by gadi@dmin | Aug 20, 2023 | Top ಸುದ್ದಿಗಳು, ರಾಜ್ಯ
ದೇವರಾಜು ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದ – ಸಿಎಂ
ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ್ ತಂಗಡಗಿ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ಬಳಿಕ ಅರಸು ಅವರ ಕಾರಿನಲ್ಲೇ ಪ್ರಯಾಣಿಸಿ ವಿಧಾನಸೌಧದ ಸಭಾಂಗಣಕ್ಕೆ ಆಗಮಿಸಿ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.
by gadi@dmin | Aug 20, 2023 | Top ಸುದ್ದಿಗಳು, ರಾಜ್ಯ, ಹೋರಾಟಗಾರರು
ದೇವರಾಜ ಅರಸು ಮತ್ತು ರಾಜೀವ್ ಗಾಂಧಿ ಅವರು ಭವಿಷ್ಯದ ಭಾರತ ಮತ್ತು ಭವಿಷ್ಯದ ಸಮಾಜ ಹೇಗಿರಬೇಕು ಎನ್ನುವ ಸಾಮಾಜಿಕ ನ್ಯಾಯದ ಕನಸು-ಕಾರ್ಯಕ್ರಮಗಳನ್ನು ರೂಪಿಸಿದ ಮಹಾನ್ ಚೇತನಗಳು- ಮುಖ್ಯಮಂತ್ರಿ ಸಿದ್ದರಾಮಯ್ಯ
ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ಅರಸು ಅವರ ವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ
ದೇವರಾಜ ಅರಸು ಅವರ ಕಾರ್ಯಕ್ರಮಗಳ ಫಲಾನುಭವಿಗಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಆ: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಅರಸು ಪ್ರಶಸ್ತಿ ವಿತರಿಸಿ ಮಾತನಾಡಿದರು.
ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ಅವರ ವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ.
ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ.
ದೇವರಾಜ ಅರಸರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು.
ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದರು.
ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜು ಅರಸರು ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲಾ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ದವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದು ವಿವರಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ , ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.
by gadi@dmin | Aug 19, 2023 | Top ಸುದ್ದಿಗಳು
ಕೈಗಾರಿಕಾ ವಲಯದ ಸಮಗ್ರ ಬೆಳವಣಿಗೆಯ ಗುರಿ: ಎಂ ಬಿ ಪಾಟೀಲ
ಹಲವು ಉದ್ದಿಮೆಗಳಿಗೆ ಸ್ಟಾರ್ ಎಕ್ಸ್ ಪೋರ್ಟರ್ ಪುರಸ್ಕಾರ ಪ್ರದಾನ
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ವಲಯವನ್ನು ಸಮಗ್ರವಾಗಿ ಬೆಳೆಸಲು ಗಂಭೀರ ಚಿಂತನೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ಹಲವು ಉಪಯುಕ್ತ ಕ್ರಮಗಳಿಗೆ ಚಾಲನೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ವಿಷನ್ ಗ್ರೂಪ್‌ಗಳು ಸೇರಿದಂತೆ ಹಲವು ಸಾಂಸ್ಥಿಕ ವ್ಯವಸ್ಥೆಗಳು ಇದರಲ್ಲಿ ರಚನಾತ್ಮಕ ಪಾತ್ರ ವಹಿಸಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯಿಂದ (ಎಫ್‌ಕೆಸಿಸಿಐ) ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ರಫ್ತು ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪನವರ ಒಡೆತನದ, ಬಾಗಲಕೋಟೆಯಲ್ಲಿರುವ ಇಂಡಿಯನ್ ಕೇನ್ ಪವರ್ ಸಕ್ಕರೆ ಕಾರ್ಖಾನೆ ಸೇರಿದಂತೆ ಹಲವು ಉದ್ಯಮಗಳಿಗೆ ‘ಸ್ಟಾರ್ ಎಕ್ಸ್‌ಪೋರ್ಟರ್ ರಫ್ತುದಾರ’ ಪುರಸ್ಕಾರ ಪ್ರದಾನ ಮಾಡಲಾಯಿತು.
ಪ್ರಶಸ್ತಿಗೆ ಪಾತ್ರವಾದ ಕಂಪನಿಗಳಲ್ಲಿ ಜಿ.ಇ.ಇಂಡಿಯಾ ಇಂಡಸ್ಟ್ರಿಯಲ್ ಪ್ರೈವೇಲ್ ಲಿಮಿಟೆಡ್, ಯಶಸ್ವಿ ಫಿಶ್ ಮೀಲ್ ಅಂಡ್ ಆಯಿಲ್ ಕಂಪನಿ, ಮೈಕ್ರೋ ಲ್ಯಾಬ್ಸ್ ಲಿಮಿಟೆಡ್, ಮುಕ್ಕಾ ಪ್ರೋಟೀನ್ಸ್ ಲಿಮಿಟೆಡ್, ಡಿಸಿಎಕ್ಸ್ ಸಿಸ್ಟಮ್ಸ್ ಲಿಮಿಟೆಡ್, ಲೂಯಿಸ್ ಡ್ರೈಫಸ್ ಕಂಪನಿ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್‌ಗಳೂ ಸೇರಿವೆ.
