by gadi@dmin | Sep 27, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು
ಸಿಎಂ ಸಿದ್ದರಾಮಯ್ಯರಿಗೆ ಕೆಯುಡಬ್ಲೂಜೆ ಅಭಿನಂದನೆ
ಬೆಂಗಳೂರು: 27 ದಶಕಗಳ ಕನಸಾಗಿದ್ದ ಗ್ರಾಮೀಣ ಬಸ್ ಪಾಸ್ ಸೌಲಭ್ಯವನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು
ಗೃಹ ಕಚೇರಿ ಕಾವೇರಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ
ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಅಭಿನಂದನೆ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸ್ ಪಾಸ್ ಬಗ್ಗೆ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮಾತು ಕೊಟ್ಟಿದ್ದೆ.
ಆ ಬೇಡಿಕೆ ಈಡೇರಿಸಿ ಜಾರಿಗೆ ನೀಡಿದ್ದೇನೆ. ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.
ನುಡಿದಂತೆ ನಡೆದು ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಘಟಕದ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್,
ಟಿವಿ9 ರಾಜಕೀಯ ವಿಭಾಗ ಮುಖ್ಯಸ್ಥ ಪ್ರಮೋದ್ ಶಾಸ್ತ್ರಿ, ನ್ಯೂಸ್18 ರಾಜಕೀಯ ಬ್ಯೂರೋ ಮುಖ್ಯಸ್ಥ ಚಿದಾನಂದ ಪಟೇಲಯ
ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೆ.ವಿ.ಪ್ರಭಾಕರ್ ಗೆ ಸನ್ಮಾನ:
ಬಸ್ ಪಾಸ್ ಸೌಲಭ್ಯವನ್ನು ದೊರಕಿಸಿ ಕೊಡಲು ಸಹಕರಿಸಿದ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ
ಕೆ.ವಿ. ಪ್ರಭಾಕರ್ ಅವರನ್ನೂ ಕೆಯುಡಬ್ಲೂಜೆ ಸನ್ಮಾನಿಸಿತು.
by gadi@dmin | Sep 26, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ತಂತ್ರಜ್ನಾನ
ವಿಜ್ಞಾನಿಗಳ ಸಾಧನೆ ಯುವ ಪೀಳಿಗೆಗೆ ಆದರ್ಶ: ಸಿಎಂ
ವಿಜ್ಞಾನ-ತಂತ್ರಜ್ಞಾನದಲ್ಲಿ ಯುವ ಪೀಳಿಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲು ಅನುಕೂಲ: ಸಾಧಕರಿಗೆ ಮೆಚ್ಚುಗೆ ಸೂಚಿಸಿದ ಸಿಎಂ
ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ: ಸಿ.ಎಂ
ಬೆಂಗಳೂರು ಸೆ 26: ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಭಾರತೀಯ ವಿಜ್ಞಾನ ಮಂದಿರ ಸಂಸ್ಥೆಯ (IISC) ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ 2022 ಮತ್ತು 2023 ನೇ ಸಾಲಿನ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.
ಪ್ರಶಸ್ತಿ ಪುರಸ್ಕೃತ ವಿಜ್ಞಾನಿಗಳ ಸಾಧನೆ ಯುವ ಪೀಳಿಗೆಗೆ ಆದರ್ಶ. ಇವರ ಸಾಧನೆ ವಿಜ್ಞಾನ-ತಂತ್ರಜ್ಞಾನದಲ್ಲಿ ಯುವ ಪೀಳಿಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲು ಅನುಕೂಲ ಆಗುತ್ತದೆ ಎಂದು ಶ್ಲಾಘಿಸಿದರು.
ಸಿ.ಎನ್.ರಾವ್ ಅವರ ಸಾಧನೆ ಇಡಿ ಮನುಷ್ಯ ಕುಲದ ಹೆಮ್ಮೆ. ವಿಜ್ಞಾನದ ಬೆಳವಣಿಗೆಗೆ ಇವರ ತುಡಿತ ಶ್ಲಾಘನೀಯ. ಕರ್ನಾಟಕ ರಾಜ್ಯ ವಿಜ್ಞಾನ-ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ನಂಬರ್ ಒನ್ ಇದ್ದೇವೆ. ಈ ವಿಜ್ಞಾನ ತಂತ್ರಜ್ಞಾನದ ಫಲ ಜನ ಸಾಮಾನ್ಯರಿಗೆ ತಲುಪಬೇಕು ಎಂದು ಆಶಿಸಿದರು.
ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಆಗಿದೆ ಎಂದರೆ ಇದರಲ್ಲಿ ಹಲವು ವಿಜ್ಞಾನಿಗಳ, ತಂತ್ರಜ್ಞರ ಕೊಡುಗೆ ಇದೆ ಎಂದರು.
ವಿಜ್ಞಾನದ ಆಸಕ್ತಿ ಹೆಚ್ಚಿ, ವಿಜ್ಞಾನಿಗಳ ಸಂಖ್ಯೆ ಹೆಚ್ಚಾದರೆ ದೇಶದ ಬೆಳವಣಿಗೆ ಸಾಧ್ಯ. ಸಮಾಜದ ತಾರತಮ್ಯ ಅಳಿಯಬೇಕಾದರೆ ಎಲ್ಲಾ ಜಾತಿ, ಧರ್ಮ, ವರ್ಗಗಳಿಗೆ ಸಮಾನ ಅವಕಾಶಗಳು ಸಿಗುವಂತಾಗಬೇಕು ಎಂದರು.
ಗ್ರಾಮೀಣ ಭಾಗದ ಹಲವರು ವಿಜ್ಞಾನಿಗಳಾಗಿ ಪ್ರಶಸ್ತಿ ಪುರಸ್ಕೃತರಾಗಿರುವುದು ಖುಷಿಯ ವಿಚಾರ.
ಪ್ರತಿಭೆ ಅನುವಂಶೀಯ ಅಲ್ಲ. ಅವಕಾಶ ಮತ್ತು ನಿರಂತರ ಶ್ರಮದಿಂದ ಪ್ರತಿಭೆ ವಿಸ್ತಾರಗೊಳ್ಳುತ್ತದೆ ಎಂದರು.
ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್ , ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್.ಎಸ್.ಬೋಸರಾಜು ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
by gadi@dmin | Sep 21, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು
ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿದ ಸಿದ್ದರಾಮಯ್ಯ
ಮೈಸೂರು, 21-ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
by gadi@dmin | Sep 21, 2024 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ಕನ್ನಡ ನಾಡು ನುಡಿ
ನಾಡಿನ ವಿವಿಧ ಕಲಾವಿದರಿಗೆ ‘ಪಿಆರ್ಟಿ ಕಲಾ ಪ್ರಶಸ್ತಿ ಪುರಸ್ಕಾರ.
ಮೈಸೂರು,20 ಪಿ.ಆರ್. ತಿಪ್ಪೇಸ್ವಾಮಿ ಆಧ್ಯಯನ ಪೀಠ ಪುನಶ್ಚೇತನ ಸೇರಿದಂತೆ ಇನ್ನಿತರೆ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಆಯೋಜಿಸಿದ್ದ ಪಿ.ಆರ್.ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವದಲ್ಲಿ ಕಲಾವಿದರನ್ನು ಗೌರವಿಸಿದ ಬಳಿಕ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದಿಂದ ಸಲ್ಲಿಸಲಾದ ಮನವಿ ಸ್ವೀಕರಿಸಿದ ಅವರು ಭರವಸೆ ನೀಡಿದರು.
ಚಿತ್ರಕಲಾವಿದ, ಜಾನಪದ ಜಂಗಮ, ಲೇಖಕ ಪಿ.ಆರ್. ತಿಪ್ಪೇಸ್ವಾಮಿ ಅವರು ಈ ನಾಡು ಕಂಡ ಅಪರೂಪದ ವ್ಯಕ್ತಿ. ಹತ್ತು ಹಲವು ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರ. ಅವರ ಹೆಸರನ್ನು ಮುಂದಿನ ಪೀಳಿಗೆಗೆ ಉಳಿಸುವ ಸಲುವಾಗಿ, ತಾವು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ವಿಶ್ವವಿದ್ಯಾಲಯದಲ್ಲಿ ತಿಪ್ಪೇಸ್ವಾಮಿ ಅಧ್ಯಯನ ಪೀಠ ಅನುಷ್ಠಾನಗೊಳಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ. ದಯವಿಟ್ಟು ಅದನ್ನು ಪುನಶ್ಚತನಗೊಳಿಸಲು ಕುಲಪತಿಗೆ ಸೂಚಿಸಬೇಕೆಂದು ಮನವಿ ಮಾಡಲಾಯಿತು.
