ರಾಷ್ಟ್ರೀಯ ಸಂವಹನ ಕಾಂಗ್ರೆಸ್ (ಎನ್.ಸಿ.ಸಿ.)ನ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿ.ಕೆ. ರವಿ ಆಯ್ಕೆ

ಕೊಪ್ಪಳ,  ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿಯವರು ರಾಷ್ಟ್ರೀಯ ಸಂವಹನ ಕಾಂಗ್ರೆಸ್ (National Communication Congress)ನ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.​

ದೇಶದ ಮಾಧ್ಯಮ ವಿದ್ವಾಂಸರು, ಸಂವಹನ ತಜ್ಞರು, ಮಾಧ್ಯಮ ಶಿಕ್ಷಕರು, ಸಂಶೋಧಕರು ಮತ್ತು ಭಾರತೀಯ ಮಾಧ್ಯಮದ ವೃತ್ತಿಪರರನ್ನು ಒಳಗೊಂಡಿರುವ ರಾಷ್ಟ್ರೀಯ ಸಂವಹನ ಕಾಂಗ್ರೆಸ್, ರಾಷ್ಟ್ರದಾದ್ಯಂತ ಮಾಧ್ಯಮಕ್ಕೆ ಸಂಬಂಧಿಸಿದ ವಿಚಾರ ಸಂಕಿರಣಗಳು, ಸಮ್ಮೇಳನಗಳು, ಪ್ರಕಟಣೆಗಳು, ತರಬೇತಿ ಹಾಗೂ ಸಂಶೋಧನೆಗಳನ್ನು ನಡೆಸಲಿದೆ. ​ಭಾರತೀಯ ಮಾಧ್ಯಮ ಶಿಕ್ಷಣ ಹಾಗೂ ಭಾರತೀಯ ಮಾಧ್ಯಮ ಉದ್ಯಮದ ನಡುವೆ ಸಂಪರ್ಕ ಸಾಧಿಸುವ ಸೇತುವೆಯಾಗಿ ಎನ್.ಸಿ.ಸಿ. ಕಾರ್ಯನಿರ್ವಹಿಸಲಿದೆ.​

ಕೊಲ್ಕತ್ತ, ಶಾಂತಿನಿಕೇತನದ ವಿಶ್ವಭಾರತಿ ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸ್ಥಾನ ಹೊಂದಿರುವ ಎನ್.ಸಿ.ಸಿ.ಯ ಅಧ್ಯಕ್ಷರಾಗಿ ವಿಶ್ವಭಾರತಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಬಿಪ್ ಲ್ಯಾಬ್ ಲೋಹಾ ಚೌಧುರಿ; ಉಪಾಧ್ಯಕ್ಷರಾಗಿ ಮಕನ್ ಲಾಲ್ ಚತುರ್ವೇದಿ ರಾಷ್ಟ್ರೀಯ ಪತ್ರಿಕೋದ್ಯಮ ಮತ್ತು ಸಂವಹನ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಜಿ. ಸುರೇಶ್ ಹಾಗೂ ಮಹಾಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ವರ ಉಕ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಉಪೇಂದ್ರ ಪಾಢಿ ಚುನಾಯಿತರಾಗಿದ್ದಾರೆ.

Share this :