by gadi@dmin | Nov 20, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ರಾಜ್ಯ
ಡಾ ಕಾಂತರಾಜ್ ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಆಯೋಗಕ್ಕೆ ಒತ್ತಾಯ.
ಬೆಂಗಳೂರು- 20, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ರವರ ನೇತೃತ್ವದ ನಿಯೋಗವು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮನವಿಯ ಪೂರ್ಣ ವಿವರ.
ರಾಷ್ಟ್ರದಲ್ಲಿ ಮೀಸಲಾತಿಯನ್ನು ಅವಕಾಶ ವಂಚಿತ ಜಾತಿಗಳಿಗೆ ನೀಡಿ ಸಾಮಾಜಿಕ ಸಮಾನತೆಯನ್ನು ಸಾರಿದ ಅಗ್ರಗಣ್ಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಭಾರತದ ಸಂವಿಧಾನದ ಆಶಯಗಳನ್ನು ಈಡೇರಿಸಿ ಅನೇಕ ಜಾತಿಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಕರ್ನಾಟಕದಲ್ಲಿ ಅನೇಕ ಯಶಸ್ವಿ ಪ್ರಯೋಗಗಳು ನಡೆದಿವೆ. ಅನೇಕ ಹಿಂದುಳಿದ ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನಗಳನ್ನು ನಡೆಸಿ ಮೀಸಲಾತಿಯನ್ನು ಅಚ್ಚುಕಟ್ಟಾಗಿ ಜಾರಿ ಮಾಡಿದ್ದರೂ ರಾಜಕೀಯ ತೀರ್ಮಾನಗಳಿಂದಾಗಿ ಬಲಾಡ್ಯರು ಮೀಸಲಾತಿ ಪಡೆದು ಶೋಷಿತರ ಪಾಲನ್ನು ಕಬಳಿಸುತ್ತಿರುವುದು ಶೋಷನೀಯ.
ಕರ್ನಾಟಕ ರಾಜ್ಯದಲ್ಲಿ ಹಾವನೂರು ಆಯೋಗದ ವರದಿ 1975 ರ ಪ್ರಕಾರ ಸರ್ಕಾರದ ಆದೇಶದಂತೆ ಎಸ್.ಡಬ್ಲೂö.ಎಲ್.12 ಟಿ.ಬಿ.ಎಸ್.77, ಬೆಂಗಳೂರು ದಿನಾಂಕ:22-02-1977 ಪ್ರಕಾರ ಹಿಂದುಳಿದ ವರ್ಗಗಳಿಗೆ ಶೇ40% ರಷ್ಟು ಮೀಸಲಾತಿಯನ್ನು ಇಡಲಾಗಿತ್ತು. ತದ ನಂತರ ಸುಪ್ರಿಮ್ ಕೋರ್ಟಿನ ಆದೇಶದ ಪ್ರಕಾರ ಆಯೋಗ ರಚನೆ ಮಾಡಿ ಹಿಂದುಳಿದ ವರ್ಗಗಳ ವರದಿ ತಯಾರು ಮಾಡಲು ಕರ್ನಾಟಕ ರಾಜ್ಯದಲ್ಲೂ ಸಹ ಟಿ.ವೆಂಕಟಸ್ವಾಮಿ ಆಯೋಗ 1983 ರಲ್ಲಿ ರಚನೆಯಾಯಿತು. ಈ ಆಯೋಗವು 1986 ರಲ್ಲಿ ತನ್ನ ಸಂಪೂರ್ಣ ವರದಿಯನ್ನು ಸಲ್ಲಿಸಿತು. ಆದರೆ ಸರ್ಕಾರವು ವರದಿಯನ್ನು ಸ್ವೀಕರಿಸಲಿಲ್ಲ. ಸರ್ಕಾರವು ಮತ್ತೇ ಹೊಸದಾಗಿ ಅದೇ ವರ್ಷದಲ್ಲಿ ಅಂದರೆ 1986 ರಲ್ಲಿ ಓ.ಚೆನ್ನಪ್ಪ ರೆಡ್ಡಿ ರವರ ಮತ್ತೊಂದು ಆಯೋಗವನ್ನು ರಚನೆ ಮಾಡಿತು. ಈ ಆಯೋಗವು ಕಾರ್ಯನಿರತರಾಗಿ ವರದಿ ಸಂಪೂರ್ಣಗೊಂಡು ನೀಡುವಷ್ಟರಲ್ಲಿ ಬಹಳಷ್ಟು ಮುಂದುವರೆದ ಜಾತಿಗಳನ್ನು ಅಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದುವರೆದಿರುವ ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲಾಯಿತು. ಹಾಗೇಯೆ 1986 ರಲ್ಲಿ ಆಯೋಗದ ವರದಿ ಹೊರ ಬಿದ್ದಿತು. ಅದರಲ್ಲಿ ಮೇಲೆ ಹೇಳಿದ ಮುಂದುವರೆದ ಜಾತಿಗಳು ಎಂದು ಘೋಷಿಸಿದ್ದರೂ ಕೂಡ ಸರ್ಕಾರ ಯಾವುದೇ ಬದಲಾವಣೆ ಮಾಡದೆ ಮತ್ತೋಂದು ಸರ್ಕಾರಿ ಆದೇಶ ಹೊರಡಿಸಿತ್ತು. (ಇತರೆ ಮುಂದುವರೆದ ಮೇಲ್ಕಂಡ ಜಾತಿಗಳನ್ನು ಸೇರಿಸಲಾಯಿತು) ಆದೇಶ ಸಂಖ್ಯೆ:ಎಸ್.ಡಬ್ಲೂ. ಎಲ್. 66 ಬಿ.ಸಿ.