ಮೈಸೂರು ವಿಶ್ವವಿದ್ಯಾಲಯದ ಜಾನಪದ ವಸ್ತು ಸಂಗ್ರಹಾಲಯ ಪಿ.ಆರ್. ತಿಪ್ಪೇಸ್ವಾಮಿ ಅವರ ಶ್ರಮದ ಫಲ. ದಯವಿಟ್ಟು ವಸ್ತು ಸಂಗ್ರಹಾಲಯಕ್ಕೆ ತಿಪ್ಪೇಸ್ವಾಮಿ ಅವರ ಹೆಸರನ್ನು ನಾಮಕರಣ ಮಾಡಲು ಕ್ರಮ ಕೈಗೊಳ್ಳಬೇಕು, ಬೆಂಗಳೂರಿನ ಚಿತ್ರಕಲಾ ಪರಿಷತ್ ಸಮೀಪದ ರಸ್ತೆ ಅಥವಾ ವೃತ್ತಕ್ಕೆ ಪಿ.ಆರ್. ತಿಪ್ಪೇಸ್ವಾಮಿ ಅವರ ಹೆಸರಿಡಲು ಬಿಬಿಎಂಪಿಗೆ ಸೂಚಿಸಬೇಕೆಂದು ಕೋರುತ್ತೇವೆ.
ಪಿ.ಆರ್. ತಿಪ್ಪೇಸ್ವಾಮಿ ಅವರ ಕಲಾಕೃತಿಗಳನ್ನು ಡಿಜಿಟಲೀಕರಣ ಮಾಡಿಸಲು ಸರ್ಕಾರದಿಂದ ಹೆಚ್ಚಿನ ಧನ ಸಹಾಯ ನೀಡಬೇಕು, ಪ್ರತಿಷ್ಠಾನದ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ನಿವೇಶನವೊಂದನ್ನು ಮಂಜೂರು ಮಾಡಬೇಕು, ಕಲಾವಿದರ ಮಾಸಾಶನದ ಜೊತೆಗೆ ಆರೋಗ್ಯ ವಿಮೆ ಕೊಡಬೇಕೆಂದು ಮನವಿ ಸಲ್ಲಿಸಲಾಯಿತು.
ಕಲಾವಿದ ಪಿ.ಆರ್.ತಿಪ್ಪೇಸ್ವಾಮಿ ಜನ್ಮ ಶತಮಾನೋತ್ಸವದ ಅಂಗವಾಗಿ ನಾಡಿನ ವಿವಿಧ ಕಲಾವಿದರಿಗೆ ‘ಪಿಆರ್ಟಿ ಕಲಾ ಪ್ರಶಸ್ತಿ’ ನೀಡಿ ಪುರಸ್ಕರಿಸಲಾಯಿತು.
ವಿಜಯನಗರ ಎರಡನೇ ಹಂತದಲ್ಲಿರುವ ಶ್ರೀಕಲಾನಿಕೇತನ ಸ್ಕೂಲ್ ಆಫ್ ಆರ್ಟ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿರಿಯ, ಕಿರಿಯ ಕಲಾವಿದರು ಹಾಗೂ ಕಲಾಪೋಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿದರು.
