ಡಿ. 1ಕ್ಕೆ  ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಸಮಾರಂಭ

ಡಿ. 1ಕ್ಕೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಸಮಾರಂಭ

ಡಿಸೆಂಬರ್ 1ಕ್ಕೆ ‘ಗವಿಮಾರ್ಗ’ ಪುಸ್ತಕ ಬಿಡುಗಡೆ,

ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ

ಮತ್ತು ಮಂಡಲ್ ವರದಿ ಆಗಿದ್ದೇನು?

ಕುರಿತು ವಿಚಾರ ಸಂಕಿರಣ

 

ಬೆಂಗಳೂರು-‘ಗವಿಮಾರ್ಗ’ ಪುಸ್ತಕ ಬಿಡುಗಡೆ, ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮತ್ತು ಮಂಡಲ್ ವರದಿ ಆಗಿದ್ದೇನು? ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಡಿಸೆಂಬರ್ 01, (ಶುಕ್ರವಾರ) 2023 ರಂದು ಬೆಳಿಗ್ಗೆ 11 ಗಂಟೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆಯಲಿದೆ.

ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಡಾ.ಎಂ.ಎಸ್.ಮಣಿ ಅವರು ಬರೆದಿರುವ ‘ಗವಿಮಾರ್ಗ’ ಪುಸ್ತಕವನ್ನು ಬಿಡುಗಡೆ ಮಾಡುವವರು. ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅವರು ವಿಚಾರ ಸಂಕಿರಣ ಉದ್ಘಾಟಿಸುವರು, ಮಾಜಿ ಸಚಿವ ಎಚ್.ಆಂಜನೇಯ ಅವರು ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್.ನೀಲಕಂಠ ಅಧ್ಯಕ್ಷತೆ ವಹಿಸುವರು.

ಶ್ರೀ ಷಡಕ್ಷರಿ ಮುನಿ ದೇಶೀಕೇಂದ್ರ ಸ್ವಾಮೀಜಿ, ಪೀಠಾಧ್ಯಕ್ಷರು, ಆದಿ ಜಾಂಬವ ಬೃಹನ್ಮಠ ಹಿರಿಯೂರು ನಗರ, ಇವರು ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜ ಮತ್ತು ಡಾ.ಮನೋಹರ್ ಯಾದವ್, ನಿವೃತ್ತ ಪ್ರಾಧ್ಯಾಪಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು ಇವರು ‘ಮಂಡಲ್ ವರದಿ ಆಗಿದ್ದೇನು?’ ಎಂಬ ವಿಚಾರದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಅವರು ವಿಷಯದ ಮೇಲೆ ಪ್ರತಿಕ್ರಿಯಿಸುವರು.

ಎಂ. ಸಿದ್ದರಾಜು, ಮಾಜಿ ಅಧ್ಯಕ್ಷರು, ಕರ್ನಾಟಕ ಮಾಧ್ಯಮ ಅಕಾಡೆಮಿ, ಹೆಚ್.ಕಾಂತರಾಜ, ಮಾಜಿ ಅಧ್ಯಕ್ಷರು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಲಕ್ಷö್ಮಣ ಕೊಡಸೆ, ಅಧ್ಯಕ್ಷರು ಜನಮನ ಪ್ರತಿಷ್ಠಾನ, ಟಿ.ಎಸ್.ಆರ್ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ|| ಬಿ.ಕೆ.ರವಿ ಇವರುಗಳಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಲಾಗುವುದು.  ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ಟೆಕ್ ಸಮ್ಮೇಳನ ಉದ್ಘಾಟಿಸಿದ ಸಿಎಂ

