ಬೆಳಗಾವಿಯಲ್ಲಿ ಶೆಫರ್ಡ್ ಇಂಡಿಯಾ ರಾಷ್ಟ್ರೀಯ ಸಮಾವೇಶ.

ಬೆಳಗಾವಿಯಲ್ಲಿ ಶೆಫರ್ಡ್ ಇಂಡಿಯಾ ರಾಷ್ಟ್ರೀಯ ಸಮಾವೇಶ.

ಬೆಳಗಾವಿಯಲ್ಲಿ ಶೆಫರ್ಡ್ ಇಂಡಿಯಾ ರಾಷ್ಟ್ರೀಯ ಸಮಾವೇಶ

ಬೆಂಗಳೂರು:

ವಿಶ್ವದಾದ್ಯಂತ ಇರುವ ಕುರುಬ ಸಮುದಾಯದ ಬೇರುಗಳನ್ನು ಒಗ್ಗೂಡಿಸಿ, ಬೆಳೆಸುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದ ಶೆಫರ್ಡ್ ಇಂಡಿಯಾ ಇಂಟರ್‌ನ್ಯಾಷನಲ್ ಸಂಸ್ಥೆ 9ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು, ಅ.2 ಗಾಂಧಿಜಯಂತಿಯಂದು ಬೆಳಗಾವಿಯಲ್ಲಿ ರಾಷ್ಟ್ರೀಯ ಪ್ರತಿನಿಧಿಗಳ ಮಹಾಸಮಾವೇಶವನ್ನು ಹಮ್ಮಿ ಕೊಂಡಿರುವುದಾಗಿ ಮಾಜಿ ಸಚಿವ ಹಾಗೂ ಸಂಸ್ಥೆಯ ಸಂಸ್ಥಾಪಕ ರಾಷ್ಟ್ರೀಯ ಉಪಾಧ್ಯಕ್ಷ ಹೆಚ್.ಎಂ.ರೇವಣ್ಣ ತಿಳಿಸಿದ್ದಾರೆ.

ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಜಂಟಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾರ್ಷಿಕೋತ್ಸವದ ಅಂಗವಾಗಿ 2 ದಿನಗಳ ಕಾರ್ಯಕ್ರಮ ಆಯೋಜಿಸಿದ್ದು ಕಾರ್ಯಕ್ರಮಕ್ಕೆ ದೇಶದ ವಿವಿಧೆಡೆಗಳ ಸಾಧಕರು, ಹಿರಿಯರು, ಗಣ್ಯರು, ರಾಜಕೀಯ ನಾಯಕರು, ರಾಜ್ಯಪಾಲರು ಪಾಲ್ಗೊಳ್ಳಲಿದ್ದಾರಲ್ಲದೇ, ಅ.3ರಂದು ಇಡೀ ಭಾರತದಲ್ಲಿ ನಮ್ಮ ಸಮುದಾಯದಿಂದ ಮುಖ್ಯಮಂತ್ರಿಗಳಾಗಿರುವ, ಹೆಮ್ಮೆಯ ನಾಯಕ ಸಿದ್ದರಾಮಯ್ಯನವರಿಗೆ ರಾಷ್ಟ್ರೀಯ ಸನ್ಮಾನ ಮಾಡುವ ಘನೋದ್ದೇಶವನ್ನು ಹೊಂದಲಾಗಿದೆ ಎಂದರು.

ಕುರುಬ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವುದು, ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ವರ್ಗದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವುದು, ಕುರಿಗಾಹಿಗಳಿಗೆ ಶಿಕ್ಷಣ.. ಇವೇ ಮೊದಲಾದ ಸೌಲಭ್ಯ ಕಲ್ಪಿಸುವುದು ಸೇರಿ ಒಟ್ಟು 11 ಬೇಡಿಕೆಗಳನ್ನು ಸಮಾವೇಶದಲ್ಲಿ ಮಂಡಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಕುರುಬ ಸಮುದಾಯದ ಹಿತಾಸಕ್ತಿಗಳನ್ನು ಕಾಪಾಡುವ ಹಾಗೂ ಹೊಸ ಆಶಯಗಳಿಗೆ ಹೊಂದಿಕೊಳ್ಳುವ, ಹತ್ತು ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವ ಹಾಗೂ ಭಾರತ ಸರ್ಕಾರಕ್ಕೆ ಕೆಲವೊಂದು ಸಲಹೆಗಳನ್ನು ನೀಡುವ ಮೂಲಕ ಕುರುಬರ ಆಶೋತ್ತರಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸಮಾವೇಶದಲ್ಲಿ ಅಮೂಲಾಗ್ರ ಚಿಂತನ-ಮAಥನಗಳನ್ನು ನಡೆಸಲಿದೆ ಎಂದು ಹೇಳಿದರು.