ಎ.86 ಬೆಂಗಳೂರು. ದಿನಾಂಕ:13-10-1986. ಈ ವರದಿಯನ್ನು 1990 ರಲ್ಲಿ ಸರ್ಕಾರಕ್ಕೆ ಸಲ್ಲಿಸಿತು. ಸರ್ಕಾರ ಈ ವರದಿಯನ್ನು ಸ್ವೀಕರಿಸಿ ಈ ಮೂಲಕ ಸರ್ಕಾರ ಆದೇಶಗಳಿಗೆ ಅನುಗುಣವಾಗಿ ಕರ್ನಾಟಕ ರಾಜ್ಯ ಎಸ್ಸಿ ಎಸ್ಟಿ/ ಮತ್ತು ಇತರೆ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸಿನ ಪ್ರಕಾರ ಭಾರತದ ಸಂವಿದಾನದ ಅನುಚ್ಚೇದ 15(4) ರಂತೆ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಮತ್ತು ಅನುಚ್ಚೇದ 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಗಳು ಆದೇಶ ಕುರಿತು ಅಧಿಕೃತ ಆದೇಶ ಹೊರಡಿಸಿತು. ತದ ನಂತರ ಸುಪ್ರಿಂಕೊರ್ಟಿನಲ್ಲಿ 1992 ರಲ್ಲಿ ಇಂದಿರ ಸಹಾನಿ ಕೇಸಿನ ವಿಚಾರಣೆಯಲ್ಲಿ 9 ಸದಸ್ಯರ ನ್ಯಾಯಮೂರ್ತಿಗಳ ಪೀಠವು ಪ್ಯಾರ 847 ರಲ್ಲಿ ಇದೆ. ಆದೇಶದಲ್ಲಿ ಸುಪ್ರಿಂಕೊರ್ಟ್ ದೇಶದ ಎಲ್ಲಾ ರಾಜ್ಯಗಳಿಗೆ ತಮ್ಮದೇ ಆದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಲು ನಿರ್ದೇಶನ ನೀಡಲಾಯಿತು. ಅದೇ ಪ್ರಕಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ 1995 ಜಾರಿಗೆ ಬಂತು. ಅದರ ಪ್ರಕಾರ ಅಂದಿನ ಸರ್ಕಾರವು ಪ್ರೋ.ರವಿವರ್ಮ ಕುಮಾರ್ ರವರ ಮೊದಲ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಿತು. ಈ ಆಯೋಗವು ಕಾರ್ಯ ನಿರ್ವಹಿಸಿ 2000 ನೇ ಇಸವಿಯಲ್ಲಿ ತಮ್ಮ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತು. ಸರ್ಕಾರವು ಸಹ ಅದನ್ನು ಒಪ್ಪಿ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸರ್ಕಾರಿ ಆದೇಶ ಸಂಖ್ಯೆ ಎಸ್.ಡಬ್ಲೂ.ಡಿ. 225 ಬಿ.ಸಿ.ಎ. 2000 ಬೆಂಗಳೂರು. ದಿನಾಂಕ:30-03-2002 ರ ಅನ್ವಯ ಪರಿಷ್ಕರಣೆ ಮಾಡಿ ಸರ್ಕಾರಿ ಆದೇಶ ಹೊರಡಿಸಿತು. ತದ ನಂತರ 2002ರ ನಂತರ ಯಾವುದೇ ಆಯೋಗದ ವರದಿಯನ್ನು ಪರಿಗಣಿಸಿ ಮರು ಪರಿಷ್ಕರಣೆ ಮಾಡಿರುವುದಿಲ್ಲ. ಮೇಲ್ಕಂಡ 1995ರ ಸೆಕ್ಷನ್ 11ರ ಪ್ರಕಾರ ಮೇಲ್ಕಂಡAತೆ ಸರ್ಕಾರವು ಪ್ರತಿ 10 ವರ್ಷಕೊಮ್ಮೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ಹಿಂದುಳಿದ ಎಲ್ಲಾ ಜಾತಿಗಳ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಆರ್ಥಿಕ ಮತ್ತು ಎಲ್ಲಾ ರೀತಿಯಿಂದಲೂ ಅವರ ಹಿಂದುಳಿದಿರುವಿಕೆಯ ಗುಣಲಕ್ಷಣಗಳ ಬಗ್ಗೆ ಸಂಪೂರ್ಣ ಅಧ್ಯಯನವನ್ನು ನಡೆಸಿ ಸಂವಿಧಾನದ 15 ಮತ್ತು 16 ಹಾಗೂ 340ನೇ ವಿಧಿಗಳಿಗೆ ಅನುಸಾರ ಅರ್ಹರಾಗಿ ಇರುವವರ ವಿಧಿ ವಿಧಾನಗಳ ಪ್ರಕಾರ ದತ್ತಾಂಶಗಳ ವರದಿಯನ್ನು ಪಡೆದು ಹಿಂದುಳಿದ ವರ್ಗಗಳ ಪರಿಷ್ಕುçತ ಪಟ್ಟಿ ಮಾಡಿ ಆದೇಶ ಹೊರಡಿಸುವುದು ಸರ್ಕಾರದ ಆದ್ಯ ಕರ್ತವ್ಯ ಇದ್ದರೂ ಸರ್ಕಾರವು ಇದನ್ನು ಲೆಕ್ಕಿಸದೇ ಕೆಲವು ಮುಂದುವರೆದ ಪ್ರಬಲ ಜಾತಿಗಳ ಕೂಗಿಗೆ ಒಗೂಟ್ಟು ಆ ಜಾತಿಗಳ ಓಲೈಕೆಗಾಗಿ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ ವಾಸ್ತವವಾಗಿ, ಪ್ರಮಾಣಿಕವಾಗಿ, ಎಲ್ಲಾ ರೀತಿಯಿಂದಲೂ ಹಿಂದಿಳಿರುವಿಕೆಯ ಗುಣಲಕ್ಷಣಗಳುಳ್ಳ ಹಿಂದುಳಿದ ವರ್ಗಗಳ ಏಳಿಗೆಗೆ ಸರ್ಕಾರವು ಕುತ್ತು ತಂದAತಾಗಿ ಹಿಂದುಳಿದ ವರ್ಗಗಳಿಗೆ ಮಾಡಿದ ಅನ್ಯಾಯವಾಗಿರುತ್ತದೆ.