ಬೆಂಗಳೂರು ಟೆಕ್ ಸಮ್ಮೇಳನ ಉದ್ಘಾಟಿಸಿದ ಸಿಎಂ

ಬೆಂಗಳೂರು ಟೆಕ್ ಸಮ್ಮೇಳನ ಉದ್ಘಾಟನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಆರಂಭವಾದ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ, ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಐಟಿ, ಬಿಟಿ ಇಲಾಖೆ ಕಾರ್ಯದರ್ಶಿ ಡಾ ಏಕರೂಪ್ ಕೌರ್, ಉದ್ಯಮಿಗಳಾದ ಮಾರ್ಕ್ ಪೇಪರ್ ಮಾಸ್ಟರ್, ಕ್ರಿಶ್ ಗೋಪಾಲಕೃಷ್ಣನ್, ಡಾ. ಕಿರಣ್ ಮಜುಂದಾರ್ ಷಾ, ಪ್ರಶಾಂತ ಪ್ರಕಾಶ, ನಿವೃತಿ ರೈ, ಅರವಿಂದ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಜನಸ್ಪಂದನ ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನಗಳ ಗಡುವು-ಮುಖ್ಯಮಂತ್ರಿ

ಜನಸ್ಪಂದನ ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನಗಳ ಗಡುವು-ಮುಖ್ಯಮಂತ್ರಿ

ಸಮಸ್ಯೆಗಳ ಇಳಿಮುಖಕ್ಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ನವೆಂಬರ್ 27 : ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ  ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುತ್ತಾರೆ. ಬೆಳಿಗ್ಗೆ 10.00 ಗಂಟೆಗೆ ಆರಂಭಗೊಂಡು, ಜನಸ್ಪಂದನ‌ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು.

ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ನೀಡಿರುತ್ತಾರೆ ಎಂದು ಹೇಳಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ,  ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3500 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿಯವರ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು ಸ್ಥಳೀಯ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮವಹಿಸಬೇಕು. ಪೊಲೀಸ್ ಇಲಾಖೆಯ ಸಮಸ್ಯೆಯೂ ಸಹ ಸ್ಥಳೀಯ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳೆ ಆಗಿದ್ದು, ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ, ಪರಿಹಾರಕ್ಕೆ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ರೂಪದಲ್ಲಿ ಪತ್ರವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ  ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು. ನಾನೂ ಸಹ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವ ಕ್ರಮವನ್ನು ಅಧಿಕಾರಿಗಳು ಮಾಡಿರುವ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದರು.

ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಎಲ್ಲಾ ಹಂತದಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಜನರ ತೆರಿಗೆ ಹಣದಿಂದ ನಮಗೆ ಸಂಬಳ ಬರುತ್ತಿದೆ.   ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷ 4000 ತ್ವಿಚಕ್ರ ವಾಹನವನ್ನು ವಿಕಲಚೇತನರಿಗೆ ನೀಡಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜನಸ್ಪಂದನ

ಕಾರ್ಯಕ್ರಮದ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ನೀಡಲು ಸರದಿ ಸಾಲಿನಲ್ಲಿ ನಿಂತಿದ್ದ ಜನರ ಬಳಿಗೆ ತೆರಳಿ ಅರ್ಜಿಗಳನ್ನು ಖುದ್ದು ಪಡೆದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನೀಡಿದರು. ಇದಕ್ಕೂ ಮುನ್ನ  ವಿಕಲಚೇತನರ ಬಳಿ ಹೋಗಿ ಅಹವಾಲು ಸ್ವೀಕರಿಸಿ, ತ್ವರಿತವಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವೆ ಹೆಬ್ಬಾಳಕರ್ ಭರವಸೆ : ಧರಣಿ ವಾಪಸ್ ಪಡೆದ ವಿಕಲಚೇತನರು

ಸಚಿವೆ ಹೆಬ್ಬಾಳಕರ್ ಭರವಸೆ : ಧರಣಿ ವಾಪಸ್ ಪಡೆದ ವಿಕಲಚೇತನರು

ಸಚಿವೆ ಹೆಬ್ಬಾಳಕರ್ ಭರವಸೆ : ಧರಣಿ ವಾಪಸ್ ಪಡೆದ ವಿಕಲಚೇತನರು

ಬೆಳಗಾವಿ: ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಕುಳಿತಿದ್ದ ನವ ಕರ್ನಾಟಕ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರನ್ನು ಮಂಗಳವಾರ ಸಂಜೆ ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ವಿಕಲಚೇತನರು ಧರಣಿ ವಾಪಸ್ ಪಡೆದರು.

