ಸಿದ್ದರಾಮಯ್ಯ ವಿರುದ್ದ ಬಿಜೆಪಿ ಜೆಡಿಎಸ್ ಷಡ್ಯಂತ್ರ; ಹಿಂದುಳಿದ ವರ್ಗಗಳಿಂದ ಎಚ್ಚರಿಕೆ ಸಮಾವೇಶ.

ಸಿದ್ದರಾಮಯ್ಯ ವಿರುದ್ದ ಬಿಜೆಪಿ ಜೆಡಿಎಸ್ ಷಡ್ಯಂತ್ರ; ಹಿಂದುಳಿದ ವರ್ಗಗಳಿಂದ ಎಚ್ಚರಿಕೆ ಸಮಾವೇಶ.

ಬೆಂಗಳೂರು ಜುಲೈ 31; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ ಜೆಡಿಎಸ್ ವಿರುದ್ದ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯದೆಲ್ಲಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹಿಸಿದೆ.

ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಈರಣ್ಣ, ಮಾಜಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ಕಾರ್ಯಾಧ್ಯಕ್ಷ ಬಸವರಾಜ ಲ.ಬಸಲಿಗುಂದಿ ಸಿದ್ಧಾರಮಯ್ಯ ವಿರುದ್ಧ ಪಾದಯಾತ್ರೆಯ ಬೆದರಕೆ ಹಾಕಿದರೆ ಪರ್ಯಾಯವಾಗಿ ಕುರುಬರ ಸಂಘ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳು ಇಡೀ ರಾಜ್ಯಾದ್ಯಂತ ಪ್ರತಿಭಟನಾ ಕಾರ್ಯಕ್ರಮ ಮತ್ತು ಹಿಂದುಳಿದ ವರ್ಗಗಳ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಬಂದಾಕ್ಷಣ ತನಿಖಾ ಆಯೋಗ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು, ಈ ಹಿಂದೆಯೂ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜು ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರಂಸಿಂಗ್ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು, ಈಗ ಸಮಸ್ತ ಹಿಂದುಳಿದ ಸಮುದಾಯಗಳು ಜಾಗೃತವಾಗಿವೆ, ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯನವರು ಬಡವರು,ಮಹಿಳೆಯರು, ರೈತರು, ಕಾರ್ಮಿಕರ ಪರ ಇರುವಂತೆ ಈ‌ ವರ್ಗಗಳು ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ಸರ್ಕಾರದ ಪರ ಬಂಡೆಯಂತೆ ನಿಂತಿವೆ ಎಂದು ತಿಳಿಸಿದರು.

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ. ಎಲ್ಲಾ ಶೋಷಿತ ಜಾತಿ-ಸಮುದಾಯಗಳ ನೆಲೆ:  ಸಿದ್ದರಾಮಯ್ಯ

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ. ಎಲ್ಲಾ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ. ಎಲ್ಲಾ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿಎಂ ಸಿದ್ದರಾಮಯ್ಯ

ಕನಕದಾಸರು ಜಾತಿ‌ ಮತ್ತು ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು

ಯಾವ ಧರ್ಮವೂ ಜಾತಿ ಆಧಾರದಲ್ಲಿ ಮನುಷ್ಯನ ಶೋಷಣೆ ಮಾಡಿ ಎನ್ನುವುದಿಲ್ಲ

ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ ನ 29: ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಡ್ಯವನ್ನು ಸಾರಾಸಗಟಾಗಿ ತಿರಸ್ಕರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶ್ರೀ‌ಕಾಗಿನೆಲೆ ಮಹಾಸಂಸ್ಥಾನ ಕನಕ‌ಗುರುಪೀಠದಲ್ಲಿ ಆಯೋಜಿಸಿದ್ದ 536ನೇ ಶ್ರೀ ಕನಕ ಜಯಂತ್ಯೋತ್ಸವ ಮತ್ತು ಭಾವೈಕ್ಯ ಸಮ್ಮೇಳನವನ್ನು  ಉದ್ಘಾಟಿಸಿ ಮಾತನಾಡಿದರು.

ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಷ ಏರ್ಪಿಡಿಸಿರುವ ಶ್ರೀ ಮಠದ ಗುರುಗಳಿಗೆ ಹೃದಯಪೂರ್ವಕವಾಗಿ ವಂದಿಸುತ್ತೇನೆ. ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮ ಎಂದು ಅಪಾರವಾಗಿ ಮೆಚ್ಚಿಕೊಂಡರು.