ಈ ಮೇಲಿನ ಎಲ್ಲಾ ವಿಷಯಗಳನ್ನು ಸರ್ಕಾರವು ಕುಲಂಕುಷವಾಗಿ ಪರಿಶೀಲಿಸಿ ಸಾಮಾಜಿಕ ನ್ಯಾಯ ಸೂತ್ರದಡಿ ಮತ್ತು ಅಸಮಾತೋಲನ ಉಂಟಾಗುವ ಅಪಾಯವನ್ನು ತಪ್ಪಿಸುವ ದೃಷ್ಠಿಯಿಂದ ಈಗಾಗಲೇ ಸಿದ್ದವಾಗಿರುವ ನ್ಯಾಯವಾದಿ ಕಾಂತರಾಜು ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿವಾರು ಸಮೀಕ್ಷೆಯನ್ನು ಈ ಕೂಡಲೇ ತಮ್ಮ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ರಾಜ್ಯ ಸರ್ಕಾರಕ್ಕೆ ವರದಿ ನೀಡಿ ರಾಜ್ಯ ಸರ್ಕಾರವು ವರದಿಯನ್ನು ಸ್ವೀಕರಿಸಿ ಕಳೆದ 20 ವರ್ಷಗಳಿಂದ ಹಿಂದುಳಿದ ವರ್ಗಗಳ ಪರಿಷ್ಕುçತ ಪಟ್ಟಿಯನ್ನು ಪರಿಷ್ಕರಣೆ ಮಾಡದೆ ಇರುವ ಕಾರಣ ಮತ್ತೊಮ್ಮೆ ಪರಿಷ್ಕರಣೆ ಮಾಡಿ ವರದಿ ಬಿಡುಗಡೆಗೊಳಿಸಿ ಅದನ್ನು ಅಂಗೀಕರಿಸಿ ಶೀಘ್ರ ಜಾರಿಗೆ ತರಬೇಕು ಇಲ್ಲವಾದಲ್ಲಿ ನಮ್ಮ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟವು ಮೇಲ್ಕಂಡ ವಿಷಯಗಳ ಬಗ್ಗೆ ಒತ್ತಾಯವನ್ನು ಮಾಡುತ್ತದೆ. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಾಗೂ ಅವಶ್ಯವಿದ್ದಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಲಿದೆ. ಎಂದು ತಮ್ಮ ಗಮನಕ್ಕೆ ತರಲು ನಮ್ಮ ಒಕ್ಕೂಟವು ಬಯಸುತ್ತದೆ.
by gadi@dmin | Nov 18, 2023 | Home Page - Highlights ( Red Background ), Scrolling News ( Right to Left ), ರಾಜ್ಯ
ವಿಧಾನ ಸಭೆಯ ವಿಪಕ್ಷ ನಾಯಕರಾಗಿ ಸಾಮ್ರಾಟ್ ಅಶೋಕ
ಬೆಂಗಳೂರು- ಬಿಜೆಪಿ ಶಾಸಕಾಂಗ ನಾಯಕರಾಗಿ ಹಿರಿಯ ನಾಯಕ ಆರ್.ಅಶೋಕ್ ಆಯ್ಕೆ
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ನಂತರ ಆರ್.ಅಶೋಕ್ ಹೆಸರು ಘೋಷಣೆ ಆ ಮೂಲಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಆರ್.ಅಶೋಕ್. ಇತ್ತೀಚೆಗಷ್ಟೆ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ವಿಜೇಯೆಂದ್ರ ರವರನ್ನು ಆಯ್ಕೆ ಮಾಡಿದ ನಂತರ ನಡೆದ ಮೊದಲ ಶಾಸಕಾಂಗ ಸಭೆಯಲ್ಲಿ ವೀಕ್ಷಕರ ಸಮ್ಮುಖದಲ್ಲಿ ಆಯ್ಕೆ ಮಾಡಲಾಗಿದೆ.