ಧರಣಿ ಸ್ಥಳಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅವರ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ರಾಜ್ಯದ 6,860 ಜನ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರ ಹುದ್ದೆಗಳನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ನಿರತರು ಸಚಿವರಿಗೆ ಮನವಿ ಸಲ್ಲಿಸಿದರು.

ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಜತೆ ಈ ಕುರಿತು ಚರ್ಚಿಸುತ್ತೇನೆ. ಜೊತೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಳದ ಅಧಿವೇಶನದ ವೇಳೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೇಡಿಕೆಗಳಿಗೆ ಸೂಕ್ತವಾಗಿ ಸರಕಾರ ಸ್ಪಂದಿಸಲಿದೆ ಎಂದು ಸಚಿವರು ತಿಳಿಸಿದರು.

ಸಚಿವರು ನಮ್ಮ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಅವರ ಭರವಸೆಯ ಹಿನ್ನೆಲೆಯಲ್ಲಿ ಧರಣಿ ವಾಪಸ್ ಪಡೆಯುತ್ತಿರುವುದಾಗಿ ಸಂಘದ ರಾಜ್ಯ ಅಧ್ಯಕ್ಷ ಫಕೀರ ಗೌಡ ಪಾಟೀಲ ತಿಳಿಸಿದರು.

ಡಾ ಕಾಂತರಾಜ್ ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ  ಸಲ್ಲಿಸುವಂತೆ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಆಯೋಗಕ್ಕೆ ಒತ್ತಾಯ.

ಡಾ ಕಾಂತರಾಜ್ ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ  ಸಲ್ಲಿಸುವಂತೆ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಆಯೋಗಕ್ಕೆ ಒತ್ತಾಯ.

ಡಾ ಕಾಂತರಾಜ್ ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ  ಸಲ್ಲಿಸುವಂತೆ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಆಯೋಗಕ್ಕೆ ಒತ್ತಾಯ.

ಬೆಂಗಳೂರು- 20, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ರವರ ನೇತೃತ್ವದ ನಿಯೋಗವು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮನವಿಯ ಪೂರ್ಣ ವಿವರ.

ರಾಷ್ಟ್ರದಲ್ಲಿ ಮೀಸಲಾತಿಯನ್ನು ಅವಕಾಶ ವಂಚಿತ ಜಾತಿಗಳಿಗೆ ನೀಡಿ ಸಾಮಾಜಿಕ ಸಮಾನತೆಯನ್ನು ಸಾರಿದ ಅಗ್ರಗಣ್ಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಭಾರತದ ಸಂವಿಧಾನದ ಆಶಯಗಳನ್ನು ಈಡೇರಿಸಿ ಅನೇಕ ಜಾತಿಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಕರ್ನಾಟಕದಲ್ಲಿ ಅನೇಕ ಯಶಸ್ವಿ ಪ್ರಯೋಗಗಳು ನಡೆದಿವೆ. ಅನೇಕ ಹಿಂದುಳಿದ ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನಗಳನ್ನು ನಡೆಸಿ ಮೀಸಲಾತಿಯನ್ನು ಅಚ್ಚುಕಟ್ಟಾಗಿ ಜಾರಿ ಮಾಡಿದ್ದರೂ ರಾಜಕೀಯ ತೀರ್ಮಾನಗಳಿಂದಾಗಿ ಬಲಾಡ್ಯರು ಮೀಸಲಾತಿ ಪಡೆದು ಶೋಷಿತರ ಪಾಲನ್ನು ಕಬಳಿಸುತ್ತಿರುವುದು ಶೋಷನೀಯ.

