ರಾಷ್ಟ್ರಪತಿ ಭವನದಲ್ಲಿ ನಡೆದ ಸಮ್ಮೇಳನದಲ್ಲಿ ಕರ್ನಾಟಕದ ರಾಜ್ಯಪಾಲರು ಭಾಗಿ

ರಾಷ್ಟ್ರಪತಿ ಭವನದಲ್ಲಿ ನಡೆದ ಸಮ್ಮೇಳನದಲ್ಲಿ ಕರ್ನಾಟಕದ ರಾಜ್ಯಪಾಲರು ಭಾಗಿ

 

ರಾಷ್ಟ್ರಪತಿ ಭವನದಲ್ಲಿ ನಡೆದ ಸಮ್ಮೇಳನದಲ್ಲಿ ಕರ್ನಾಟಕದ ರಾಜ್ಯಪಾಲರು ಭಾಗಿ

ನವದೆಹಲಿ, ನವೆಂಬರ್ : ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಎಲ್ಲಾ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳ 51 ನೇ ಸಮ್ಮೇಳನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿದ್ದರು.

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ವರದಿ ಮತ್ತು ರಾಜಭವನದ ಕಾರ್ಯವೈಕರಿಗಳನ್ನು  ಮಂಡಿಸಿದರು ಹಾಗೂ  ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.

ಗೌರವಾನ್ವಿತ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರು ರಾಜ್ಯಪಾಲರ 51ನೇ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಎಲ್ಲಾ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳನ್ನು ಸೇರಿದಂತೆ  ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಶ್ರೀ ಎಂ ವೆಂಕಯ್ಯ ನಾಯ್ಡು, ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಗೌರವಾನ್ವಿತ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರೂ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಚಂದ್ರಶೇಖರ ಕಂಬಾರ, ಡಾ. ಬಿ.ಎಂ.ಹೆಗ್ಡೆಗೆ ಪದ್ಮ ಭೂಷಣ, ಹಾಜಬ್ಬ, ವಿಜಯ್ ಸಂಕೇಶ್ವರ ರವರಿಗೆ ಪದ್ಮಶ್ರೀ ಪ್ರಶಸ್ತಿ

ಚಂದ್ರಶೇಖರ ಕಂಬಾರ, ಡಾ. ಬಿ.ಎಂ.ಹೆಗ್ಡೆಗೆ ಪದ್ಮ ಭೂಷಣ, ಹಾಜಬ್ಬ, ವಿಜಯ್ ಸಂಕೇಶ್ವರ ರವರಿಗೆ ಪದ್ಮಶ್ರೀ ಪ್ರಶಸ್ತಿ

ಚಂದ್ರಶೇಖರ ಕಂಬಾರ, ಡಾ. ಬಿ.ಎಂ.ಹೆಗ್ಡೆಗೆ ಪದ್ಮ ಭೂಷಣ, ಹಾಜಬ್ಬ, ವಿಜಯ್​ ಸಂಕೇಶ್ವರ್​ಗೆ ಪದ್ಮಶ್ರೀ ಪ್ರಶಸ್ತಿ

 

ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಮಹನೀಯರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.

ಕನ್ನಡಿಗ ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಹಾಗೂ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ.

ದಕ್ಷಿಣ ಕನ್ನಡದ ಅಕ್ಷರ ಸಂತ’ ಹರೇಕಳ ಹಾಜಬ್ಬ, ಕನ್ನಡತಿ ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್, ಪರಿಸರ ಪ್ರೇಮಿ ತುಳಸಿ ಗೋವಿಂದೇಗೌಡ, ಮಾಜಿ ಹಾಕಿ ಪಟು ಎಂಪಿ ಗಣೇಶ್​​ ಮತ್ತು ಉದ್ಯಮಿ ವಿಜಯ್​ ಸಂಕೇಶ್ವರ್​  ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.

ಜನತಾ ಪತ್ರಿಕೆ ಕನ್ನಡಿಗರ ಮುಖವಾಣಿ ಎಂದರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ.