ಮಾಜಿ ಉಪ ಮುಖ್ಯಮಂತ್ರಿಗಳು, ಶಾಸಕರು, ಪದ್ಮನಾಭನಗರ ವಿಧಾನಸಭಾ ಕ್ಷೇತ್ರ
ಶ್ರೀ ಆರ್.ಅಶೋಕ, (ಜಾಲಹಳ್ಳಿ ರಾಮಯ್ಯ ಅಶೋಕ) ಇವರು 1957 ಜುಲೈ 1 ರಂದು ಜಾಲಹಳ್ಳಿಯಲ್ಲಿ ತಂದೆ ಶ್ರೀ ರಾಮಯ್ಯ, ತಾಯಿ ಶ್ರೀಮತಿ ಆಂಜಿನಮ್ಮರವರ ಮಗನಾಗಿ ಜನಿಸುತ್ತಾರೆ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಜಾಲಹಳ್ಳಿಯಲ್ಲಿ ಪೂರೈಸಿದ್ದು, ವಿ.ವಿ.ಪುರಂ ಕಾಲೇಜಿನಲ್ಲಿ ಬಿ.ಎಸ್‌ಸಿ. ಪದವಿಯನ್ನು ಪಡೆದಿರುತ್ತಾರೆ. ತಮ್ಮ 10ನೇ ವಯಸ್ಸಿನಲ್ಲಿಯೇ ಆರ್.ಎಸ್.ಎಸ್.ಗೆ ಸೇರ್ಪಡೆಯಾಗಿ, 1975-77ರಲ್ಲಿ ಪ್ರಧಾನಮಂತ್ರಿಗಳಾದ ಶ್ರೀಮತಿ ಇಂದಿರಾಗಾಂಧಿಯವರು ವಿದಿಸಿದ್ದಂತಹ ತುರ್ತು ಪರಿಸ್ಥಿತಿಯ ಸಮಯದಲ್ಲಿ ಶ್ರೀ ಎಲ್.ಕೆ ಅಡ್ವಾಣಿಯಂತಹ ಹಿರಿಯ ನಾಯಕರೊಂದಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಒಂದು ತಿಂಗಳುಗಳ ಕಾಲ ಕಾರಾಗೃಹ ವಾಸವನ್ನು ಅನುಭವಿಸಿರುತ್ತಾರೆ. 1995ರಲ್ಲಿ ಬಿಜೆಪಿಯ ಬೆಂಗಳೂರು ನಗರ ಅಧ್ಯಕ್ಷರಾಗಿ ಸರ್ಕಾರದ ವಿರುದ್ಧ ಹೊರಾಡಿರುತ್ತಾರೆ.
1997 ರಲ್ಲಿ ಕರ್ನಾಟಕ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ ನಂತರ 1999 ಮತ್ತು 2004ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿರುತ್ತಾರೆ. ಕ್ಷೇತ್ರ ಪುನರ್ ವಿಂಗಡನೆಯ ನಂತರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ 2008, 2013, 2018, 2023 ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗಳಲ್ಲಿ ಸತತವಾಗಿ ವಿಜಯ ಸಾಧಿಸುವ ಮೂಲಕ 7ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುತ್ತಾರೆ.
2006-2007ರಲ್ಲಿನ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
2006-2007ರಲ್ಲಿನ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಸಮಯದಲ್ಲಿ ಮಡಿಲು ಕಿಟ್ ಎಂಬ ನೂತನ ಯೋಜನೆಯನ್ನು ಅನುಷ್ಠಾನ ಗೊಳಿಸುವ ಮೂಲಕ ಅಸಂಖ್ಯಾತ ಬಡ ಕುಟುಂಬದ ನವಜಾತ ಶಿಶುಗಳಿಗೆ ಮಡಿಲು ಕಿಟ್ ದೊರೆಯುವಂತೆ ಮಾಡಿದ್ದಾರೆ. ಜೊತೆಗೆ ಹಲವು ಆಸತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಿರುತ್ತಾರೆ. ಗ್ರಾಮೀಣ ಭಾಗದಲ್ಲಿಯೂ ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿ ಹಲವು ನಕಲಿ ಡಾಕ್ಟರ್‌ಗಳ ಹಾವಳಿಯನ್ನು ತಡೆಯಲು ಶ್ರಮಿಸಿರುತ್ತಾರೆ.
2008-2010ರ ಶ್ರೀ ಬಿ.ಎಸ್ ಯಡಿಯೂರಪ್ಪರವರ ಸರ್ಕಾರದಲ್ಲಿ ಸಾರಿಗೆ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರ ಖಾತೆಗಳ ಸಚಿವರಾಗಿ ಹತ್ತು ಹಲವು ಜನಾನುರಾಗಿ ಕಾರ್ಯಗಳನ್ನು ಮಾಡಿದ್ದಾರೆ, ಸಾರಿಗೆ ಇಲಾಖೆಯ ಆಧುನೀಕರಣಕ್ಕೆ ಮತ್ತು ನೂತನ ಸಾರಿಗೆ ಬಸ್‌ಗಳ ವ್ಯವಸ್ಥೆ ಮತ್ತು ನೂತನ ಬಸ್ ನಿಲ್ದಾಣಗಳ ನಿರ್ಮಾಣದಲ್ಲಿ ತಮ್ಮದೆ ಆದ ಕೊಡುಗೆಯನ್ನು ನೀಡಿದ್ದಾರೆ.