ಕರ್ನಾಟಕ ರಾಜ್ಯದಲ್ಲಿ ಹಾವನೂರು ಆಯೋಗದ ವರದಿ 1975 ರ ಪ್ರಕಾರ ಸರ್ಕಾರದ ಆದೇಶದಂತೆ ಎಸ್.ಡಬ್ಲೂö.ಎಲ್.12 ಟಿ.ಬಿ.ಎಸ್.77, ಬೆಂಗಳೂರು ದಿನಾಂಕ:22-02-1977 ಪ್ರಕಾರ ಹಿಂದುಳಿದ ವರ್ಗಗಳಿಗೆ ಶೇ40% ರಷ್ಟು ಮೀಸಲಾತಿಯನ್ನು ಇಡಲಾಗಿತ್ತು. ತದ ನಂತರ ಸುಪ್ರಿಮ್ ಕೋರ್ಟಿನ ಆದೇಶದ ಪ್ರಕಾರ ಆಯೋಗ ರಚನೆ ಮಾಡಿ ಹಿಂದುಳಿದ ವರ್ಗಗಳ ವರದಿ ತಯಾರು ಮಾಡಲು ಕರ್ನಾಟಕ ರಾಜ್ಯದಲ್ಲೂ ಸಹ ಟಿ.ವೆಂಕಟಸ್ವಾಮಿ ಆಯೋಗ 1983 ರಲ್ಲಿ ರಚನೆಯಾಯಿತು. ಈ ಆಯೋಗವು 1986 ರಲ್ಲಿ ತನ್ನ ಸಂಪೂರ್ಣ ವರದಿಯನ್ನು ಸಲ್ಲಿಸಿತು. ಆದರೆ ಸರ್ಕಾರವು ವರದಿಯನ್ನು ಸ್ವೀಕರಿಸಲಿಲ್ಲ. ಸರ್ಕಾರವು ಮತ್ತೇ ಹೊಸದಾಗಿ ಅದೇ ವರ್ಷದಲ್ಲಿ ಅಂದರೆ 1986 ರಲ್ಲಿ ಓ.ಚೆನ್ನಪ್ಪ ರೆಡ್ಡಿ ರವರ ಮತ್ತೊಂದು ಆಯೋಗವನ್ನು ರಚನೆ ಮಾಡಿತು. ಈ ಆಯೋಗವು ಕಾರ್ಯನಿರತರಾಗಿ ವರದಿ ಸಂಪೂರ್ಣಗೊಂಡು ನೀಡುವಷ್ಟರಲ್ಲಿ ಬಹಳಷ್ಟು ಮುಂದುವರೆದ ಜಾತಿಗಳನ್ನು ಅಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದುವರೆದಿರುವ ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲಾಯಿತು. ಹಾಗೇಯೆ 1986 ರಲ್ಲಿ ಆಯೋಗದ ವರದಿ ಹೊರ ಬಿದ್ದಿತು. ಅದರಲ್ಲಿ ಮೇಲೆ ಹೇಳಿದ ಮುಂದುವರೆದ ಜಾತಿಗಳು ಎಂದು ಘೋಷಿಸಿದ್ದರೂ ಕೂಡ ಸರ್ಕಾರ ಯಾವುದೇ ಬದಲಾವಣೆ ಮಾಡದೆ ಮತ್ತೋಂದು ಸರ್ಕಾರಿ ಆದೇಶ ಹೊರಡಿಸಿತ್ತು. (ಇತರೆ ಮುಂದುವರೆದ ಮೇಲ್ಕಂಡ ಜಾತಿಗಳನ್ನು ಸೇರಿಸಲಾಯಿತು) ಆದೇಶ ಸಂಖ್ಯೆ:ಎಸ್.ಡಬ್ಲೂ. ಎಲ್. 66 ಬಿ.ಸಿ.ಎ.86 ಬೆಂಗಳೂರು. ದಿನಾಂಕ:13-10-1986. ಈ ವರದಿಯನ್ನು 1990 ರಲ್ಲಿ ಸರ್ಕಾರಕ್ಕೆ ಸಲ್ಲಿಸಿತು. ಸರ್ಕಾರ ಈ ವರದಿಯನ್ನು ಸ್ವೀಕರಿಸಿ ಈ ಮೂಲಕ ಸರ್ಕಾರ ಆದೇಶಗಳಿಗೆ ಅನುಗುಣವಾಗಿ ಕರ್ನಾಟಕ ರಾಜ್ಯ ಎಸ್ಸಿ ಎಸ್ಟಿ/ ಮತ್ತು ಇತರೆ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸಿನ ಪ್ರಕಾರ ಭಾರತದ ಸಂವಿದಾನದ ಅನುಚ್ಚೇದ 15(4) ರಂತೆ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಮತ್ತು ಅನುಚ್ಚೇದ 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಗಳು ಆದೇಶ ಕುರಿತು ಅಧಿಕೃತ ಆದೇಶ ಹೊರಡಿಸಿತು. ತದ ನಂತರ ಸುಪ್ರಿಂಕೊರ್ಟಿನಲ್ಲಿ 1992 ರಲ್ಲಿ ಇಂದಿರ ಸಹಾನಿ ಕೇಸಿನ ವಿಚಾರಣೆಯಲ್ಲಿ 9 ಸದಸ್ಯರ ನ್ಯಾಯಮೂರ್ತಿಗಳ ಪೀಠವು ಪ್ಯಾರ 847 ರಲ್ಲಿ  ಇದೆ. ಆದೇಶದಲ್ಲಿ ಸುಪ್ರಿಂಕೊರ್ಟ್ ದೇಶದ ಎಲ್ಲಾ ರಾಜ್ಯಗಳಿಗೆ ತಮ್ಮದೇ ಆದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಲು ನಿರ್ದೇಶನ ನೀಡಲಾಯಿತು. ಅದೇ ಪ್ರಕಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ 1995 ಜಾರಿಗೆ ಬಂತು. ಅದರ ಪ್ರಕಾರ ಅಂದಿನ ಸರ್ಕಾರವು ಪ್ರೋ.ರವಿವರ್ಮ ಕುಮಾರ್ ರವರ ಮೊದಲ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಿತು. ಈ ಆಯೋಗವು ಕಾರ್ಯ ನಿರ್ವಹಿಸಿ 2000 ನೇ ಇಸವಿಯಲ್ಲಿ ತಮ್ಮ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತು. ಸರ್ಕಾರವು ಸಹ ಅದನ್ನು ಒಪ್ಪಿ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸರ್ಕಾರಿ ಆದೇಶ ಸಂಖ್ಯೆ ಎಸ್.ಡಬ್ಲೂ.ಡಿ. 225 ಬಿ.ಸಿ.ಎ. 2000 ಬೆಂಗಳೂರು. ದಿನಾಂಕ:30-03-2002 ರ ಅನ್ವಯ ಪರಿಷ್ಕರಣೆ ಮಾಡಿ ಸರ್ಕಾರಿ ಆದೇಶ ಹೊರಡಿಸಿತು. ತದ ನಂತರ 2002ರ ನಂತರ ಯಾವುದೇ ಆಯೋಗದ ವರದಿಯನ್ನು ಪರಿಗಣಿಸಿ ಮರು ಪರಿಷ್ಕರಣೆ ಮಾಡಿರುವುದಿಲ್ಲ. ಮೇಲ್ಕಂಡ 1995ರ ಸೆಕ್ಷನ್ 11ರ ಪ್ರಕಾರ ಮೇಲ್ಕಂಡAತೆ ಸರ್ಕಾರವು ಪ್ರತಿ 10 ವರ್ಷಕೊಮ್ಮೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ಹಿಂದುಳಿದ ಎಲ್ಲಾ  ಜಾತಿಗಳ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಆರ್ಥಿಕ ಮತ್ತು ಎಲ್ಲಾ ರೀತಿಯಿಂದಲೂ ಅವರ ಹಿಂದುಳಿದಿರುವಿಕೆಯ ಗುಣಲಕ್ಷಣಗಳ ಬಗ್ಗೆ ಸಂಪೂರ್ಣ ಅಧ್ಯಯನವನ್ನು ನಡೆಸಿ ಸಂವಿಧಾನದ 15 ಮತ್ತು 16 ಹಾಗೂ 340ನೇ ವಿಧಿಗಳಿಗೆ ಅನುಸಾರ ಅರ್ಹರಾಗಿ ಇರುವವರ ವಿಧಿ ವಿಧಾನಗಳ ಪ್ರಕಾರ ದತ್ತಾಂಶಗಳ  ವರದಿಯನ್ನು ಪಡೆದು ಹಿಂದುಳಿದ ವರ್ಗಗಳ ಪರಿಷ್ಕುçತ ಪಟ್ಟಿ ಮಾಡಿ ಆದೇಶ ಹೊರಡಿಸುವುದು ಸರ್ಕಾರದ ಆದ್ಯ ಕರ್ತವ್ಯ ಇದ್ದರೂ ಸರ್ಕಾರವು ಇದನ್ನು ಲೆಕ್ಕಿಸದೇ ಕೆಲವು ಮುಂದುವರೆದ ಪ್ರಬಲ ಜಾತಿಗಳ ಕೂಗಿಗೆ ಒಗೂಟ್ಟು ಆ ಜಾತಿಗಳ ಓಲೈಕೆಗಾಗಿ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ ವಾಸ್ತವವಾಗಿ, ಪ್ರಮಾಣಿಕವಾಗಿ, ಎಲ್ಲಾ ರೀತಿಯಿಂದಲೂ ಹಿಂದಿಳಿರುವಿಕೆಯ ಗುಣಲಕ್ಷಣಗಳುಳ್ಳ ಹಿಂದುಳಿದ ವರ್ಗಗಳ ಏಳಿಗೆಗೆ ಸರ್ಕಾರವು ಕುತ್ತು ತಂದAತಾಗಿ ಹಿಂದುಳಿದ ವರ್ಗಗಳಿಗೆ ಮಾಡಿದ ಅನ್ಯಾಯವಾಗಿರುತ್ತದೆ.

