ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಕಾನೂನು ಬೆಂಬಲ ನೀಡಿ- ಮುಖ್ಯಮಂತ್ರಿಯವರಿಗೆ ಡಾ.ಪುರುಷೋತ್ತಮ ಬಿಳಿಮಲೆ ಒತ್ತಾಯ.

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಕಾನೂನು ಬೆಂಬಲ ನೀಡಿ- ಮುಖ್ಯಮಂತ್ರಿಯವರಿಗೆ ಡಾ.ಪುರುಷೋತ್ತಮ ಬಿಳಿಮಲೆ ಒತ್ತಾಯ.

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಕಾನೂನು ಬೆಂಬಲ ನೀಡಿ- ಮುಖ್ಯಮಂತ್ರಿಯವರಿಗೆ ಡಾ.ಪುರುಷೋತ್ತಮ ಬಿಳಿಮಲೆ ಒತ್ತಾಯ.

ಬೆಂಗಳೂರು, 19-ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರಕ್ಕೆ ಸಲ್ಲಿಸಿರುವ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಶೀಘ್ರವಾಗಿ ಕಾನೂನು ಬಲ ದೊರಕಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಡಾ. ಬಿಳಿಮಲೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇಂದಿನ ಜಾಗತೀಕರಣ ಕಾಲಘಟ್ಟಕ್ಕೆ ಅನುಗುಣವಾದ ಕನ್ನಡ ಪರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಕನ್ನಡದ ಉಳಿವಿನ ದೃಷ್ಠಿಯಿಂದ ಇದು ಮಹತ್ವದ ವರದಿಯಾಗಿದೆ ಎಂದಿದ್ದಾರೆ.

ಈ ವರದಿಯಲ್ಲಿ ಖಾಸಗಿ ವಲಯದ ವಿವಿಧ ವರ್ಗಗಳ ಹುದ್ದೆಗಳಲ್ಲಿ ಕನ್ನಡಿಗರಿಗೆ ಆದ್ಯತೆ; ರಾಜ್ಯದಲ್ಲಿ ವ್ಯವಹರಿಸುವ ಬ್ಯಾಂಕುಗಳಲ್ಲಿ ನೇಮಕ ಹೊಂದುವ ಅಭ್ಯರ್ಥಿಗಳಿಗೆ ಕನ್ನಡದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಷರತ್ತು; ಸರ್ಕಾರಿ ವಲಯದ ಉದ್ಯಮಗಳಲ್ಲಿ ಕನ್ನಡಿಗರ ಆದ್ಯತೆಯ ಆಯ್ಕೆ, ಅಪ್ರೆಂಟಿಸ್ ಆಯ್ಕೆಯಲ್ಲಿ, ಕಾರ್ಮಿಕರ, ಗುತ್ತಿಗೆ, ದಿನಗೂಲಿ ನೌಕರರ ನೇಮಕಾತಿಗಳಲ್ಲಿ ಕೇವಲ ಕನ್ನಡಿಗರಿಗೆ ಅವಕಾಶ, ತಂತ್ರಜ್ಞಾನ ಬೆಳವಣಿಗೆಗೆ ಅನುಗುಣವಾಗಿ ಉದ್ಯೋಗ ತರಬೇತಿಗೆ  ಪ್ರತ್ಯೇಕ ತಾಂತ್ರಿಕ ಸಲಹಾ ಮಂಡಳಿ ಸ್ಥಾಪನೆ;  ನಾಮಫಲಕಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ, ಕೇಂದ್ರ ಪಠ್ಯಕ್ರಮ ಶಿಕ್ಷಣದಲ್ಲಿ 1 ರಿಂದ10ನೇ ತರಗತಿಯವರೆಗೆ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಿಕೆ ಸೇರಿದಂತೆ ಒಟ್ಟು 14 ಅನುಷ್ಠಾನ ಯೋಗ್ಯ ಅಂಶಗಳಿದ್ದು ಮುಂದಿನ ಅಧಿವೇಶನದಲ್ಲಿ ಪ್ರಾಧಿಕಾರದ ವರದಿಯನ್ನು ಮಂಡಿಸಿ ರಾಜ್ಯ ಸರ್ಕಾರದ ಕನ್ನಡ ಬದ್ಧತೆಯನ್ನು  ಸ್ಥಿರೀಕರಿಸಬೇಕೆಂದು ಡಾ.ಬಿಳಿಮಲೆ ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಶಿವರಾಜ ತಂಗಡಗಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಡಾ.ಸಂತೋಷ ಹಾನಗಲ್ಲ ಮತ್ತಿತರರು ಇದ್ದರು.