2010-2012) ಸಾರಿಗೆ ಸಚಿವರು ಮತ್ತು ಗೃಹ ಸಚಿವರಾಗಿರುವ ಸಮಯದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಗೃಹ ಇಲಾಖೆಯ ಧಕ್ಷ ನಿರ್ವಹಣೆಯನ್ನು ಮಾಡಿರುತ್ತಾರೆ, ಜೊತೆಗೆ ಜನಕ್ಕೆ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ
2012-2013 ರಲ್ಲಿ ಶ್ರೀ ಜಗದೀಶ್ ಶೆಟ್ಟರ್ ರವರ ನೇತೃತ್ವದ ಸರ್ಕಾರದಲ್ಲಿ ಸಾರಿಗೆ ಮತ್ತು ಗೃಹ ಸಚಿವರಾಗಿ, ಉಪ ಮುಖ್ಯಮಂತ್ರಿಗಳಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
2010 ರಲ್ಲಿ ಮತ್ತು 2015 ರಲ್ಲಿ ನಡೆದ ಬಿ.ಬಿ.ಎಂ.ಪಿಯ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಿಸಲು ಇವರ ಶ್ರಮವು ಅತೀ ಹೆಚ್ಚಿನದಾಗಿರುತ್ತದೆ.
2019ರ ಶ್ರೀ ಬಿ.ಎಸ್.ಯಡಿಯೂರಪ್ಪ ರವರ ನೇತೃತ್ವದ ಸರ್ಕಾರದಲ್ಲಿ ಮತ್ತು 2021ರ ಶ್ರೀ ಬಸವರಾಜ ಬೊಮ್ಮಾಯಿರವರ ನೇತೃತ್ವದ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡಿರುತ್ತಾರೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಹಳ್ಳಿಯಲ್ಲೇ ವಾಸ್ತವ್ಯ ಹೂಡುವ ಮೂಲಕ ಸ್ಥಳದಲ್ಲಿಯೇ ಹಲವಾರು ಸಮಸ್ಯೆಗಳನ್ನು ಬಗೆಹರಿಸಿರುತ್ತಾರೆ. ಮನೆ ಬಾಗಿಲಿಗೆ ಪಿಂಚಣಿ ಮೂಲಕ ಅಶಕ್ತರು ವೃದ್ಧರು ವಿಧವೆಯರಿಗೆ ಮನೆ ಬಾಗಿಲಲ್ಲೆ ಪಿಂಚಣಿ ಪಡೆಯುವ ವ್ಯವಸ್ಥೆಯನ್ನು ಮಾಡಿರುತ್ತಾರೆ. ಹಲವಾರು ತಾಲ್ಲೂಕು ಆಡಳಿತ ಸೌಧಗಳನ್ನು ನಿರ್ಮಿಸುವ
ಮೂಲಕ ಹಾಗೂ ತಾಲ್ಲೂಕು ಆಡಳಿತ ಸೌಧಗಳಿಗೆ ಜಾಗವನ್ನು ಮೀಸಲಿಡುವ ಮೂಲ2/3 ಆಡಳಿತ ವ್ಯವಸ್ಥೆಯು ಸುಗಮವಾಗಿ ಸಾಗುವಂತೆ ಮಾಡಿದ್ದಾರೆ. 79/ಎ ಮತ್ತು 79/ಬಿ ಗಳನ್ನು ರದ್ದು ಮಾಡುವ ಮೂಲಕ ರೈತರಲ್ಲದವರು ಸಹ ಕೃಷಿ ಭೂಮಿಯನ್ನು ಖರೀದಿ ಮಾಡಿ ಕೃಷಿಯಲಿ ತೊಡಗುವಂತೆ 2019 ರ ಶ್ರೀ. ಬಿ.ಎಸ್.ಯಡಿಯೂರಪ್ಪ ರವರ ನೇತೃತ್ವದ ಸರ್ಕಾರದಲ್ಲಿ ಮತ್ತು 2021ರ ಶ್ರೀ ಬಸವರಾಜ ಬೊಮ್ಮಾಯಿರವರ ನೇತೃತ್ವದ ಸರ್ಕಾರದಲ್ಲಿ ರಾಜ್ಯ ವಿಪತ್ತು ನಿರ್ವಹಣೆಯ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಆದಂತಹ ಪ್ರಾಕೃತಿಕ ವಿಕೋಪಗಳಿಗೆ ಸೂಕ್ತ ಪರಿಹಾರ ಕೊಡಿಸುವಲ್ಲಿ ಶ್ರಮವಹಿಸಿರುತ್ತಾರೆ. ಈ 2019 ರ ಕರೋನ ವೈರಸ್ ಎಂಬ ಜಾಗತಿಕ ಮಹಾಮಾರಿ ಜನರನ್ನು ಬಲಿ ಪಡೆಯುತ್ತಿರುವ ಸಂದರ್ಭದಲ್ಲಿ ಜನತೆಗೆ ಸೂಕ್ತ ವೈದ್ಯಕೀಯ ನೆರವನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ. ಕರೋನ ಮಹಾಮಾರಿಯಿಂದ ಮೃತಪಟ್ಟ ವಾರಸುದಾರರಿಲ್ಲದ ಸಾವಿರಾರು ಅಸ್ಥಿಗಳನ್ನು ಕಾವೇರಿ ನದಿಯಲ್ಲಿ ಸೂಕ್ತ ವಿಧಿ ವಿಧಾನಗಳ ಮೂಲಕ ವಿಸರ್ಜಿಸಿ ನಾಡಿನ ಮತ್ತು ಸಂಸ್ಕೃತಿಯ ಘನತೆಯನ್ನು ಎತ್ತಿ ಹಿಡಿದವರಾಗಿರುತ್ತಾರೆ.
2023 ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ 55,175/- ಮತಗಳ ಅಂತರದಿಂದ ಆಯ್ಕೆಯಾದ ಶಾಸಕರಾಗಿರುತ್ತಾರೆ.