ಈ ಮೇಲಿನ ಎಲ್ಲಾ ವಿಷಯಗಳನ್ನು ಸರ್ಕಾರವು ಕುಲಂಕುಷವಾಗಿ ಪರಿಶೀಲಿಸಿ ಸಾಮಾಜಿಕ ನ್ಯಾಯ ಸೂತ್ರದಡಿ ಮತ್ತು ಅಸಮಾತೋಲನ ಉಂಟಾಗುವ ಅಪಾಯವನ್ನು ತಪ್ಪಿಸುವ ದೃಷ್ಠಿಯಿಂದ ಈಗಾಗಲೇ ಸಿದ್ದವಾಗಿರುವ ನ್ಯಾಯವಾದಿ ಕಾಂತರಾಜು ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿವಾರು ಸಮೀಕ್ಷೆಯನ್ನು ಈ ಕೂಡಲೇ ತಮ್ಮ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ರಾಜ್ಯ ಸರ್ಕಾರಕ್ಕೆ ವರದಿ ನೀಡಿ ರಾಜ್ಯ ಸರ್ಕಾರವು ವರದಿಯನ್ನು ಸ್ವೀಕರಿಸಿ ಕಳೆದ 20 ವರ್ಷಗಳಿಂದ ಹಿಂದುಳಿದ ವರ್ಗಗಳ ಪರಿಷ್ಕುçತ ಪಟ್ಟಿಯನ್ನು ಪರಿಷ್ಕರಣೆ ಮಾಡದೆ ಇರುವ ಕಾರಣ ಮತ್ತೊಮ್ಮೆ ಪರಿಷ್ಕರಣೆ ಮಾಡಿ ವರದಿ ಬಿಡುಗಡೆಗೊಳಿಸಿ ಅದನ್ನು ಅಂಗೀಕರಿಸಿ ಶೀಘ್ರ ಜಾರಿಗೆ ತರಬೇಕು ಇಲ್ಲವಾದಲ್ಲಿ ನಮ್ಮ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟವು ಮೇಲ್ಕಂಡ ವಿಷಯಗಳ ಬಗ್ಗೆ ಒತ್ತಾಯವನ್ನು ಮಾಡುತ್ತದೆ. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಾಗೂ ಅವಶ್ಯವಿದ್ದಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಲಿದೆ. ಎಂದು ತಮ್ಮ ಗಮನಕ್ಕೆ ತರಲು ನಮ್ಮ ಒಕ್ಕೂಟವು ಬಯಸುತ್ತದೆ.

