್, ವಿನೋದಕುಮಾರ್ ಬಿ ನಾಯ್ಕ್, ಸೋಮಶೇಖರ್ ಕೆ ಎಸ್, (ಸೋಮಣ್ಣ), ಪರಮೇಶ್ ಕೆ ವಿ. ಆಯ್ಕೆಯಾಗಿದ್ದಾರೆ.
ಆಟೋ ಗುರ್ತಿನಲ್ಲಿ ಸ್ಪರ್ಧಿಸಿದ್ದ ಆನಂದ ಬೈದನಮನೆ
ವಿವಿಧ ಮೀಸಲಾತಿಗಳಲ್ಲಿ ಅವಿರೋದವಾಗಿ ಆಯ್ಕೆಯಾದವರ ವಿವರ :
ಎಮ್ ಎಸ್ ರಾಜೇಂದ್ರ, ರಮೇಶ್ ಬಿ (ರಮೇಶ ಹಿರೇಜಂಬೂರ) ದೊಡ್ಡಬೊಮ್ಮಯ್ಯ, ನಯನಾ ಎಸ್, ವನಿತ ಎಸ್ ಎಂದು ಸಂಘದ ಚುನಾವಣಾಧಿಕಾರಿಗಳಾದ ವಿನುತ ವಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
by gadi@dmin | Sep 6, 2023 | Top ಸುದ್ದಿಗಳು, ರಾಜ್ಯ
ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸರ್ಕಾರದಿಂದ ಪರಿಶೀಲನೆ
54 ಲಕ್ಷ ಮಕ್ಕಳಿಗೆ ಕ್ಷೀರ ಭಾಗ್ಯದಿಂದ ನೆರವಾಗಿದೆ
ನಮ್ಮ ಸರ್ಕಾರದ ಕ್ಷೀರ ಭಾಗ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ವುಗೆ ಗಳಿಸಿದೆ
ತುಮಕೂರು ಸೆ 6: ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲಾ ಜಾತಿಯ ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಹತ್ತು ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತೆ ಮಾಡಿದ್ದೇವೆ. ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ ಎಂದು ವಿವರಿಸಿದರು.
ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿ ಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು ಎಂದು ಟೀಕಿಸಿದರು.
ಅಂಬಾನಿ, ಅದಾನಿಗೆ ಕೊಟ್ಟರೆ ದೇಶದ ಆರ್ಥಿಕತೆಗೆ ನಷ್ಟ ಆಗುವುದಿಲ್ಲವೇ ಪ್ರಧಾನಿ ಮೋದಿಯವರೇ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಬಡವರು ಮಧ್ಯಮ ವರ್ಗದವರು ಸಮಾಧಾನದಿಂದ ಎರಡು ಹೊತ್ತು ಊಟ ಮಾಡಿದರೆ ವಿರೋಧಿಸಬೇಡಿ ಎಂದರು.
ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ , ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ , ಶಾಸಕರುಗಳಾದ ರಂಗನಾಥ್, ಷಡಾಕ್ಷರಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
by gadi@dmin | Sep 6, 2023 | Home Page - Highlights ( Red Background ), ರಾಜ್ಯ
ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿ.ಅನಂತ್ ಕುಮಾರ್ ಅವರ ಪತ್ನಿ
ಶ್ರೀಮತಿ ತೇಜಶ್ವಿನಿ ಅನಂತಕುಮಾರ್ ಅವರು ಇಂದು ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ರವರನ್ನು
ಕುಮಾರ ಕೃಪಾ ಅತಿಥಿ ಗೃಹದಲ್ಲಿ ಭೇಟಿಯಾಗಿ ರಾಜ್ಯ ರಾಜಕೀಯ ವಿಚಾರಗಳ ಕುರಿತು ಚರ್ಚಿಸಿದರು.