ಸತತ 7 ಬಾರಿ ಒಂದೇ ಪಕ್ಷದಿಂದ ಗೆಲ್ಲುತ್ತಾ, ಸುಮಾರು 45 ವರ್ಷಗಳಿಂದ ಪಕ್ಷವು ವಹಿಸಿರುವ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಣೆಯನ್ನು ಮಾಡುತ್ತಿದ್ದಾರೆ.
ಬೆಂಗಳೂರಿಗೆ ಮುಖ್ಯಮಂತ್ರಿ ಸ್ಥಾನವಾಗಲೀ ಅಥವಾ ವಿರೋದ ಪಕ್ಷದ ನಾಯಕರ ಸ್ಥಾನವಾಗಲೀ ಇದುವರೆವಿಗೂ ದೊರಕಿರುವುದಿಲ್ಲ, ಮೊದಲ ಬಾರಿ ಈ ಸ್ಥಾನ ಬೆಂಗಳೂರಿಗೆ ದೊರೆತಂತಾಗಿರುತ್ತದೆ.
by gadi@dmin | Nov 17, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ರಾಜ್ಯ
ಮನುಷ್ಯನ ಎಲ್ಲ ಪ್ರಶ್ನೆಗಳಿಗೂ ವಚನದಲ್ಲಿ ಉತ್ತರ ಇದೆ : ಬಸವರಾಜ ಬೊಮ್ಮಾಯಿ
ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಬಸವಣ್ಣ ಪ್ರೇರಣೆ : ಬಸವರಾಜ ಬೊಮ್ಮಾಯಿ
ಬೆಂಗಳೂರು: ಮನುಷ್ಯನ ಎಲ್ಲ ಪ್ರಶ್ನೆಗಳಿಗೂ ವಚನದಲ್ಲಿ ಉತ್ತರ ಇದೆ. ಕಳಬೇಡ ಕೊಲಬೇಡ ಎನ್ನುವುದು ನಮ್ಮ ಧ್ಯೇಯವಾಗಬೇಕು. ಅದನ್ನು ಪಾಲಿಸಿದರೆ ಮನುಷ್ಯ ಸಂತೋಷ ಮತ್ತು ಸಮಾಧಾನದಿಂದ ಸರಳ ಜೀವನ ನಡೆಸಬಹುದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಇಂದು ಬೆಂಗಳೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಹಾಗೂ ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶರಣ ಸಾಹಿತ್ಯ ವಚನದ ರೂಪದಲ್ಲಿ ಬರದೇ ಇದ್ದರೆ ಕನ್ನಡ ಸಾಹಿತ್ಯ ಎಷ್ಟು ಬಡವಾಗುತ್ತಿತ್ತು ಎಂದು ಎಲ್ಲರೂ ಯೋಚನೆ ಮಾಡಬೇಕಿದೆ. ಮಾತಿಗೆ ಅರ್ಥ ಬರಬೇಕಾದರೆ ನಡೆ ನುಡಿ ಬಹಳ ಮುಖ್ಯ, ಜ್ಞಾನ, ವಿಜ್ಞಾನ ತಂತ್ರಜ್ಞಾನ ಎಲ್ಲವೂ ಇದೆ. ಅದರಲ್ಲಿ ನಮ್ಮ ತನದ ಭಾವ ಮೂಡಬೇಕಿರುವುದು ಮುಖ್ಯವಾಗಿದೆ. ವಚನಗಳು ಶುದ್ದ ಕನ್ನಡದಲ್ಲಿ ಶರಣರು ಕರ್ನಾಟಕಕ್ಕೆ ಕೊಟ್ಟಿರುವ ಶಾಸ್ವತ ಕೊಡುಗೆಯಾಗಿದೆ ಎಂದು ಹೇಳಿದರು.
ಇವನಾರವ ಇವನಾರವ ಎನ್ನುವ ಬದಲು ಇವನಮ್ಮವ ಎನ್ನುವ ವಚನದಲ್ಲಿ ಸಮಾನತೆ ಅಡಗಿದೆ. ದಯವೇ ಧರ್ಮದ ಮೂಲವಯ್ಯ ಎನ್ನುವ ವಚನದಲ್ಲಿ ಧರ್ಮದ ಸಾರ ಅಡಗಿದೆ. ಬಸವಣ್ಣನವರು ತಾವಷ್ಟೇ ವಚನ ಸಾಹಿತ್ಯ ನೀಡದೇ ಎಲ್ಲ ಸಮುದಾಯಗಳ ಅನುಭವಗಳನ್ನು ವಚನಗಳ ಮೂಲಕ ತರುವ ಪ್ರಯತ್ನ ಮಾಡಿದ್ದಾರೆ. ಬಸವಣ್ಣನವರು ದೇವರು ಮತ್ತು ಮನುಷ್ಯರ ನಡುವೆ ಮಧ್ಯವರ್ತಿಗಳನ್ನು ತೆಗೆದು ಹಾಕಿದ್ದಾರೆ. ಇದು ಬಹಳ ಚಿಂತನೆ ಮಾಡುವ ವಿಚಾರ. ನಾನು ಮತ್ತು ನನ್ನ ಆತ್ಮಸಾಕ್ಷಿಯ ನಡುವೆ ಯಾರೂ ಬೇಕಾಗಿಲ್ಲ ಅಂತ ಹೇಳಿದ್ದಾರೆ ಎಂದರು.