ಪತ್ರಿಕಾ ವಿತರಕರ ಯೋಗಕ್ಷೇಮಕ್ಕಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆ ಚರ್ಚೆ: ಕೆ.ವಿ.ಪ್ರಭಾಕರ್ ಭರವಸೆ

ಪತ್ರಿಕಾ ವಿತರಕರ ಯೋಗಕ್ಷೇಮಕ್ಕಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆ ಚರ್ಚೆ: ಕೆ.ವಿ.ಪ್ರಭಾಕರ್ ಭರವಸೆ

ಪತ್ರಿಕಾ ವಿತರಕರ ಯೋಗಕ್ಷೇಮಕ್ಕಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆ ಚರ್ಚೆ: ಕೆ.ವಿ.ಪ್ರಭಾಕರ್ ಭರವಸೆ

ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ: ಕೆ.ವಿ.ಪ್ರಭಾಕರ್

ಮೈಸೂರು ನ 18: ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಮಾತನಾಡಿದರು.

ಪತ್ರಿಕಾ ವಿತರಕರು ಪತ್ರಿಕೋದ್ಯಮದ ಪಿಲ್ಲರ್ ಗಳು. ಕೋವಿಡ್ ಸಂದರ್ಭದಲ್ಲಿ ಪತ್ರಿಕೆ ಮುಟ್ಟಿದರೆ ಕೊರೋನ ಬರುತ್ತದೆ ಎನ್ನುವ ಆತಂಕ ವ್ಯಾಪಕವಾಗಿ ಹರಡಿದ್ದಾಗಲೂ ತಮ್ಮ ವೃತ್ತಿಪರತೆಯನ್ನು ಬಿಟ್ಟು ಕೊಡಲಿಲ್ಲ. ಎಂದಿನಂತೆ ಪತ್ರಿಕೆಗಳನ್ನು ವಿತರಿಸಿ ಎದೆಗಾರಿಕೆ ಮೆರೆದರು ಎಂದು ಆ ಸಂದರ್ಭದ ಸಂಕಷ್ಟಗಳನ್ನು ವಿವರಿಸಿದರು.

ಪತ್ರಿಕಾ ವಿತರಕರ ಯೋಗಕ್ಷೇಮಕ್ಕಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆ ಚರ್ಚೆ ನಡೆಸುತ್ತೇನೆ. ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘಕ್ಕೆ 2 ಕೋಟಿ ರೂಪಾಯಿ ಕೊಡಿಸಲು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಕಾರ್ಯರೂಪಕ್ಕೆ ತರಲು ಈಗಾಗಲೇ ಪ್ರಯತ್ನ ಆರಂಭಿಸಲಾಗಿದೆ. ವಿತರಕರ ಸಂಘಕ್ಕೆ ನಿವೇಶನ ಮತ್ತು ವಿತರಕರಿಗೆ ನಿವೇಶನ ಕೊಡಿಸಬೇಕು ಎನ್ನುವ ಬೇಡಿಕೆ ಕುರಿತಾಗಿಯೂ ಸರ್ಕಾರದ ಬಳಿ ಮನವಿ ಮಾಡುತ್ತೇನೆ ಎಂದು ಕೆ.ವಿ.ಪ್ರಭಾಕರ್ ಅವರು ತಿಳಿಸಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷರಾದ ಕೆ.ಶಂಬುಲಿಂಗ, ಪ್ರಜಾಪ್ರಗತಿ ಪತ್ರಿಕೆ ಸಂಪಾದಕರಾದ ನಾಗಣ್ಣ ಸೇರಿ‌ ಹಲವು ಪ್ರಮುಖರು ಉಪಸ್ಥಿತರಿದ್ದರು