ನಾವ್ಯಾರೂ ಅರ್ಜಿ ಹಾಕೊಂಡು ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ. ಮೊದಲು ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು ಎಂದು ವಿವರಿಸಿದರು.

ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಚಿಸಲೇ ಇಲ್ಲ. ಎಲ್ಲಾ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮಗಳ ಉದ್ದೇಶ ಆಗಿತ್ತು ಎಂದು ನೆನಪು ಮಾಡಿಕೊಂಡರು.

ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು. ಬಸವಣ್ಣನವರು, “ಇವ ನಮ್ಮವ ಇವ ನಮ್ಮವ” ಎಂದಿದ್ದು. ಕುವೆಂಪು ಅವರು, “ಹುಟ್ಟುವಾಗ ಎಲ್ಲರೂ ವಿಶ್ವ ಮಾನವರು” ಎಂದರು, ಅಂಬೇಡ್ಕರ್ ಅವರು ಸಮ ಸಮಾಜದ ಬಗ್ಗೆ ಹೇಳಿದರು. ಬಸವಾದಿ ಶರಣರು, ಕನಕದಾಸರು,  ಅಂಬೇಡ್ಕರ್, ಕುವೆಂಪು, ಸೂಫಿಗಳ  ಆಶಯಗಳೆಲ್ಲಾ ಒಂದೇ ಆಗಿತ್ತು. ಆದ್ದರಿಂದ ನಾವುಗಳು ಇವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಲ್ಲೇಶಪ್ಪ ಹೊರಪೇಟೆ ಅವರ ಕನಕನ ಹೆಜ್ಜೆ ಮಕ್ಕಳ ಕಾದಂಬರಿಯನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದರು.

ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರೇವಣಸಿದ್ದೇಶ್ವರ, ಶ್ರೀ ಬೀರಲಿಂಗೇಶ್ವರ, ಶ್ರೀ ಮೈಲಾರಲಿಂಗೇಶ್ವರ, ಶ್ರೀ ಮಹಾಸಿದ್ದೇಶ್ವರಿ ದೇವರುಗಳ ಕುಂಭಾಭಿಷೇಕ ನೆರವೇರಿಸಿದರು.

ಹುಬ್ಬಳ್ಳಿ, ಮೂರುಸಾವಿರ ಮಠದ ಶ್ರೀಮನ್ ಮಹಾರಾಜ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು, ಹಜರತ್ ಬೀಜಾಪುರದ ಹಾಶಿಮ್ ಪೀರ್ ದರ್ಗಾದ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ, ಕರ್ನಾಟಕ ಧರ್ಮಪ್ರಾಂತ್ಯದ ಧರ್ಮಗುರು ಡಾ.ಫಾ.ಅಲ್ಫೋನ್ಸ್ ಫರ್ನಾಂಡೀಸ್ ಯೇಸ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್, ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ,  ವಿಧಾನಸಭೆಯ ಉಪಸಭಾಪತಿಗಳಾದ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಹೊಸದುರ್ಗ ಶಾಸಕರಾದ ಬಿ.ಜಿ.ಗೋವಿಂದಪ್ಪ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ್, ರಾಣೆಬೆನ್ನೂರು ಶಾಸಕರಾದ ಪ್ರಕಾಶ್ ಕೋಳಿವಾಡ, ಹಾನಗಲ್ ಶಾಸಕರಾದ ಶ್ರೀನಿವಾಸ್ ಮಾನೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಡಿ. 1ಕ್ಕೆ  ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಸಮಾರಂಭ

ಡಿ. 1ಕ್ಕೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಸಮಾರಂಭ

ಡಿಸೆಂಬರ್ 1ಕ್ಕೆ ‘ಗವಿಮಾರ್ಗ’ ಪುಸ್ತಕ ಬಿಡುಗಡೆ,

ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ

ಮತ್ತು ಮಂಡಲ್ ವರದಿ ಆಗಿದ್ದೇನು?

ಕುರಿತು ವಿಚಾರ ಸಂಕಿರಣ

 

ಬೆಂಗಳೂರು-‘ಗವಿಮಾರ್ಗ’ ಪುಸ್ತಕ ಬಿಡುಗಡೆ, ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮತ್ತು ಮಂಡಲ್ ವರದಿ ಆಗಿದ್ದೇನು? ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಡಿಸೆಂಬರ್ 01, (ಶುಕ್ರವಾರ) 2023 ರಂದು ಬೆಳಿಗ್ಗೆ 11 ಗಂಟೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆಯಲಿದೆ.

ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಡಾ.ಎಂ.ಎಸ್.ಮಣಿ ಅವರು ಬರೆದಿರುವ ‘ಗವಿಮಾರ್ಗ’ ಪುಸ್ತಕವನ್ನು ಬಿಡುಗಡೆ ಮಾಡುವವರು. ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅವರು ವಿಚಾರ ಸಂಕಿರಣ ಉದ್ಘಾಟಿಸುವರು, ಮಾಜಿ ಸಚಿವ ಎಚ್.ಆಂಜನೇಯ ಅವರು ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್.ನೀಲಕಂಠ ಅಧ್ಯಕ್ಷತೆ ವಹಿಸುವರು.

ಶ್ರೀ ಷಡಕ್ಷರಿ ಮುನಿ ದೇಶೀಕೇಂದ್ರ ಸ್ವಾಮೀಜಿ, ಪೀಠಾಧ್ಯಕ್ಷರು, ಆದಿ ಜಾಂಬವ ಬೃಹನ್ಮಠ ಹಿರಿಯೂರು ನಗರ, ಇವರು ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜ ಮತ್ತು ಡಾ.ಮನೋಹರ್ ಯಾದವ್, ನಿವೃತ್ತ ಪ್ರಾಧ್ಯಾಪಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು ಇವರು ‘ಮಂಡಲ್ ವರದಿ ಆಗಿದ್ದೇನು?’ ಎಂಬ ವಿಚಾರದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಅವರು ವಿಷಯದ ಮೇಲೆ ಪ್ರತಿಕ್ರಿಯಿಸುವರು.

ಎಂ. ಸಿದ್ದರಾಜು, ಮಾಜಿ ಅಧ್ಯಕ್ಷರು, ಕರ್ನಾಟಕ ಮಾಧ್ಯಮ ಅಕಾಡೆಮಿ, ಹೆಚ್.ಕಾಂತರಾಜ, ಮಾಜಿ ಅಧ್ಯಕ್ಷರು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಲಕ್ಷö್ಮಣ ಕೊಡಸೆ, ಅಧ್ಯಕ್ಷರು ಜನಮನ ಪ್ರತಿಷ್ಠಾನ, ಟಿ.ಎಸ್.ಆರ್ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ|| ಬಿ.ಕೆ.ರವಿ ಇವರುಗಳಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಲಾಗುವುದು.  ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ಟೆಕ್ ಸಮ್ಮೇಳನ ಉದ್ಘಾಟಿಸಿದ ಸಿಎಂ

ಬೆಂಗಳೂರು ಟೆಕ್ ಸಮ್ಮೇಳನ ಉದ್ಘಾಟಿಸಿದ ಸಿಎಂ

ಬೆಂಗಳೂರು ಟೆಕ್ ಸಮ್ಮೇಳನ ಉದ್ಘಾಟನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಆರಂಭವಾದ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ, ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಐಟಿ, ಬಿಟಿ ಇಲಾಖೆ ಕಾರ್ಯದರ್ಶಿ ಡಾ ಏಕರೂಪ್ ಕೌರ್, ಉದ್ಯಮಿಗಳಾದ ಮಾರ್ಕ್ ಪೇಪರ್ ಮಾಸ್ಟರ್, ಕ್ರಿಶ್ ಗೋಪಾಲಕೃಷ್ಣನ್, ಡಾ. ಕಿರಣ್ ಮಜುಂದಾರ್ ಷಾ, ಪ್ರಶಾಂತ ಪ್ರಕಾಶ, ನಿವೃತಿ ರೈ, ಅರವಿಂದ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಜನಸ್ಪಂದನ ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನಗಳ ಗಡುವು-ಮುಖ್ಯಮಂತ್ರಿ

ಜನಸ್ಪಂದನ ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನಗಳ ಗಡುವು-ಮುಖ್ಯಮಂತ್ರಿ

ಸಮಸ್ಯೆಗಳ ಇಳಿಮುಖಕ್ಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ನವೆಂಬರ್ 27 : ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ  ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುತ್ತಾರೆ. ಬೆಳಿಗ್ಗೆ 10.00 ಗಂಟೆಗೆ ಆರಂಭಗೊಂಡು, ಜನಸ್ಪಂದನ‌ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು.

ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ನೀಡಿರುತ್ತಾರೆ ಎಂದು ಹೇಳಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ,  ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3500 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿಯವರ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು ಸ್ಥಳೀಯ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮವಹಿಸಬೇಕು. ಪೊಲೀಸ್ ಇಲಾಖೆಯ ಸಮಸ್ಯೆಯೂ ಸಹ ಸ್ಥಳೀಯ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳೆ ಆಗಿದ್ದು, ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ, ಪರಿಹಾರಕ್ಕೆ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ರೂಪದಲ್ಲಿ ಪತ್ರವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ  ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು. ನಾನೂ ಸಹ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವ ಕ್ರಮವನ್ನು ಅಧಿಕಾರಿಗಳು ಮಾಡಿರುವ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದರು.

ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಎಲ್ಲಾ ಹಂತದಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಜನರ ತೆರಿಗೆ ಹಣದಿಂದ ನಮಗೆ ಸಂಬಳ ಬರುತ್ತಿದೆ.   ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷ 4000 ತ್ವಿಚಕ್ರ ವಾಹನವನ್ನು ವಿಕಲಚೇತನರಿಗೆ ನೀಡಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜನಸ್ಪಂದನ

ಕಾರ್ಯಕ್ರಮದ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ನೀಡಲು ಸರದಿ ಸಾಲಿನಲ್ಲಿ ನಿಂತಿದ್ದ ಜನರ ಬಳಿಗೆ ತೆರಳಿ ಅರ್ಜಿಗಳನ್ನು ಖುದ್ದು ಪಡೆದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನೀಡಿದರು. ಇದಕ್ಕೂ ಮುನ್ನ  ವಿಕಲಚೇತನರ ಬಳಿ ಹೋಗಿ ಅಹವಾಲು ಸ್ವೀಕರಿಸಿ, ತ್ವರಿತವಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವೆ ಹೆಬ್ಬಾಳಕರ್ ಭರವಸೆ : ಧರಣಿ ವಾಪಸ್ ಪಡೆದ ವಿಕಲಚೇತನರು

ಸಚಿವೆ ಹೆಬ್ಬಾಳಕರ್ ಭರವಸೆ : ಧರಣಿ ವಾಪಸ್ ಪಡೆದ ವಿಕಲಚೇತನರು

ಸಚಿವೆ ಹೆಬ್ಬಾಳಕರ್ ಭರವಸೆ : ಧರಣಿ ವಾಪಸ್ ಪಡೆದ ವಿಕಲಚೇತನರು

ಬೆಳಗಾವಿ: ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಕುಳಿತಿದ್ದ ನವ ಕರ್ನಾಟಕ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರನ್ನು ಮಂಗಳವಾರ ಸಂಜೆ ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ವಿಕಲಚೇತನರು ಧರಣಿ ವಾಪಸ್ ಪಡೆದರು.

ಧರಣಿ ಸ್ಥಳಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅವರ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ರಾಜ್ಯದ 6,860 ಜನ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರ ಹುದ್ದೆಗಳನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ನಿರತರು ಸಚಿವರಿಗೆ ಮನವಿ ಸಲ್ಲಿಸಿದರು.

ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಜತೆ ಈ ಕುರಿತು ಚರ್ಚಿಸುತ್ತೇನೆ. ಜೊತೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಳದ ಅಧಿವೇಶನದ ವೇಳೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೇಡಿಕೆಗಳಿಗೆ ಸೂಕ್ತವಾಗಿ ಸರಕಾರ ಸ್ಪಂದಿಸಲಿದೆ ಎಂದು ಸಚಿವರು ತಿಳಿಸಿದರು.

ಸಚಿವರು ನಮ್ಮ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಅವರ ಭರವಸೆಯ ಹಿನ್ನೆಲೆಯಲ್ಲಿ ಧರಣಿ ವಾಪಸ್ ಪಡೆಯುತ್ತಿರುವುದಾಗಿ ಸಂಘದ ರಾಜ್ಯ ಅಧ್ಯಕ್ಷ ಫಕೀರ ಗೌಡ ಪಾಟೀಲ ತಿಳಿಸಿದರು.