ಕ್ಷಣ ಹೊತ್ತು ಅಣಿ ಮುತ್ತು ಕೃತಿಕಾರ ಷಡಕ್ಷರಿಯವರು ಎಂದೂ ಕೂಡ ಅಸಮಾಧಾನಗೊಂಡಿಲ್ಲ. ಅವರು ಯಾವಾಗಲೂ ಸಮಾಧಾನದಿಂದ ಎಲ್ಲರೊಂದಿಗೆ ಬೆರೆಯುವ ಗುಣ ಅನುಕರಣೀಯ ಎಂದರು.
ಸಿದ್ದರಾಮಯ್ಯ ಅವರ ನಡೆ ಭಿನ್ನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಮೂಲ ಪ್ರೇರಣ ಬಸವಣ್ಣ ಮತ್ತು ವಚನ ಸಾಹಿತ್ಯ. ಅವರು ಬಸವಣ್ಣನವರ ತತ್ವಗಳನ್ನು ನಂಬಿದವನು ಎಂದು ಬಲವಾಗಿ ಹೇಳುತ್ತಾರೆ. ಹೀಗಾಗಿ ಅವರ ಕೆಲಸಗಳು ಮತ್ತು ನಡೆ ಎಲ್ಲರಿಗಿಂತ ಬಿನ್ನವಾಗಿ ಕಾಣುತ್ತದೆ. ಸಮಾಜದ ತುಳಿತಕ್ಕೊಳಗಾದವರ ಸಮಾನತೆಗಾಗಿ ನಿರಂತರವಾಗಿ ಕೆಲಸ ಮಾಡುವುದೇ ಒಬ್ಬ ನಿಜವಾದ ನಾಯಕನ ಜವಾಬ್ದಾರಿ. ರಾಜಕಾರಣಿಯ ಕಣ್ಣು ಮುಂದಿನ ಚುನಾವಣೆಯ ಮೇಲೆ ಇದ್ದರೆ, ಒಬ್ಬ ಸ್ಟೇಟ್ಸ್ ಮನ್ ಕಣ್ಣು ಮುಂದಿನ ಜನಾಂಗದ ಮೇಲೆ ಇದೆ. ನಾವು ವಿರೋಧ ಪಕ್ಷದಲ್ಲಿ ಇದ್ದರೂ ಕೂಡ ಸಿದ್ದರಾಮಯ್ಯ ಅವರ ಈ ವಿಚಾರಧಾರೆಯನ್ನು ನಾವು ಮೊದಲಿನಿಂದಲೂ ನೋಡಿಕೊಂಡು ಬಂದಿದ್ದೇವೆ. ಅವರ ನಡೆ ನುಡಿ ಎಲ್ಲರಿಗೂ ಅರ್ಥವಾಗಿದೆ. ಅವರಿಂದ ಶರಣ ಸಾಹಿತ್ಯ ಪ್ರಶಸ್ತಿ ನೀಡಿರುವುದು ಅತ್ಯಂತ ಸೂಕ್ತವಾಗಿದೆ. ಇದರಿಂದ ಅವರಲ್ಲಿ ಇನ್ನಷ್ಟು ಬಸವ ತತ್ವ ವಿಚಾರಗಳು ಗಟ್ಟಿಯಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ವಿ.ಸೋಮಣ್ಣ, ಕೃತಿಕಾರ ಷಡಕ್ಷರಿ ಸೇರಿದಂತೆ ಗಣ್ಯರು ಹಾಜರಿದ್ದರು.
by gadi@dmin | Nov 17, 2023 | Home Page - Highlights ( Red Background ), Top ಸುದ್ದಿಗಳು, ರಾಜ್ಯ
ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ಅಂತರವೇ ಇಲ್ಲವಾಗಿದೆ
ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು: ಕೆ.ವಿ.ಪ್ರಭಾಕರ್
ಬೆಂಗಳೂರು ನ 16: ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು. ಬಳಸಿಕೊಳ್ಳುವವರ ಮನಸ್ಥಿತಿಗೆ ತಕ್ಕಂತೆ ಫಲಿತಾಂಶ ಇರುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಕೃತಕ ಬುದ್ಧಿಮತ್ತೆಯ ಕಾಲಘಟ್ಟದಲ್ಲಿ ಮಾಧ್ಯಮಗಳು ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿಗೆ ರಶ್ಮಿಕಾ ಮಂದಣ್ಣ ಮತ್ತು ಕತ್ರಿನಾ ಕೈಫ್ ಅವರ ಡೀಪ್ ಫೇಕ್ ವಿಡಿಯೊ ವೈರಲ್ ಆಗಿತ್ತು. ಅದು ಫೇಕ್ ಎಂದು ಗೊತ್ತಾಗುವುದರೊಳಗೆ ಅದನ್ನು ಲಕ್ಷಾಂತರ ಮಂದಿ ಅಸಲಿ ಎಂದೇ ನಂಬಿ ಬಿಟ್ಟಿದ್ದರು. ರಶ್ಮಿಕಾ ಅವರ ಬದಲಿಗೆ ಯಾವುದೋ ಧಾರ್ಮಿಕ ನಾಯಕರ, ರಾಜಕೀಯ ನಾಯಕರ ಡೀಪ್ ಫೇಕ್ ವಿಡಿಯೊ ಹಾಕಿ ನಕಲಿ ಸಂದೇಶ ಕೊಟ್ಟಿದ್ದರೆ ಅದು ನಕಲಿ ಎಂದು ಗೊತ್ತಾಗುವುದರೊಳಗೆ ಭಾರೀ ಅನಾಹುತಗಳನ್ನು ಮಾಡಿ ಬಿಡುತ್ತಿತ್ತು. ಹೀಗಾಗಿ ಯಾವುದೇ ತಂತ್ರಜ್ಞಾನ ಅದನ್ನು ಯಾರು ಬಳಸುತ್ತಾರೆ ಎನ್ನುವುದರ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ ಎಂದರು.