ನಾಡಿನ ಮತ್ತು ಗಡಿಯಾಚೆಯ ಸಮಸ್ತ ಕುರುಬ ಬಾಂಧವರು ಸಂಘಟನೆಯ ಎಲ್ಲ ಕಾರ್ಯಗಳಿಗೂ ಸಹಭಾಗಿತ್ವ ನೀಡಿದ್ದಾರೆ. ಅವರೆಲ್ಲರಿಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ಸಮುದಾಯದ ಬೇಡಿಕೆಗಳು ಹಾಗೂ ವಾರ್ಷಿಕೋತ್ಸವದ ಕುರಿತು ಮಾಹಿತಿ ನೀಡಿದರು. ಮುಂದುವರೆದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಎಚ್.ಡಿ.ಕುಮಾರಸ್ವಾಮಿ ಕಾವೇರಿ ವಿಚಾರದಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಬಹುದು ಎಂದು ತಿಳಿದುಕೊಂಡಿದ್ದಾರೆ. ಬಿಜೆಪಿ ಮತ ಜೆಡಿಎಸ್‌ಗೆ ವರ್ಗಾವಣೆ ಆಗುವುದಿಲ್ಲ. ಹಾಗೆಯೇ ಜೆಡಿಎಸ್ ಮತವೂ ಬಿಜೆಪಿಗೆ ವರ್ಗಾವಣೆ ಆಗುವುದಿಲ್ಲ. ಈ ಎರಡೂ ಪಕ್ಷಗಳ ಮತ ಕಾಂಗ್ರೆಸ್‌ಗೆ ವರ್ಗಾವಣೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಮಹಾಪ್ರಧಾನ ಕರ‍್ಯದರ್ಶಿ ಎಂ.ನಾಗರಾಜ್, ಖಜಾಂಚಿ ಡಾ.ಎಂ.ಜಯಪ್ಪ, ಉಪಾಧ್ಯಕ್ಷ ಬಾಬು ಎಸ್.ಜಿದ್ದೀಮನಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರಿಗೆ ಸಿದ್ದರಾಮಯ್ಯ ಅಭಯ

ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರಿಗೆ ಸಿದ್ದರಾಮಯ್ಯ ಅಭಯ

ಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕುವ ಅಗತ್ಯವಿದೆ

ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಬೆಂಗಳೂರು, ಸೆಪ್ಟೆಂಬರ್ 29: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಇಂದು ನಡೆದ ಮಹತ್ವದ ಸಭೆಯಲ್ಲಿ   ಅವರು ಪ್ರತಿಕ್ರಿಯಿಸಿದರು.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು  ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ  284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ವಿವರಿಸಿದರು.

ಪ್ರತಿ ಬಾರಿ ಸಭೆ ಕರೆದಾಗಲೂ  ಪ್ರತಿಭಟಿಸುತ್ತಲೇ ಬಂದಿದ್ದೇವೆ

ಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ.  ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ.  30 ಟಿ ಎಂಸಿ ಕುಡಿಯುವ ನೀರಿಗೆ ಅಗತ್ಯ. ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ವಿವರಿಸಿದರು.

ಇಂದು ಸಂಜೆ ಸಭೆ

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಇಂದು ಸಂಜೆ  ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ  ವಶಕ್ಕೆ ಪಡೆಯಬಹುದು, contempt of court ಆಗುತ್ತದೆ, ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದು ಪರಿಸ್ಥಿತಿಯನ್ನು ವಿವರಿಸಿದರು.

ಸಭೆಯಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್ ಅವರು  ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಬೀಳುತ್ತಿದೆ.  ಜನ ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘಟನೆಗಳು ಜನಪರವಾಗಿ ಹೋರಾಟ ಮಾಡಿದಾಗ ಅವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿ ಮಾಡಿದರು. ಮೇಕೆದಾಟು ಯೋಜನೆಗೆ  ಶೀಘ್ರ ಕಾಯಕಲ್ಪ ನೀಡಬೇಕೆಂದು  ಒತ್ತಾಯಿಸಿದರು.

ಮುಖ್ಯಮಂತ್ರಿ ಚಂದ್ರು ಮಾತನಾಡಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ಲೋಪ ಎಲ್ಲಿ ಆಗಿದೆ ಎಂದು ಸ್ಪಷ್ಟಪಡಿಸಬೇಕು.  ನಮ್ಮ ಹಕ್ಕೊತ್ತಾಯವನ್ನು ತಮಿಳುನಾಡಿನಂತೆಯೇ ತೀವ್ರವಾಗಿ ಮಾಡಬೇಕು. ಸಂಕಷ್ಟ ಪರಿಹಾರ ಸೂತ್ರ ಇಲ್ಲದಿದ್ದರೂ ನೀರು ಬಿಡುವಂತೆ ಸೂಚಿಸುವುದು  ತಪ್ಪು. ಆದೇಶ ಉಲ್ಲಂಘನೆ ಮಾಡಿದರೆ ಏನಾಗುತ್ತದೆ ಎಂದು ಪಟ್ಟಿ ಮಾಡಬೇಕು ಎಂದು ಹೇಳಿದರು.  ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡು ಬೆಳೆಗೆ

