by gadi@dmin | Nov 17, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ರಾಜ್ಯ
ಮನುಷ್ಯನ ಎಲ್ಲ ಪ್ರಶ್ನೆಗಳಿಗೂ ವಚನದಲ್ಲಿ ಉತ್ತರ ಇದೆ : ಬಸವರಾಜ ಬೊಮ್ಮಾಯಿ
ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಬಸವಣ್ಣ ಪ್ರೇರಣೆ : ಬಸವರಾಜ ಬೊಮ್ಮಾಯಿ
ಬೆಂಗಳೂರು: ಮನುಷ್ಯನ ಎಲ್ಲ ಪ್ರಶ್ನೆಗಳಿಗೂ ವಚನದಲ್ಲಿ ಉತ್ತರ ಇದೆ. ಕಳಬೇಡ ಕೊಲಬೇಡ ಎನ್ನುವುದು ನಮ್ಮ ಧ್ಯೇಯವಾಗಬೇಕು. ಅದನ್ನು ಪಾಲಿಸಿದರೆ ಮನುಷ್ಯ ಸಂತೋಷ ಮತ್ತು ಸಮಾಧಾನದಿಂದ ಸರಳ ಜೀವನ ನಡೆಸಬಹುದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಇಂದು ಬೆಂಗಳೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಹಾಗೂ ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶರಣ ಸಾಹಿತ್ಯ ವಚನದ ರೂಪದಲ್ಲಿ ಬರದೇ ಇದ್ದರೆ ಕನ್ನಡ ಸಾಹಿತ್ಯ ಎಷ್ಟು ಬಡವಾಗುತ್ತಿತ್ತು ಎಂದು ಎಲ್ಲರೂ ಯೋಚನೆ ಮಾಡಬೇಕಿದೆ. ಮಾತಿಗೆ ಅರ್ಥ ಬರಬೇಕಾದರೆ ನಡೆ ನುಡಿ ಬಹಳ ಮುಖ್ಯ, ಜ್ಞಾನ, ವಿಜ್ಞಾನ ತಂತ್ರಜ್ಞಾನ ಎಲ್ಲವೂ ಇದೆ. ಅದರಲ್ಲಿ ನಮ್ಮ ತನದ ಭಾವ ಮೂಡಬೇಕಿರುವುದು ಮುಖ್ಯವಾಗಿದೆ. ವಚನಗಳು ಶುದ್ದ ಕನ್ನಡದಲ್ಲಿ ಶರಣರು ಕರ್ನಾಟಕಕ್ಕೆ ಕೊಟ್ಟಿರುವ ಶಾಸ್ವತ ಕೊಡುಗೆಯಾಗಿದೆ ಎಂದು ಹೇಳಿದರು.
ಇವನಾರವ ಇವನಾರವ ಎನ್ನುವ ಬದಲು ಇವನಮ್ಮವ ಎನ್ನುವ ವಚನದಲ್ಲಿ ಸಮಾನತೆ ಅಡಗಿದೆ. ದಯವೇ ಧರ್ಮದ ಮೂಲವಯ್ಯ ಎನ್ನುವ ವಚನದಲ್ಲಿ ಧರ್ಮದ ಸಾರ ಅಡಗಿದೆ. ಬಸವಣ್ಣನವರು ತಾವಷ್ಟೇ ವಚನ ಸಾಹಿತ್ಯ ನೀಡದೇ ಎಲ್ಲ ಸಮುದಾಯಗಳ ಅನುಭವಗಳನ್ನು ವಚನಗಳ ಮೂಲಕ ತರುವ ಪ್ರಯತ್ನ ಮಾಡಿದ್ದಾರೆ. ಬಸವಣ್ಣನವರು ದೇವರು ಮತ್ತು ಮನುಷ್ಯರ ನಡುವೆ ಮಧ್ಯವರ್ತಿಗಳನ್ನು ತೆಗೆದು ಹಾಕಿದ್ದಾರೆ. ಇದು ಬಹಳ ಚಿಂತನೆ ಮಾಡುವ ವಿಚಾರ. ನಾನು ಮತ್ತು ನನ್ನ ಆತ್ಮಸಾಕ್ಷಿಯ ನಡುವೆ ಯಾರೂ ಬೇಕಾಗಿಲ್ಲ ಅಂತ ಹೇಳಿದ್ದಾರೆ ಎಂದರು.