ಪತ್ರಿಕೋದ್ಯಮ ತನ್ನ ವೇಗದಲ್ಲಿ ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ವ್ಯತ್ಯಾಸವನ್ನೇ ಅಳಿಸಿಬಿಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಈಗ ಪತ್ರಿಕೋದ್ಯಮದಲ್ಲಿ ಊಹಾ ಪತ್ರಿಕೋದ್ಯಮ ಎನ್ನುವ ಅನಾಹುತಕಾರಿ ಬೆಳವಣಿಗೆ ಶುರುವಾಗಿದೆ. ಈ ಊಹೆಗೆ ಮಿತಿಯೇ ಇಲ್ಲ. ಕಣ್ಣ ಮುಂದಿರುವ ಸತ್ಯವನ್ನು ತನಗೆ ಬೇಕಾದಂತೆ ಊಹಾ ಪತ್ರಿಕೋದ್ಯಮ ಚಿತ್ರಿಸುತ್ತಿದೆ ಎಂದರು.
ನಿತ್ಯದ ಅಗತ್ಯ ವಸ್ತು ಸಂಗತಿಗಳಲ್ಲಿ ಪತ್ರಿಕೆಗಳೂ ಸೇರಿವೆ. ಪತ್ರಿಕೆಗಳ ವಿಶ್ವಾಸಾರ್ಹತೆ ಉಳಿದ ಮಾಧ್ಯಮಗಳಿಗಿಂತ ಹೆಚ್ಚಾಗಿದೆ. ಹೀಗಾಗಿ ಇತರೆ ಯಾವುದೇ ಮೂಲದಿಂದ ಸುದ್ದಿ ಬಂದರೂ ಅದರ ಸತ್ಯಾಸತ್ಯತೆಗೆ ಜನ ಪತ್ರಿಕೆಗಳ ಮೇಲೆ ಅಬಲಂಬಿತರಾಗಿದ್ದಾರೆ. ಸಮಾಜ ಮತ್ತು ಸರ್ಕಾರದ ನಡುವೆ ಪತ್ರಿಕೆಗಳು ಸೇತುವೆ ಇದ್ದಂತೆ ಎಂದು ಅಭಿಪ್ರಾಯಪಟ್ಟರು.
ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ವಿಜ್ಞಾನ ಬರಹಗಾರರಾದ ನಾಗೇಶ್ ಹೆಗ್ಡೆ, ತಂತ್ರಜ್ಞಾನ ವಿಶ್ಲೇಷಕ ಶ್ರೀನಿಧಿ ಮತ್ತು ಕಾವ್ಯಶ್ರೀ, ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ರೂಪ ಸೇರಿ ಹಲವರು ಉಪಸ್ಥಿತರಿದ್ದರು.
by gadi@dmin | Nov 17, 2023 | Home Page - Highlights ( Red Background ), Top ಸುದ್ದಿಗಳು, ರಾಜ್ಯ
ಹಾಲಿ ಮಾಜಿ ಹಳೇ ಸ್ನೇಹಿತರು ಒಂದಾದ ಸಮಯ..,
ಸಿದ್ದರಾಮಯ್ಯ, ಬಸವರಾಜ್ ಬೊಮ್ಮಾಯಿ ಮತ್ತು ಸೋಮಣ್ಣ ರವರು
ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭದ ಸಂದರ್ಭದಲ್ಲಿ ಮುಖಾಮುಖಿಯಾಗ ಹಳೇ ಸ್ನೇಹಿತರುಗಳು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಮತ್ತು ಸೋಮಣ್ಣ ರವರು. ಹಳೇದಿನಗಳನ್ನು ಮೆಲಕು ಹಾಕಿದರು.
ಅದೊಂದು ಕಾಲ ಸುವರ್ಣ ಕಾಲವಿತ್ತು ಎಲ್ಲರೂ ಒಂದೇ ಪಟಾಲಂ ನಲ್ಲಿ ಇದ್ದರು.
by gadi@dmin | Nov 17, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ರಾಜ್ಯ
ನಮಗೆ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ ಅಲ್ಪ ಮಾನವರು ಮಾತ್ರ ಆಗಬಾರದು
ಬೆಂಗಳೂರು ನ 16: ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿಯನ್ನು ಬಿಡುಗಡೆ ಮಾತನಾಡಿದರು.
ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂಥಾ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು ಕರೆ ನೀಡಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು. ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ , ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು ಎಂದರು.
ದ್ವೇಷ, ವೈರತ್ವ , ಸೇಡು ಮನುಷ್ಯನ ಗುಣ ಅಲ್ಲ. ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ವಿವರಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ, ಸಾಹಿತಿ ಗೋ.ರು.ಚನ್ನಬಸಪ್ಪ , ರಮಣಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್.ಷಡಕ್ಷರಿ, ಸಂಪಾದಕರುಗಳಾದ ವಿಶ್ವೇಶ್ವರ್ ಭಟ್ ಮತ್ತು ರವಿ ಹೆಗಡೆ , ಲೇಖಕಿ ವೀಣಾ ಬನ್ನಂಜೆ, ಮನು ಬಳಿಗಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.