ನೀರು ಕೇಳುತ್ತಿದೆ.  ತಕ್ಷಣ ಸದನ ಕರೆದು ಈ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸಂಜೆ ತಜ್ಞರ ತಂಡದ ಜತೆಗೂ ಚರ್ಚಿಸಲಾಗುವುದು. ಬಳಿಕ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಿಯೋಗದಲ್ಲಿ ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬೆಳಗಾವಿಯಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ

ಬೆಳಗಾವಿಯಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ

ಬೆಳಗಾವಿಯಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ

ನಗರದ ವಿವಿವಧ ಬಡಾವಣೆಗಳಲ್ಲಿ

ಹಲವಾರು ವಿವಿಧ ಭಂಗಿಗಳಲ್ಲಿರುವ ಮಹಾಗಣಪತಿ

ಮೂರ್ತಿಗಳ ಪ್ರತಿಷ್ಠಾಪಿಸಲಾಗಿದೆ.

ವಿವಿಧ ತರಹದ ವಿಶಿಷ್ಠವಾದ ಸಂದೇಶಗಳನ್ನು

ಸಾರುವ ಹಲವಾರು ವಿಭಿನ್ನಾದ ಅಂಧವಾದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.

 

ಭಾರತದ  ಮಹಿಳಾ ಅಂಧ  ಕ್ರಿಕೆಟ್ ತಂಡಕ್ಕೆ ಅಭಿನಂದನೆ

ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡಕ್ಕೆ ಅಭಿನಂದನೆ

ಭಾರತದ  ಮಹಿಳಾ ಅಂಧ  ಕ್ರಿಕೆಟ್ ತಂಡಕ್ಕೆ ಅಭಿನಂದನೆ

ಬೆಂಗಳೂರು, ಸೆಪ್ಟೆಂಬರ್: ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ( ಕ್ರಿಕೆಟ್ ಫಾರ್ ಬ್ಲೈಂಡ್ ) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ  ಭಾರತದ  ಮಹಿಳಾ ಅಂಧ  ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ  ಆಟಗಾರರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಿದರು.

ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ  ವರ್ಷಾ.ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ,  ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ  ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

ಕ್ರಿಕೆಟ್ ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.

ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್ , ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್  ಇಂಡಿಯಾದ ಆಜೀವ ಅಧ್ಯಕ್ಷ  ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ  ಸಮರ್ಥನಮ್ ಟ್ರಸ್ಟ್ ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಂದ್ ಗೆ ಬೆಂಬಲಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಪ್ರತಿಭಟನೆ

ಬಂದ್ ಗೆ ಬೆಂಬಲಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಪ್ರತಿಭಟನೆ

ಬಂದ್ ಗೆ ಬೆಂಬಲಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಪ್ರತಿಭಟನೆ

ಸರ್ಕಾರ ಕಾವೇರಿ ಹೋರಾಟವನ್ನು ಲಘುವಾಗಿ ಪರಿಗಣಿಸಬಾರದು: ಶಿವಕುಮಾರ್ ಮೇಟಿ

ಬೆಂಗಳೂರು: ಕಾವೇರಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ಗೆ   ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯಿಂದ ಬೆಂಬಲಿಸಿ ಪ್ರತಿಭಟನೆ ನಡೆಸಲಾಯಿತು.

ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದಲ್ಲಿ ರಾಜಾಜಿನಗರದ ಭಾಷ್ಯಂ ಸರ್ಕಲ್‌ನಿಂದ ರಾಮಮಂದಿರವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್ ಮೇಟಿ, ಕಾವೇರಿ ನಮ್ಮ ನಾಡಿನ ಜೀವ ನದಿಯಾಗಿದ್ದು,  ಈ ವರ್ಷ ಮಳೆಯ ಕೊರತೆಯಿಂದ ರಾಜ್ಯದಲ್ಲಿ ಮಳೆಯಾಗದೇ ಕಾವೇರಿ ಕಣಿವೆಯ ಡ್ಯಾಮ್ ಗಳು ಖಾಲಿಯಾಗಿವೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಲಿದೆ.

ರಾಜ್ಯ ಸರ್ಕಾರ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕಾನೂನಾತ್ಮಕ ಹೋರಾಟವನ್ನು ಪ್ರಬಲವಾಗಿ ನಡೆಸಬೇಕು. ಸಂಸದರೂ ಕೂಡ ರಾಜ್ಯದ ಪರವಾಗಿ ಕೇಂದ್ರದ ಮೇಲೆ ಒತ್ತಡ ಹೇರಿ ರಾಜ್ಯಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರಗಳು ಹೋರಾಟಗಾರರನ್ನು ಲಘುವಾಗಿ ತೆಗೆದುಕೊಳ್ಳಬಾರದು. ಕಾವೇರಿ ವಿಚಾರದಲ್ಲಿ ಇಡಿ ರಾಜ್ಯ ಒಂದಾಗಿ ಹೋರಾಟ ನಡೆಸಿದ್ದು, ತಕ್ಷಣ ಕಾನೂನು ಹೋರಾಟ ತೀವ್ರಗೊಳಿಸಿ ಕಾವೇರಿ ಉಳಿಸಬೇಕು ಎಂದು ಆಗ್ರಹಿಸಿದರು.