ಕಲಾವಿದರಾದ ಬೆಂಗಳೂರಿನ ಕೆ.ವಿ.ಸುಬ್ರಮಹ್ಮಣ್ಯಂ, ಎ.ಜೆ.ಕಮಲಾಕ್ಷಿ, ಮೈಸೂರಿನ ಆರ್.ಜೆ.ಸಿಂಗ್, ರಾಘವೇಂದ್ರಮೂರ್ತಿ, ಕಲಬುರ್ಗಿಯ ಡಾ.ಜಿ.ಎಸ್.ಖಂಡೇರಾವ್, ದಿಲೀಪ್ ಕುಮಾರ್ ಕಾಳೆ, ಡಾ.ಪಿ.ಪರಶುರಾಮ್, ಧಾರವಾಡದ ಎಂ.ಆರ್.ಬಾಳಿಕಾಯಿ, ಸಂಡೂರಿನ ಡಾ.ವಿ.ಟಿ.ಕಾಳೆ, ಗದಗದ ಡಾ.ಡಿ.ಎ.ಉಪಾಧ್ಯ, ಮೂಡಿಗೆರೆಯ ಅಶೋಕ್, ಚಿಕ್ಕಮಗಳೂರಿನ ಮಧು ಶಿಲ್ಪ ಅಚಾರ್ಯ, ಸಿ.ಕಣ್ಮೇಶ್, ಎಂ.ಎಸ್.ಲಿಂಗರಾಜು, ಮಂಗಳೂರಿನ ಸೈಯದ್ ಆಸಿಪ್ ಅಲಿ, ತುಮಕೂರಿನ ಎಸ್.ಎಚ್.ನಾಗರಾಜು, ಹಂಪಿಯ ಡಾ. ಮೋಹನ್ ಪಾಂಚಾಳ್, ಹಿರಿಯೂರಿನ ಜೆ.ನರಸಿಂಹರಾಜು ಅವರನ್ನು ಗೌರವಿಸಲಾಯಿತು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರು, ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ.ರಮೇಶ್, ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ, ಸಂಚಾಲಕ ರುದ್ರಣ್ಣ ಹರ್ತಿಕೋಟೆ, ಕಾರ್ಯದರ್ಶಿ ಕೆ.ಸಿ.ಮಹದೇವಶೆಟ್ಟಿ ಇತರರು ಉಪಸ್ಥಿತರಿದ್ದರು.
ಪಿ.ಆರ್.ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವ ಅಂಗವಾಗಿ ಶತಮಾನೋತ್ಸವದ ಅಂಗವಾಗಿಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಲಲಿತಕಲಾ, ಶಿಲ್ಪಕಲಾ, ಜನಾಪದ ಅಕಾಡಮಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಶ್ರೀಕಲಾನಿಕೇತನ ಸ್ಕೂಲ್ ಆಫ್ ಆರ್ಟ್, ಕದಂಬ ರಂಗ ವೇದಿಕೆ, ಚಿತ್ರವನ ರೆಸಾರ್ಟ್, ರಾಮ್ಸನ್ಸ್ ಕಲಾ ಪ್ರತಿಷ್ಠಾನದಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿತ್ರಕಲಾ ಪ್ರದರ್ಶನ ಸ್ಪರ್ಧೆ, ಪ್ರಾತ್ಯಕ್ಷಿಕೆಯೂ ಆಯೋಜಿಸಲಾಗಿತ್ತು.
by gadi@dmin | Sep 20, 2024 | Home Page - Highlights ( Red Background ), Scrolling News ( Right to Left ), ಕನ್ನಡ ನಾಡು ನುಡಿ
ಹಿರಿಯ ಸಾಹಿತಿ ಹಂ.ಪಾ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಸಪ್ಟೆಂಬರ್ 20: ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.
by gadi@dmin | Sep 20, 2024 | Home Page - Highlights ( Red Background ), ಕನ್ನಡ ನಾಡು ನುಡಿ, ನಮ್ಮ ಬೆಂಗಳೂರು
ಕನ್ನಡ ಕೈ ದೀವಿಗೆ ಪುಸ್ತಕ ಲೋಕಾರ್ಪಣೆ
ಬೆಂಗಳೂರು, 19- ಹೆಚ್‍ಎಎಲ್ ನ ಕೇಂದ್ರ ಸಂಘದಿಂದ ನಗರದಲ್ಲಿ ಗುರುವಾರದಂದು ಕನ್ನಡ ಕಾರ್ಯಕರ್ತರ ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ನಂತರ ಮತ್ತು ‘ಕನ್ನಡ ಕೈ ದೀವಿಗೆ ‘ಪುಸ್ತಕವನ್ನು ಲೋಕಾರ್ಪಣೆ ಗೊಳಿಸಿದ ಮಾನ್ಯ ಡಾ. ವೂಡೇ ಕೃಷ್ಣ, ಕನ್ನಡ ಚಿಂತಕ ರಾ. ನಂ.ಚಂದ್ರಶೇಖರ ಸಂಘದ ಅಧ್ಯಕ್ಷ ಡಿ. ರಾಜೇಶ್, ಪ್ರಧಾನ ಕಾರ್ಯದರ್ಶಿ ಕೆ.ಡಿ ದೇವರಾಜ್ ಉಪಸ್ಥಿತರಿದ್ದರು.