ಕ್ಷಣ ಹೊತ್ತು ಅಣಿ ಮುತ್ತು ಕೃತಿಕಾರ ಷಡಕ್ಷರಿಯವರು ಎಂದೂ ಕೂಡ ಅಸಮಾಧಾನಗೊಂಡಿಲ್ಲ. ಅವರು ಯಾವಾಗಲೂ ಸಮಾಧಾನದಿಂದ ಎಲ್ಲರೊಂದಿಗೆ ಬೆರೆಯುವ ಗುಣ ಅನುಕರಣೀಯ ಎಂದರು.
ಸಿದ್ದರಾಮಯ್ಯ ಅವರ ನಡೆ ಭಿನ್ನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಮೂಲ ಪ್ರೇರಣ ಬಸವಣ್ಣ ಮತ್ತು ವಚನ ಸಾಹಿತ್ಯ. ಅವರು ಬಸವಣ್ಣನವರ ತತ್ವಗಳನ್ನು ನಂಬಿದವನು ಎಂದು ಬಲವಾಗಿ ಹೇಳುತ್ತಾರೆ. ಹೀಗಾಗಿ ಅವರ ಕೆಲಸಗಳು ಮತ್ತು ನಡೆ ಎಲ್ಲರಿಗಿಂತ ಬಿನ್ನವಾಗಿ ಕಾಣುತ್ತದೆ. ಸಮಾಜದ ತುಳಿತಕ್ಕೊಳಗಾದವರ ಸಮಾನತೆಗಾಗಿ ನಿರಂತರವಾಗಿ ಕೆಲಸ ಮಾಡುವುದೇ ಒಬ್ಬ ನಿಜವಾದ ನಾಯಕನ ಜವಾಬ್ದಾರಿ. ರಾಜಕಾರಣಿಯ ಕಣ್ಣು ಮುಂದಿನ ಚುನಾವಣೆಯ ಮೇಲೆ ಇದ್ದರೆ, ಒಬ್ಬ ಸ್ಟೇಟ್ಸ್ ಮನ್ ಕಣ್ಣು ಮುಂದಿನ ಜನಾಂಗದ ಮೇಲೆ ಇದೆ. ನಾವು ವಿರೋಧ ಪಕ್ಷದಲ್ಲಿ ಇದ್ದರೂ ಕೂಡ ಸಿದ್ದರಾಮಯ್ಯ ಅವರ ಈ ವಿಚಾರಧಾರೆಯನ್ನು ನಾವು ಮೊದಲಿನಿಂದಲೂ ನೋಡಿಕೊಂಡು ಬಂದಿದ್ದೇವೆ. ಅವರ ನಡೆ ನುಡಿ ಎಲ್ಲರಿಗೂ ಅರ್ಥವಾಗಿದೆ. ಅವರಿಂದ ಶರಣ ಸಾಹಿತ್ಯ ಪ್ರಶಸ್ತಿ ನೀಡಿರುವುದು ಅತ್ಯಂತ ಸೂಕ್ತವಾಗಿದೆ. ಇದರಿಂದ ಅವರಲ್ಲಿ ಇನ್ನಷ್ಟು ಬಸವ ತತ್ವ ವಿಚಾರಗಳು ಗಟ್ಟಿಯಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ವಿ.ಸೋಮಣ್ಣ, ಕೃತಿಕಾರ ಷಡಕ್ಷರಿ ಸೇರಿದಂತೆ ಗಣ್ಯರು ಹಾಜರಿದ್ದರು.