ಕ್ರೀಡೆ ವಿಶ್ವಮಾನವ ಸಂದೇಶ ಸಾರುವ ಕ್ಷೇತ್ರ: ಡಾ.ಹೆಚ್.ಸಿ.ಮಹದೇವಪ್ಪ

ಕ್ರೀಡೆ ವಿಶ್ವಮಾನವ ಸಂದೇಶ ಸಾರುವ ಕ್ಷೇತ್ರ: ಡಾ.ಹೆಚ್.ಸಿ.ಮಹದೇವಪ್ಪ

ಕ್ರೀಡೆ ವಿಶ್ವಮಾನವ ಸಂದೇಶ ಸಾರುವ ಕ್ಷೇತ್ರ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು,ನ.2: ಕ್ರೀಡೆಯು ವಿಶ್ವಮಾನವ ಸಂದೇಶ ಸಾರುವ ಕ್ಷೇತ್ರವಾಗಿದ್ದು, ಎಲ್ಲಾ ಸೀಮಾರೇಖೆಗಳನ್ನು ಮೀರಿ ಕ್ರೀಡೆಯನ್ನೇ ಒಂದು ಮನೋಧರ್ಮವಾಗಿ ಬೆಳಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸರ್ಕಾರಿ ಸಿ.ಪಿ.ಸಿ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಗುರುವಾರ ಚಾಮುಂಡಿ ವಿಹಾರ ಕ್ರಿಡಾಂಗಣದಲ್ಲಿ ಆಯೋಜಿಸಿದ್ದ 44ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಮೈಸೂರಿನಲ್ಲಿ ಅದ್ಧೂರಿ ದಸರೆ ನಂತರ ರಾಜ್ಯಮಟ್ಟದ ಅದ್ಧೂರಿ ಅಂತರ ಕ್ರೀಡಾಕೂಟ ನಡೆಯುತ್ತಿರುವುದು ಅತ್ಯಂತ ಸಂತೋಷದ ವಿಚಾರ. ಕ್ರೀಡೆ ಎಂಬುದು ಮನುಷ್ಯನಿಗೆ ಅತ್ಯಂತ ಉತ್ಸಾಹದಾಯಕ ಕ್ಷೇತ್ರವಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವವರು ಸದಾ ಮಾನವೀಯ ಮೌಲ್ಯಗಳು ಹಾಗೂ ಉತ್ತಮ ಸ್ನೇಹ ಸಂಬಂಧಗಳನ್ನು ಹೊಂದಿರುತ್ತಾರೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ 97 ಕಾಲೇಜುಗಳಿಂದ 2221 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರದಲ್ಲಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಕೆ.ಎಂ.ಸುರೇಶ್ ಕುಮಾರ್, ಜಂಟಿ ನಿರ್ದೇಶಕ ಜಿ.ಶ್ರೀಕಾಂತ್, ಉಪ ನಿರ್ದೇಶಕಿ ಎಸ್ .ಮಂಜುಳಾ, ಸಹಾಯಕ ನಿರ್ದೇಶಕ ದೊಡ್ಡಮನಿ, ಅಭಿವೃದ್ದಿ ಅಧಿಕಾರಿ ಡಾ.ಮಾರುತಿ, ಸಿ.ಪಿ.ಸಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರಿಗೆ ಸಿದ್ದರಾಮಯ್ಯ ಅಭಯ

ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರಿಗೆ ಸಿದ್ದರಾಮಯ್ಯ ಅಭಯ

ಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕುವ ಅಗತ್ಯವಿದೆ

ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಬೆಂಗಳೂರು, ಸೆಪ್ಟೆಂಬರ್ 29: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಇಂದು ನಡೆದ ಮಹತ್ವದ ಸಭೆಯಲ್ಲಿ   ಅವರು ಪ್ರತಿಕ್ರಿಯಿಸಿದರು.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು  ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ  284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ವಿವರಿಸಿದರು.

ಪ್ರತಿ ಬಾರಿ ಸಭೆ ಕರೆದಾಗಲೂ  ಪ್ರತಿಭಟಿಸುತ್ತಲೇ ಬಂದಿದ್ದೇವೆ

ಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ.  ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ.  30 ಟಿ ಎಂಸಿ ಕುಡಿಯುವ ನೀರಿಗೆ ಅಗತ್ಯ. ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ವಿವರಿಸಿದರು.

ಇಂದು ಸಂಜೆ ಸಭೆ

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಇಂದು ಸಂಜೆ  ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ  ವಶಕ್ಕೆ ಪಡೆಯಬಹುದು, contempt of court ಆಗುತ್ತದೆ, ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದು ಪರಿಸ್ಥಿತಿಯನ್ನು ವಿವರಿಸಿದರು.

ಸಭೆಯಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್ ಅವರು  ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಬೀಳುತ್ತಿದೆ.  ಜನ ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘಟನೆಗಳು ಜನಪರವಾಗಿ ಹೋರಾಟ ಮಾಡಿದಾಗ ಅವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿ ಮಾಡಿದರು. ಮೇಕೆದಾಟು ಯೋಜನೆಗೆ  ಶೀಘ್ರ ಕಾಯಕಲ್ಪ ನೀಡಬೇಕೆಂದು  ಒತ್ತಾಯಿಸಿದರು.

ಮುಖ್ಯಮಂತ್ರಿ ಚಂದ್ರು ಮಾತನಾಡಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ಲೋಪ ಎಲ್ಲಿ ಆಗಿದೆ ಎಂದು ಸ್ಪಷ್ಟಪಡಿಸಬೇಕು.  ನಮ್ಮ ಹಕ್ಕೊತ್ತಾಯವನ್ನು ತಮಿಳುನಾಡಿನಂತೆಯೇ ತೀವ್ರವಾಗಿ ಮಾಡಬೇಕು. ಸಂಕಷ್ಟ ಪರಿಹಾರ ಸೂತ್ರ ಇಲ್ಲದಿದ್ದರೂ ನೀರು ಬಿಡುವಂತೆ ಸೂಚಿಸುವುದು  ತಪ್ಪು. ಆದೇಶ ಉಲ್ಲಂಘನೆ ಮಾಡಿದರೆ ಏನಾಗುತ್ತದೆ ಎಂದು ಪಟ್ಟಿ ಮಾಡಬೇಕು ಎಂದು ಹೇಳಿದರು.  ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡು ಬೆಳೆಗೆ

ನೀರು ಕೇಳುತ್ತಿದೆ.  ತಕ್ಷಣ ಸದನ ಕರೆದು ಈ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸಂಜೆ ತಜ್ಞರ ತಂಡದ ಜತೆಗೂ ಚರ್ಚಿಸಲಾಗುವುದು. ಬಳಿಕ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಿಯೋಗದಲ್ಲಿ ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.