ಸೆ.17ರಂದು ಕಲ್ಬುರ್ಗಿಯಲ್ಲಿ 19ನೇ ಸಚಿವ ಸಂಪುಟ ಸಭೆ |

ಸೆ.17ರಂದು ಕಲ್ಬುರ್ಗಿಯಲ್ಲಿ 19ನೇ ಸಚಿವ ಸಂಪುಟ ಸಭೆ

ದಿನಾಂಕ 17-09-2024ರಂದು  ಮಂಗಳವಾರ ಸಂಜೆ 4.00 ಗಂಟೆಗೆ 2024ನೇ ಸಾಲಿನ 19ನೇ ಸಚಿವ ಸಂಪುಟ ಸಭೆಯನ್ನು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣ, ಮಿನಿ ವಿಧಾನಸೌಧ, ಕಲ್ಬುರ್ಗಿಯಲ್ಲಿ ನಡೆಸಲಾಗುವುದು, ಈ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ವಿಷಯಗಳನ್ನು ವಿಶೇಷವಾಗಿ ಪರಿಗಣಿಸಲಾಗುವುದು ಎಂದು ಸರ್ಕಾರದ ಸಚಿವ ಸಂಪುಟದ ಜಂಟಿ ಕಾರ್ಯದರ್ಶಿಯವರು ಸೂಚನಾ ಪತ್ರ  ಹೊರಡಿಸಿದ್ದಾರೆ.

 ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ CM

 ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ CM

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ CM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆಗಳನ್ನು ದತ್ತುಪಡೆದುಕೊಳ್ಳಲು ಮನವಿ : ಬಿಳಿಮಲೆ

ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆಗಳನ್ನು ದತ್ತುಪಡೆದುಕೊಳ್ಳಲು ಮನವಿ : ಬಿಳಿಮಲೆ

ಪ್ರತಿಯೊಬ್ಬ ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳನ್ನು ಸಬಲೀಕರಣಗೊಳಿಸಿ ಮಾದರಿ ಶಾಲೆಯನ್ನಾಗಿ ಮಾಡುವಂತೆ ರಾಜ್ಯದ 224 ಶಾಸಕರುಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ವಿಧಾನ ಸಭಾಧ್ಯಕ್ಷರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಹಾಗೂ ಎಲ್ಲ ಶಾಸಕರುಗಳಿಗೆ ತಾವು ಪ್ರತಿನಿಧಿಸುತ್ತಿರುವ ವಿಧಾನಸಭಾ ಕ್ಷೇತ್ರದಲ್ಲಿ ದುರಸ್ಥಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಸಬಲೀಕರಣಗೊಳಿಸಿ ಮಾದರಿ ಶಾಲೆಯನ್ನಾಗಿ ಮಾಡುವಂತೆ ಪ್ರಾಧಿಕಾರ ಎಲ್ಲರಿಗೂ ಪತ್ರ ಬರೆದಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯದಲ್ಲಿ ನಿರಂತರ ಚರ್ಚೆಯ ಮೂಲಕ ಸರ್ಕಾರಿ ಕನ್ನಡ ಶಾಲೆಗಳನ್ನು ಬಲಗೊಳಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ನೀತಿ ನಿರೂಪಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುತ್ತಾ ಬಂದಿದೆ. ಆದರೂ ಕಳೆದ ಒಂದೂವರೆ ದಶಕದಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದುರ್ಬಲಗೊಳ್ಳುತ್ತಿದ್ದು, ಶಿಕ್ಷಣದ ಖಾಸಗೀಕರಣ ಹಾಗೂ ವ್ಯಾಪಾರೀಕರಣ ನಾಗಲೋಟದಲ್ಲಿ ಸಾಗುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಿ, ಶಾಲೆಗಳಲ್ಲಿ ಕಲಿಕೆಯನ್ನು ಕೇಂದ್ರ ಬಿಂದುವನ್ನಾಗಿಸಲು ಸಾಧ್ಯವಾಗಬಹುದಾದ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಪುನರ್ ರಚಿಸುವುದು ಇಂದಿನ ತುರ್ತು ಅಗತ್ಯ. ದಿನದಿಂದ ದಿನಕ್ಕೆ ತೀರ ದುರ್ಬಲ ಸ್ಥಿತಿ ಮುಟ್ಟುತ್ತಿರುವ ಸರ್ಕಾರಿ ಶಾಲೆಗಳ ಸಬಲೀಕರಣವಾಗದ ಹೊರತು ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಉದ್ದೇಶ ಸಫಲವಾಗುವುದಿಲ್ಲ. ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಉಳಿಯಬಲ್ಲದು. ಈ ನಿಟ್ಟಿನಲ್ಲಿ ನಾವೆಲ್ಲರೂ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಯೋಚಿಸಿ ಕಾರ್ಯನ್ಮೋಖವಾಗಬೇಕಿದೆ. ಆದ್ದರಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶಯವಾದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ತಾವುಗಳು ಕೈ ಜೋಡಿಸುವಿರಿ ಎಂದು ನಂಬಿದ್ದೇವೆ.

ತಾವು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳನ್ನು ಸಬಲೀಕರಣಗೊಳಿಸುವಂತೆ ಕೋರಿದೆ. ಈ ಕುರಿತು ತಮಗೆ ಹೆಚ್ಚಿನ ಮಾಹಿತಿಯ ಅಗತ್ಯವಿದ್ದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರ ಬರೆದಿರುವ ಪತ್ರದಲ್ಲಿ ತಿಳಿಸಿದೆ.

ಅಧ್ಯಕ್ಷರ ಕಾರ್ಯಾಲಯ,  ಕನ್ನಡ ಅಭಿವೃದ್ಧಿ ಪ್ರಾಧಿಕಾರ, ವಿಧಾನಸೌಧ, ಬೆಂಗಳೂರು.

ದೂ: 080-22256365,080-22033519

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ-ಸಿ ಎಂ

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ-ಸಿ ಎಂ

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ-ಸಿ ಎಂ

ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 29:

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ  ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು  ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು  ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ  ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು.  ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14 ನೇ ಹಣಕಾಸು ಆಯೋಗದಲ್ಲಿ  ರಾಜ್ಯಕ್ಕೆ 4.713  ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66 % ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದರು.

 

 

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿಯವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು.  ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ , ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸವಿದೆ ಎಂದರು