ಮಿಕ್ಕಂತೆ, ವೆಟೋಜೆನ್ ಅನಿಮಲ್ ಹೆಲ್ತ್ ಎಲ್‌ಎಲ್‌ಪಿ, ನ್ಯೂಮ್ಯಾಟಿಕ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆರ್.ಆರ್. ಇಂಡಸ್ಟ್ರೀಸ್‌ಗಳಿಗೆ ‘ಅತ್ಯುತ್ತಮ ರಫ್ತುದಾರ ಸಂಸ್ಥೆ’ ಪ್ರಶಸ್ತಿಗಳನ್ನು ಕೊಡಲಾಯಿತು.
ಕಾರ್ಯಕ್ರಮದಲ್ಲಿ ಸೌದ್ ಅಲ್ ಮಾರೋವಲ್, ರಮೇಶ್‌ಚಂದ್ರ ಲಹೋಟಿ, ಎಂ ಜಿ ಬಾಲಕೃಷ್ಣ, ಉಮಾ ರೆಡ್ಡಿ, ಕೆ.ಲಕ್ಷ್ಮಣನ್, ದೇವವ್ರತ ದಾಸ್ ಉಪಸ್ಥಿತರಿದ್ದರು.
by gadi@dmin | Aug 18, 2023 | Top ಸುದ್ದಿಗಳು, ಕನ್ನಡ ನಾಡು ನುಡಿ
ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಹಿರಿಯರಾದ ಕಾಗೋಡು ತಿಮ್ಮಪ್ಪನವರು ಆಯ್ಕೆ. ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು, ಉಳುವವನನ್ನೇ ಭೂಮಿಯ ಒಡೆಯನಾಗಿ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ ಪ್ರವೇಶಿಸಿದವರು. ದೇವರಾಜ ಅರಸು ಅವರ ಗರಡಿಯಲ್ಲಿಯೇ ಬೆಳೆದಿರುವ ತಿಮ್ಮಪ್ಪನವರು ಭೂ ಸುಧಾರಣಾ ಕಾಯ್ದೆಯಷ್ಟೇ ಕ್ರಾಂತಿಕಾರಿಯಾದ “ವಾಸಿಸುವವನನ್ನೇ ಮನೆ ಒಡೆಯ” ನನ್ನಾಗಿ ಮಾಡುವ ಕ್ರಾಂತಿಕಾರಿ ಕಾಯ್ದೆಯ ರೂವಾರಿಗಳು.
ಹಿರಿಯರಿಗೆ ನಮ್ಮ ಗಡಿನುಡಿ ತಂಡ ಶುಭಹಾರೈಸುತ್ತದೆ.
by gadi@dmin | Aug 4, 2023 | Top ಸುದ್ದಿಗಳು
ಚಿತ್ರದುರ್ಗ ಕವಾಡಿಗರಹಟ್ಟಿ ಪ್ರಕರಣ: ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಬಿಡುಗಡೆ
ಬೆಂಗಳೂರು, ಆಗಸ್ಟ್ 4- ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ.
ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ ದುರಂತದಲ್ಲಿ ಮೃತರಾದ ಮಂಜುಳಾ, ರಘು ಹಾಗೂ ಪ್ರವೀಣ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳಂತೆ ಪರಿಹಾರ ಮಂಜೂರು ಮಾಡಿ, ಜಿಲ್ಲಾಧಿಕಾರಿಗಳಿಗೆ ಒಟ್ಟು 15 ಲಕ್ಷ ರೂ ಬಿಡುಗಡೆ ಮಾಡಲಾಗಿದೆ.
ಜುಲೈ 31 ರಂದು ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಎಸ್ಸಿ ಕಾಲೋನಿಯಲ್ಲಿ ಕುಡಿಯುವ ನೀರು ಕಲುಷಿತ ಹೊಂದಿದ್ದರಿಂದ ಅಲ್ಲಿನ ನಿವಾಸಿಗಳು ಅಸ್ವಸ್ಥಗೊಂಡು ಮೂವರು ಮೃತಪಟ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಹಾಗೂ ಜಿಲ್ಲಾಧಿಕಾರಿಗಳು ಸಲ್ಲಿಸಿದ ವರದಿಯನ್ನು ಆಧರಿಸಿ ಪರಿಹಾರ ಬಿಡುಗಡೆ ಮಾಡಲಾಗಿದೆ.
by gadi@dmin | Aug 3, 2023 | Top ಸುದ್ದಿಗಳು
ನಾಡದೊರೆಗೆ ಇಂದು ಜನ್ಮದಿನದ ಸಂಭ್ರಮ
ಸಿದ್ದರಾಮಯ್ಯ@76