ಜನತಾ ಪತ್ರಿಕೆ ಕನ್ನಡಿಗರ ಮುಖವಾಣಿ ಎಂದರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ.

ಜೆಡಿಎಸ್  ನಿಂದ ಜನತಾ ಪತ್ರಿಕೆ ಲೋಕಾರ್ಪಣೆ

ಜನತಾ ಪತ್ರಿಕೆ ಕನ್ನಡಿಗರ ಮುಖವಾಣಿ ಎಂದರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ.

*

ಬೆಂಗಳೂರು: ಜನತಾ ಪತ್ರಿಕೆ ಜೆಡಿಎಸ್ ಪಕ್ಷದ ಮುಖವಾಣಿ ಅಲ್ಲ. ಸಮಸ್ತ ಕನ್ನಡಿಗರ ಮುಖವಾಣಿ. ಕೃಷಿ ಕಾರ್ಮಿಕರು ಮತ್ತು ಶ್ರಮಿಕರ ಮುಖವಾಣಿ ಆಗಿ ಕೆಲಸ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್ ರಾಜ್ಯ ಕಚೇರಿ ಜೇಪಿ ಭವನದಲ್ಲಿ ನಡೆದ ಜನತಾ ಪರ್ವ 1.O ದ ಎರಡನೇ ಹಂತದ ಸಂಘಟನಾ ಕಾರ್ಯಗಾರ ‘ ಜನತಾ ಸಂಗಮ ‘ ಕಾರ್ಯಕ್ರಮದಲ್ಲಿ ಇಂದು ನಡೆದ ‘ಜನತಾ ಪತ್ರಿಕೆ ‘ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಡೀ ರಾಜ್ಯದ, ದೇಶದ ಬೆಳವಣಿಗೆಗಳ ಬಗ್ಗೆ ಈ ಪತ್ರಿಕೆಯಲ್ಲಿ ವಿಶ್ಲೇಷಣೆ ಇರುತ್ತದೆ. ನಾಡಿನ ಹಿತದೃಷ್ಟಿಯಿಂದ ಜನರಿಗೆ ಬದ್ಧವಾಗಿ ಪತ್ರಿಕೆಯನ್ನು ರೂಪಿಸಲಾಗುವುದು ಎಂದು ಹೆಚ್ ಡಿಕೆ ಅವರು ಹೇಳಿದರು.

ಬೇರೆ ರಾಜ್ಯದಲ್ಲಿ ಹಲವಾರು ಪಕ್ಷಗಳ ಅವರದ್ದೇ ಆದ ಪಕ್ಷದ ಕಾರ್ಯಕ್ರಮಗಳನ್ನು ಪತ್ರಿಕೆಗಳ ಮೂಲಕ ಜನರಿಗೆ ತಲುಪಿಸಲಾಗುತ್ತಿದೆ. ಅವರದ್ದೇ ಆದ ಪತ್ರಿಕೆಗಳನ್ನು ಮಾಡಿಕೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಮೊದಲ ಬಾರಿಗೆ ಈ ರೀತಿಯ ಪತ್ರಿಕೆ ಲೋಕಾರ್ಪಣೆ ಆಗುತ್ತಿದೆ. ಯಾವುದೇ ಕಾರಣಕ್ಕೂ ‘ ಜನತಾ ಪತ್ರಿಕೆ ‘ ಪಕ್ಷದ ಮುಖವಾಣಿ ಆಗೋದಿಲ್ಲ ಎಂದು ಕುಮಾರಸ್ವಾಮಿ ಅವರು ಮತ್ತೆ ಮತ್ತೆ ಸ್ಪಷ್ಟಪಡಿಸಿದರು.

ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದಾಗ ಹಿಂದು ರಾಮಯ್ಯ ಅವರು ವರದಿಗಾರರಾಗಿದ್ದರು. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿದವರು. ಅಂತವರಿಂದ ಪತ್ರಿಕೆ ಲೋಕಾರ್ಪಣೆ ಆಗಿದ್ದು ಸಂತಸ ಉಂಟು ಮಾಡಿದೆ ಎಂದು ಅವರು ಹೇಳಿದರು.

ಗೌಡರ ಶುಭ ಹಾರೈಕೆ:

ಇದೇ ವೇಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಮಾಜಿ ಪ್ರಧಾನ ಮಂತ್ರಿಗಳಾದ  ಹೆಚ್.ಡಿ.ದೇವೇಗೌಡರು; “ಪತ್ರಿಕೆಯನ್ನು ಹೊರತರುತ್ತಿರುವ ವಿಚಾರ ಒಳ್ಳೆಯದೇ. ಈ ಪತ್ರಿಕೆಯಿಂದ ನಾಡಿನ ಜನತೆಗೆ ಒಳ್ಳೆಯದಾಗಲಿ” ಎಂದು ಹಾರೈಸಿದರು.

ನಮ್ಮ ಪಕ್ಷದಲ್ಲಿ ಸಮರ್ಥ ನಿಷ್ಟೆ ಇರುವ ನಾಯಕರು ಕಾರ್ಯಕರ್ತರು ಇದ್ದಾರೆ. ಅವರೆಲ್ಲರ ಮನೆ ಬಾಗಿಲಿಗೆ ಈ ಪತ್ರಿಕೆ ಮುಟ್ಟಬೇಕು. ಪತ್ರಿಕೆ ಚೆನ್ನಾಗಿ ಬೆಳೆಯುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ ಎಂದು ಅವರು ಹೇಳಿದರು.

ಜನರಿಗೆ ಮುಟ್ಟಲಿ:

ಜನತಾ ಪತ್ರಿಕೆ ಬಿಡುಗಡೆ ಮಾತನಾಡಿದ ಪಿ. ರಾಮಯ್ಯ ಅವರು; ಇದು ಪಕ್ಷದ ಮುಖವಾಣಿಯಲ್ಲ. ಜನ ಸಾಮಾನ್ಯರ ಪತ್ರಿಕೆ ಆಗಿ ಮೂಡಿಬರಲಿದೆ. ಪತ್ರಿಕೆ ಜನ ಸಾಮಾನ್ಯರಿಗೆ ತಲುಪಬೇಕು. ಇದು ಪಾರ್ಟಿಯ ಮುಖವಾಣಿಯಲ್ಲ ನನಗೆ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಹಾಗಾಗಿ ನಾನು ಇಂದು ಈ ಪತ್ರಿಕೆ ಲೋಕಾರ್ಪಣೆಗೆ ಬಂದೆ. ಈಗ ಪತ್ರಿಕೆ ನಡೆಸೋದು ಅಷ್ಟು ಸುಲಭದ ಹಾದಿಯಲ್ಲ. ಎಲ್ಲವನ್ನೂ ದಾಟಿ ಜನಸಾಮಾನ್ಯರಿಗೆ ತಲುಪಿಸುವ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದರು.

ಎರಡನೇ ಹಂತದ ಕಾರ್ಯಾಗಾರ:

ಈಗಾಗಲೇ ಬಿಡದಿಯಲ್ಲಿ ಏಳು ದಿನಗಳ ಕಾರ್ಯಗಾರವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಇಂದಿನಿಂದ ಎಂಟು ದಿನಗಳ ಕಾರ್ಯಗಾರ ನಡೆಯಲಿದೆ. ಇಂದಿನಿಂದ ನಿರಂತರವಾಗಿ ಪದಾಧಿಕಾರಿಗಳ ಸಭೆಗಳು  ಆರಂಭವಾಗುತ್ತಿವೆ. ಪಕ್ಷ ಸಂಘಟನೆ ಹಾಗೂ ಮುಂದಿನ ಎಲ್ಲಾ ಚುನಾವಣೆಗಳಿಗೆ ಸಿದ್ಧತೆ ನಡೆಸಲಾಗುತ್ತದೆ ಎಂದು ಎಂದು ಅವರು ಹೇಳಿದರು.

ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರು ಮೊದಲಿಗೆ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಪಕ್ಷದ ಎಲ್ಲ ನಾಯಕರೂ, ಶಾಸಕರು ಮುಂತಾದವರು ಹಾಜರಿದ್ದರು.