by gadi@dmin | Nov 17, 2023 | Home Page - Highlights ( Red Background ), Top ಸುದ್ದಿಗಳು, ರಾಜ್ಯ
ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ಅಂತರವೇ ಇಲ್ಲವಾಗಿದೆ
ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು: ಕೆ.ವಿ.ಪ್ರಭಾಕರ್
ಬೆಂಗಳೂರು ನ 16: ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು. ಬಳಸಿಕೊಳ್ಳುವವರ ಮನಸ್ಥಿತಿಗೆ ತಕ್ಕಂತೆ ಫಲಿತಾಂಶ ಇರುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಕೃತಕ ಬುದ್ಧಿಮತ್ತೆಯ ಕಾಲಘಟ್ಟದಲ್ಲಿ ಮಾಧ್ಯಮಗಳು ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿಗೆ ರಶ್ಮಿಕಾ ಮಂದಣ್ಣ ಮತ್ತು ಕತ್ರಿನಾ ಕೈಫ್ ಅವರ ಡೀಪ್ ಫೇಕ್ ವಿಡಿಯೊ ವೈರಲ್ ಆಗಿತ್ತು. ಅದು ಫೇಕ್ ಎಂದು ಗೊತ್ತಾಗುವುದರೊಳಗೆ ಅದನ್ನು ಲಕ್ಷಾಂತರ ಮಂದಿ ಅಸಲಿ ಎಂದೇ ನಂಬಿ ಬಿಟ್ಟಿದ್ದರು. ರಶ್ಮಿಕಾ ಅವರ ಬದಲಿಗೆ ಯಾವುದೋ ಧಾರ್ಮಿಕ ನಾಯಕರ, ರಾಜಕೀಯ ನಾಯಕರ ಡೀಪ್ ಫೇಕ್ ವಿಡಿಯೊ ಹಾಕಿ ನಕಲಿ ಸಂದೇಶ ಕೊಟ್ಟಿದ್ದರೆ ಅದು ನಕಲಿ ಎಂದು ಗೊತ್ತಾಗುವುದರೊಳಗೆ ಭಾರೀ ಅನಾಹುತಗಳನ್ನು ಮಾಡಿ ಬಿಡುತ್ತಿತ್ತು. ಹೀಗಾಗಿ ಯಾವುದೇ ತಂತ್ರಜ್ಞಾನ ಅದನ್ನು ಯಾರು ಬಳಸುತ್ತಾರೆ ಎನ್ನುವುದರ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ ಎಂದರು.
ಪತ್ರಿಕೋದ್ಯಮ ತನ್ನ ವೇಗದಲ್ಲಿ ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ವ್ಯತ್ಯಾಸವನ್ನೇ ಅಳಿಸಿಬಿಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಈಗ ಪತ್ರಿಕೋದ್ಯಮದಲ್ಲಿ ಊಹಾ ಪತ್ರಿಕೋದ್ಯಮ ಎನ್ನುವ ಅನಾಹುತಕಾರಿ ಬೆಳವಣಿಗೆ ಶುರುವಾಗಿದೆ. ಈ ಊಹೆಗೆ ಮಿತಿಯೇ ಇಲ್ಲ. ಕಣ್ಣ ಮುಂದಿರುವ ಸತ್ಯವನ್ನು ತನಗೆ ಬೇಕಾದಂತೆ ಊಹಾ ಪತ್ರಿಕೋದ್ಯಮ ಚಿತ್ರಿಸುತ್ತಿದೆ ಎಂದರು.
ನಿತ್ಯದ ಅಗತ್ಯ ವಸ್ತು ಸಂಗತಿಗಳಲ್ಲಿ ಪತ್ರಿಕೆಗಳೂ ಸೇರಿವೆ. ಪತ್ರಿಕೆಗಳ ವಿಶ್ವಾಸಾರ್ಹತೆ ಉಳಿದ ಮಾಧ್ಯಮಗಳಿಗಿಂತ ಹೆಚ್ಚಾಗಿದೆ. ಹೀಗಾಗಿ ಇತರೆ ಯಾವುದೇ ಮೂಲದಿಂದ ಸುದ್ದಿ ಬಂದರೂ ಅದರ ಸತ್ಯಾಸತ್ಯತೆಗೆ ಜನ ಪತ್ರಿಕೆಗಳ ಮೇಲೆ ಅಬಲಂಬಿತರಾಗಿದ್ದಾರೆ. ಸಮಾಜ ಮತ್ತು ಸರ್ಕಾರದ ನಡುವೆ ಪತ್ರಿಕೆಗಳು ಸೇತುವೆ ಇದ್ದಂತೆ ಎಂದು ಅಭಿಪ್ರಾಯಪಟ್ಟರು.
ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ವಿಜ್ಞಾನ ಬರಹಗಾರರಾದ ನಾಗೇಶ್ ಹೆಗ್ಡೆ, ತಂತ್ರಜ್ಞಾನ ವಿಶ್ಲೇಷಕ ಶ್ರೀನಿಧಿ ಮತ್ತು ಕಾವ್ಯಶ್ರೀ, ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ರೂಪ ಸೇರಿ ಹಲವರು ಉಪಸ್ಥಿತರಿದ್ದರು.
by gadi@dmin | Nov 17, 2023 | Home Page - Highlights ( Red Background ), Top ಸುದ್ದಿಗಳು, ರಾಜ್ಯ
ಹಾಲಿ ಮಾಜಿ ಹಳೇ ಸ್ನೇಹಿತರು ಒಂದಾದ ಸಮಯ..,
ಸಿದ್ದರಾಮಯ್ಯ, ಬಸವರಾಜ್ ಬೊಮ್ಮಾಯಿ ಮತ್ತು ಸೋಮಣ್ಣ ರವರು
ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭದ ಸಂದರ್ಭದಲ್ಲಿ ಮುಖಾಮುಖಿಯಾಗ ಹಳೇ ಸ್ನೇಹಿತರುಗಳು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಮತ್ತು ಸೋಮಣ್ಣ ರವರು. ಹಳೇದಿನಗಳನ್ನು ಮೆಲಕು ಹಾಕಿದರು.
ಅದೊಂದು ಕಾಲ ಸುವರ್ಣ ಕಾಲವಿತ್ತು ಎಲ್ಲರೂ ಒಂದೇ ಪಟಾಲಂ ನಲ್ಲಿ ಇದ್ದರು.
by gadi@dmin | Nov 17, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ರಾಜ್ಯ
ನಮಗೆ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ ಅಲ್ಪ ಮಾನವರು ಮಾತ್ರ ಆಗಬಾರದು
ಬೆಂಗಳೂರು ನ 16: ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿಯನ್ನು ಬಿಡುಗಡೆ ಮಾತನಾಡಿದರು.
ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂಥಾ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು ಕರೆ ನೀಡಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು. ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ , ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು ಎಂದರು.
ದ್ವೇಷ, ವೈರತ್ವ , ಸೇಡು ಮನುಷ್ಯನ ಗುಣ ಅಲ್ಲ. ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ವಿವರಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ, ಸಾಹಿತಿ ಗೋ.ರು.ಚನ್ನಬಸಪ್ಪ , ರಮಣಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್.ಷಡಕ್ಷರಿ, ಸಂಪಾದಕರುಗಳಾದ ವಿಶ್ವೇಶ್ವರ್ ಭಟ್ ಮತ್ತು ರವಿ ಹೆಗಡೆ , ಲೇಖಕಿ ವೀಣಾ ಬನ್ನಂಜೆ, ಮನು ಬಳಿಗಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
by gadi@dmin | Nov 15, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು
50ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ. ದಾಖಲೆ ನಿರ್ಮಾಣ
ಇಂದು ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ನಲ್ಲಿ ಶತಕ ಸಿಡಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲೀ. ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಠಿಸಿದ್ದಾರೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿದರು. ಈ ಮೂಲಕ 49 ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.
ಪ್ರಸ್ತುತ ವಿರಾಟ್ ಕೊಹ್ಲಿ 113 ಬಾಲ್ ಗೆ 117 ರನ್ ಗಳಿಸಿ ಔಟ್ ಆಗಿದ್ದಾರೆ. ಇಂಡಿಯಾ 43 ಓವರ್ ಗಳಲ್ಲಿ 214 ರನ್ ಬಾರಿಸಿದೆ.
by gadi@dmin | Nov 15, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ರಾಜ್ಯ
ಭಾಜಪ ದ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ
ಬೆಂಗಳೂರು,15. ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ಪದಗ್ರಹಣ
ಸಮಾರಂಭ ಜರುಗಿತು. ಪದಗ್ರಹಣ ಮಾಡಿ ಮಾತನಾಡಿದ ನೂತನ ಅಧ್ಯಕ್ಷರು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಎಲ್ಲರ ವಿಶ್ವಾಸ ಉಳಿಸಿಕೊಳ್ಳುತ್ತೇನೆ. ಎಲ್ಲ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸ ಇಟ್ಟು ಪಕ್ಷ ಅಧಿಕಾರ ನೀಡಿದೆ. ಆ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ.
ಸಮಾರಂಭದಲ್ಲಿ ಪಕ್ಷದ ಹಿರಿಯರು ಹಾಗೂ ಮಾಜಿ ಸಭಾಪತಿ ಡಿ ಹೆಚ್ ಶಂಕರಮೂರ್ತಿ ಅವರು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು, ಮಾಜಿ ಸಚಿವರಾದ ರಾಮಚಂದ್ರೇಗೌಡ ಅವರು, ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಹಾಗೂ ಮಾಜಿ ಸಚಿವರು, ಶಾಸಕರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.