by gadi@dmin | Nov 15, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು
50ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ. ದಾಖಲೆ ನಿರ್ಮಾಣ
ಇಂದು ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ನಲ್ಲಿ ಶತಕ ಸಿಡಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲೀ. ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಠಿಸಿದ್ದಾರೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿದರು. ಈ ಮೂಲಕ 49 ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.
ಪ್ರಸ್ತುತ ವಿರಾಟ್ ಕೊಹ್ಲಿ 113 ಬಾಲ್ ಗೆ 117 ರನ್ ಗಳಿಸಿ ಔಟ್ ಆಗಿದ್ದಾರೆ. ಇಂಡಿಯಾ 43 ಓವರ್ ಗಳಲ್ಲಿ 214 ರನ್ ಬಾರಿಸಿದೆ.
by gadi@dmin | Nov 15, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ರಾಜ್ಯ
ಭಾಜಪ ದ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ
ಬೆಂಗಳೂರು,15. ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ಪದಗ್ರಹಣ
ಸಮಾರಂಭ ಜರುಗಿತು. ಪದಗ್ರಹಣ ಮಾಡಿ ಮಾತನಾಡಿದ ನೂತನ ಅಧ್ಯಕ್ಷರು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಎಲ್ಲರ ವಿಶ್ವಾಸ ಉಳಿಸಿಕೊಳ್ಳುತ್ತೇನೆ. ಎಲ್ಲ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸ ಇಟ್ಟು ಪಕ್ಷ ಅಧಿಕಾರ ನೀಡಿದೆ. ಆ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ.
ಸಮಾರಂಭದಲ್ಲಿ ಪಕ್ಷದ ಹಿರಿಯರು ಹಾಗೂ ಮಾಜಿ ಸಭಾಪತಿ ಡಿ ಹೆಚ್ ಶಂಕರಮೂರ್ತಿ ಅವರು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು, ಮಾಜಿ ಸಚಿವರಾದ ರಾಮಚಂದ್ರೇಗೌಡ ಅವರು, ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಹಾಗೂ ಮಾಜಿ ಸಚಿವರು, ಶಾಸಕರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
by gadi@dmin | Nov 12, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ರಾಜ್ಯ
ಕೆ ವಿ ಪ್ರಭಾಕರ್ ರವರಿಗೆ ಬೆಳಗಾವಿಯಲ್ಲಿ ಅಭಿಮಾನದ ಅಭಿನಂದನೆ
ಪತ್ರಕರ್ತರು ತಮ್ಮ ಮತ್ತು ಕುಟುಂಬದ ಕಾಳಜಿ ವಹಿಸಿ: ಕೆ.ವಿ.ಪ್ರಭಾಕರ್
ಬೆಳಗಾವಿ ನ 11: ಪತ್ರಕರ್ತರು ಒತ್ತಡದ ಬದುಕಿನಿಂದ ಹೊರ ಬಂದು ತಮ್ಮ ಮತ್ತು ಕುಟುಂಬದ ಆರೋಗ್ಯದ ಕಡೆ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಘಟಕ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಪತ್ರಕರ್ತರ ಸಮುದಾಯದ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿದೆ. ಮಾಸಾಶನ ಹೆಚ್ಚಳ ಸೇರಿ ಹಲವು ಬೇಡಿಕೆಗಳನ್ನು ಈ ಬಾರಿಯ ಬಜೆಟ್ ನಲ್ಲಿ ಈಡೇರಿಸಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ನೀಡಬೇಕು ಎನ್ನುವ ಬೇಡಿಕೆ ಕುರಿತಾಗಿ ಇಲಾಖೆಯಿಂದ ಒಂದು ಪ್ರಸ್ತಾವನೆಯನ್ನು ತರಿಸಿಕೊಳ್ಳಲಾಗಿದೆ. ಮುಂದಿನ ಬಜೆಟ್ ನಲ್ಲಿ ಈ ಬೇಡಿಕೆಗೆ ಸ್ಪಂದಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಗದಗ ಡಂಬಳ ತೋಂಟದಾರ್ಯ ಮಠದ ಶ್ರೀ ಡಾ. ಸಿದ್ದರಾಮ ಸ್ವಾಮೀಜಿ, ಎಸ್ಪಿ ಡಾ. ಭೀಮಾಶಂಕರ ಗುಳೇದ, ಶಾಸಕ ರಾಜು ಸೇಠ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾಧ್ಯಕ್ಷ ದಿಲೀಪ ಕುರಂದವಾಡೆ, ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ, ಮಹಾನಗರ ಪಾಲಿಕೆ ಕಮಿಷ್ನರ್ ಅಶೋಕ ದುಡಗುಂಟಿ, ಸರ್ವೋತ್ತಮ ಜಾರಕಿಹೊಳಿ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇತ್ತೀಚೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತರನ್ನೂ ಸನ್ಮಾನಿಸಲಾಯಿತು. 150 ಮಂದಿ ಹಿರಿಯ ಪತ್ರಿಕಾ ವಿತರಕರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೈಕಲ್ ಗಳನ್ನು ವಿತರಿಸಿದರು.
ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ತಂಡದ ಗಿರೀಶ್ ಕೋಟೆ, ಕೆ ಪಿ ಪುಟ್ಟಸ್ವಾಮಯ್ಯ, ಎಮ್ ಕೆ ಹೆಗಡೆ , ದೀಪಕ್ ಕರಾಡೆ, ಕೆ ಎಸ್ ನಾಗರಾಜ್ ರವರಿಗೂ ಇದೇ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
by gadi@dmin | Nov 10, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ರಾಜ್ಯ
ಬೆಳಗಾವಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ಕೆ ವಿ ಪ್ರಭಾಕರ್ ಅವರಿಗೆ ಅಭಿಮಾನದ ಅಭಿನಂದನೆ ಸಮಾರಂಭ.
ಬೆಳಗಾವಿ, 10, ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ಕೆ ವಿ ಪ್ರಭಾಕರ್ ರವರನ್ನು ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಗಿರೀಶ್ ಕೋಟೆ, ಶ್ರೀ ಕೆ ಪಿ ಪುಟ್ಟಸ್ವಾಮಯ್ಯ, ಶ್ರೀ ಕೆ ಎಸ್ ನಾಗರಾಜ್, ಶ್ರೀ ದೀಪಕ ಕರಾಡೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವವರ ಮಾಧ್ಯಮ ಸಲಹೆಗಾರರಾದ ಶ್ರೀ ಎಂ ಕೆ ಹೆಗಡೆಯವರನ್ನೂ ಕೂಡ, ಮಾಧ್ಯಮ ಕ್ಷೇತ್ರದಲ್ಲಿ ಗಣಣೀಯ ಸೇವೆ ಸಲ್ಲಿಸಿ ಈಗ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ, ಬೆಳಗಾವಿ ಪತ್ರಕರ್ತರಿಂದ ಅಭಿಮಾನದ ಅಭಿನಂದನೆ ಜರುಗಲಿದೆ.
ಕರ್ನಾಟಕ ಕಾರ್ನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲೆಯ ಘಟಕ ಮತ್ತು ವಿವಿಧ ಪತ್ರಿಕಾ ಸಂಘಗಳಿಂದ ಬೆಳಗಾವಿ ನಗರದಲ್ಲಿ ಶನಿವಾರ, ದಿನಾಂಕ 11-11-2023ರಂದು ನೆಹರು ನಗರದಲ್ಲಿರುವ ಕನ್ನಡ ಭವನದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭವು ಜಗದ್ಗುರುಗಳಾದ ಡಾ|| ತೋಂಟದ ಸಿದ್ದರಾಮ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೋಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಪತ್ರಿಕಾ ವಿತರಕರಿಗೆ ಸೈಕಲ್ ವಿತರಣೆಯನ್ನು ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀ ಲಕ್ಷ್ಮೀ ಹೆಬ್ಬಾಳಕರ ವಿತರಣೆ ಮಾಡಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಡಾ.ಭೀಮಶಿ ಜಾರಕಿಹೋಳಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಶ್ರೀ ಆಸೀಫ್ (ರಾಜು) ಶೇಠ, ಶ್ರೀ ಅಭಯ ಪಾಟೀಲ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು, ಅತಿಥಿಗಳಾಗಿ ಶ್ರೀ ಬಿ ಸಿ ಲೋಕೇಶ್, ಶ್ರೀ ಎಚ್.ಬಿ.ಮದನಗೌಡ, ಶ್ರೀ ಪುಂಡಲೀಕ ಬಾಳೋಜಿ, ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿಗಳಾದ ಶ್ರೀ ನಿತೇಶ್ ಪಾಟೀಲ, ನಗರ ಪೋಲಿಸ್ ಆಯುಕ್ತರಾದ ಶ್ರೀ ಎಸ್ ಎನ್ ಸಿದ್ದರಾಮಪ್ಪ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಭೀಮಾಶಂಕರ್ ಗುಳೇದ, ವಾರ್ತಾ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗುರುನಾಥ್ ಕಡಬೂರು, ಶ್ರೀಮತಿ ಶುಭಾ ರತ್ನಾಯಕ, ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ದಿಲೀಪಕುಮಾರ್ ಕುರುಂದವಾಡೆ ಹಾಗೂ ಹಲವಾರು ಸಂಘ ಸಂಸ್ಥಗಳು ಮತ್ತು ಜಿಲ್ಲೆಯ ಪತ್ರಕರ್ತ ಮಿತ್ರರು ಭಾಗವಹಿಲಿದ್ದಾರೆ.
ಸಮಯ : ಬೆಳಿಗ್ಗೆ.11ಕ್ಕೆ,
ದಿನಾಂಕ : 11.11.2023, ಶನಿವಾರ., ಸ್ಥಳ : ಕನ್ನಡ ಭವನ, ನೆಹರು ನಗರ, ಬೆಳಗಾವಿ